ಆರ್‌ಸಿಇಪಿ ಒಪ್ಪಂದ: ಲಾಭಕ್ಕಿಂತ ನಷ್ಟವೇ ಹೆಚ್ಚು
Team Udayavani, Nov 5, 2019, 3:00 AM IST
ಅರಸೀಕೆರೆ: ದೇಶದ ಕೃಷಿ, ಹೈನುಗಾರಿಕೆ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿರುವ ಆರ್‌ಸಿಇಪಿ(ಮುಕ್ತ ವ್ಯಾಪಾರ ) ಒಪ್ಪಂದ ದೇಶದ ಆರ್ಥಿಕ ವ್ಯವಸ್ಥೆಯ ಮೇಲೆ ಲಾಭಕ್ಕಿಂತ ಹೆಚ್ಚಿನ ನಷ್ಟಕ್ಕೆ ಕಾರಣವಾಗಲಿದ್ದು, ಕೃಷಿಕರು ತೀವ್ರ ಸಂಕಷ್ಟಗಳಿಗೆ ಒಳಗಾಗುತ್ತಾರೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಕಣಕಟ್ಟೆ ಹೋಬಳಿಯ ಹೊಳಲಕೆರೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಶೇ.70ಕ್ಕೂ ಹೆಚ್ಚಿನ ಜನತೆ ಕೃಷಿ ಮತ್ತು ಅದಕ್ಕೆ ಪೂರಕವಾದ ಹೈನುಗಾರಿಕೆಯ ಮೇಲೆ ಅವಲಂಬಿತರಾಗಿದ್ದಾರೆ. ತಾಲೂಕಿನಲ್ಲಿ ಶೇ.43 ಮಂದಿ ಹೈನುಗಾರಿಕೆ ಮತ್ತು ಪಶು ಸಂಗೋಪನೆ ಮೂಲಕ ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿದರೆ ದೇಶದ ಅರ್ಧಕ್ಕೂ ಹೆಚ್ಚಿನ ಜನ ಜೀವನದ ಮೇಲೆ ದುಷ್ಪರಿಣಾಮ ಬೀರಲಿದೆ. ಬಡವರ್ಗ ರೈತರು ಹಾಗೂ ಶ್ರಮಿಕ ವರ್ಗಕ್ಕೆ ಕಂಟಕ ಪ್ರಾಯವಾದ ಈ ನೀತಿಗೆ ತಾವು ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದರು.
ರೈತರ ಹಿತ ಕಾಪಾಡಲು ಕ್ರಮ: ತಾಲೂಕಿನ ರೈತರ ಹಿತದೃಷ್ಟಿಯಿಂದ ಕ್ಷೇತ್ರದ ಆಯ್ದ ಗ್ರಾಮಗಳಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಗಳನ್ನ ಸ್ಥಾಪಿಸಿ ರೈತರ ಹಿತ ಕಾಯಲಾಗುತ್ತಿದೆ ಎಂದ ಅವರು, ಹಾಲು ಉತ್ಪಾದಕರ ಸಹಕಾರದ ಸಂಘ ಮತ್ತು ಡೇರಿಗಳನ್ನ ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮಾಡೋಣ ಎಂದು ಕರೆ ನೀಡಿದರು.
ರೈತರಿಗೆ ಸೌಲಭ್ಯ ಕಲ್ಪಿಸಿದ ಶಾಸಕರು: ಜಿಲ್ಲಾ ಪಂಚಾಯಿತಿ ಸದಸ್ಯ ಮಾಡಾಳು ಸ್ವಾಮಿ ಮಾತನಾಡಿ, ರೈತ ಪರ ಚಿಂತಕರಾಗಿರುವ ಶಾಸಕ ಶಿವಲಿಂಗೇಗೌಡರು ಸರಕಾರದ ನಾನಾ ಇಲಾಖೆಗಳ ಮೂಲಕ ರೈತರಿಗೆ ದೊರೆಯುವ ಪ್ರತಿಯೊಂದು ಯೋಜನೆಯನ್ನು ಕ್ಷೇತ್ರಕ್ಕೆ ತಂದು ಆ ಮೂಲಕ ರೈತರ ಹಿತ ಕಾಯಲು ಶ್ರಮಿಸುತ್ತಿರುವುದು ಸಂತಸದ ವಿಷಯ ಎಂದರು. ಶಾಸಕರ ವಿಶೇಷ ಆಸಕ್ತಿಯ ಫಲದಿಂದಾಗಿ ಕ್ಷೇತ್ರಾದ್ಯಂತ ನಿರ್ಮಾಣಗೊಳ್ಳುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಡೈರಿಗಳು ಲಕ್ಷಾಂತರ ಜನರ ಆರ್ಥಿಕ ಪರಿಸ್ಥಿತಿಯ ಸುದಾರಣೆಗೆ ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಎಚ್.ಎಚ್. ಪುಷ್ಪಾ, ತಾಲೂಕು ಪಂಚಾಯಿತಿ ಸದಸ್ಯ ಸೋಮಶೇಖರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಶಶಿಧರ್, ರಾಂಪುರ ಗ್ರಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಗಂಗಮ್ಮ, ತಾಪಂ ಮಾಜಿ ಅಧ್ಯಕ್ಷ ನಂಜುಂಡಪ್ಪ, ತಾಲೂಕು ಭಗೀರಥ ಸಮಾಜದ ಅಧ್ಯಕ್ಷ ಮೈಲಾರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಬಯಲು ಸೀಮೆಗೆ ಹೈನುಗಾರಿಕೆ ವರದಾನ: ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಬಯಲು ಸೀಮೆ ತಾಲೂಕಿನ ಜನತೆಯ ಪಾಲಿಗೆ ಪಶು ಸಂಗೋಪನೆ ಮತ್ತು ಹೈನುಗಾರಿಕೆ ವರವಾಗಿದೆ. ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆ ಸಾಧ್ಯವಾಗದ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತ ಕುಟುಂಬಗಳು ಎರಡು ಹಸುಗಳನ್ನ ಸಾಕಿಕೊಂಡು ಹಾಲನ್ನ ಡೇರಿಗೆ ಹಾಕುವ ಮೂಲಕ ಸದ್ಯದ ಸಂಕಷ್ಟ ದಿನಗಳನ್ನ ದೂಡುತ್ತಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.