ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಜ್ಜು: ಬಿಇಒ
Team Udayavani, Jun 25, 2020, 6:28 AM IST
ಬೇಲೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ತಾಲೂಕಿನ 9 ಕೇಂದ್ರಗಳಲ್ಲಿ ಜೂ.25ರಿಂದ ಜು.4ರ ವರೆಗೆ ನಡೆಯಲಿದ್ದು, ಶಿಕ್ಷಣ ಇಲಾಖೆ ಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ತಿಳಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಕೊಠಡಿಗಳನ್ನು ಪರಿಶೀಲಿಸಿ ಮಾತ ನಾಡಿದ ಅವರು, 2,054 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು, ಇದರಲ್ಲಿ ಹೊರ ಜಿಲ್ಲೆ ಹಾಗೂ ಹೊರ ತಾಲೂಕುಗಳ 57 ವಿದ್ಯಾರ್ಥಿಗಲೂ ಸೇರಿದ್ದಾರೆ ಎಂದರು.
ಈಗಾಗಲೇ 9 ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಪ್ರತೀ ಕೊಠಡಿಗೆ 20 ವಿದ್ಯಾರ್ಥಿಗಳನ್ನು ಕೂರಿಸ ಲಾಗುವುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಶೀತ, ಜ್ವರ, ಕೆಮ್ಮು ಇರುವ ವಿದ್ಯಾರ್ಥಿ ಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ 576 ವಿದ್ಯಾರ್ಥಿಗಳು ಗ್ರಾಮೀಣ ಭಾಗಗಳಿಂದ ಬರುವುದರಿಂದ ಕೆಎಸ್ಸಾರ್ಟಿಸಿಯಿಂದ 27 ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗುವ ಮುಂಚೆ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಸ್ಯಾನಿಟೈಸ್ ಮಾಡಿಸಲಾಗುವುದು. ವಿದ್ಯಾರ್ಥಿಗಳಿಗೆ ಶಾಸಕರಾದ ಕೆ.ಎಸ್. ಲಿಂಗೇಶ್ , ಸ್ಕೌಟ್ಸ್ ಅಂಡ್ ಗೈಡ್ಸ್, ಸುರಭಿ ಫೌಂಡೇಷನ್ ವತಿ ಯಿಂದ ಮಾಸ್ಕ್ ಗಳನ್ನು ವಿತರಿಸಿದ್ದು ವಿದ್ಯಾರ್ಥಿಗಳಿಗೆ ಕೊಡಲಿದ್ದೇವೆ ಎಂದು ಹೇಳಿದರು. ಶಿಕ್ಷಣ ಸಂಯೋಜಕರಾದ ಹೇಮಂತ್, ಬಿಸಿಒ ರವಿಕುಮಾರ್, ಶಶಿಕಾಂತ್, ಪ್ರಾಂಶುಪಾಲ ಪ್ರಶಾಂತ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.