ಧರ್ಮ, ಸಂಸ್ಕೃತಿ ದೇಶದ ಭದ್ರ ಬುನಾದಿ


Team Udayavani, Aug 22, 2019, 3:00 AM IST

dharama

ಅರಸೀಕೆರೆ: ಮನುಷ್ಯ ಆಧುನಿಕತೆಯ ಯಾಂತ್ರಿಕ ಜೀವನಕ್ಕೆ ಮಾರುಹೋಗಿ ಆಧ್ಯಾತ್ಮಿಕ ಚಿಂತನೆ ಬಗ್ಗೆ ಹೆಚ್ಚಿನ ಆಸಕ್ತಿಯಿಲ್ಲದೇ ಸಮಾಜವನ್ನು ನಾಶ ಮಾಡಲು ಹೊರಟಿದ್ದಾನೆ ಎಂದು ತಾಲೂಕಿನ ದೊಡ್ಡಮೇಟಿ ಕುರ್ಕೆ ಗ್ರಾಮದ ಬೂದಿಹಾಳ್‌ ವಿರಕ್ತ ಮಠದ ಪೀಠಾಧ್ಯಕ್ಷರಾದ ಶಶಿಶೇಖರ ಸಿದ್ದಬಸವ ಸ್ವಾಮೀಜಿ ತಿಳಿಸಿದರು.

ತಾಲೂಕಿನ ದೊಡ್ಡಮೇಟಿಕುರ್ಕೆ ಗ್ರಾಮದ ಬೂದಿಹಾಳ್‌ ವಿರಕ್ತ ಮಠದ ಲಿಂಗೈಕ್ಯ ರಾಜಶೇಖರ ಸ್ವಾಮಿಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ 10 ನೇ ಸಂಕಷ್ಠ ಚತುರ್ಥಿ ಮತ್ತು ಸುಜ್ಞಾನ ಗೋಷ್ಠಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನುಷ್ಯ ಆಧುನಿಕತೆಯ ವಿಲಾಸೀ ಜೀವನಕ್ಕೆ ಮಾರು ಹೋಗಿ ಸುಖ, ಶಾಂತಿ, ನೆಮ್ಮದಿಯನ್ನೇ ಹಾಳು ಮಾಡಿಕೊಳ್ಳುತ್ತಿದ್ದಾನೆ. ತಂದೆ, ತಾಯಿ, ಗುರು, ಹಿರಿಯರು, ಬಂಧು, ಬಳಗ ಸಂಬಂಧಗಳನ್ನು ಮರೆಯುವ ಜೊತೆಗೆ ಧಾರ್ಮಿಕ ನೆಲೆಗಟ್ಟು ಆಧ್ಯಾತ್ಮಿಕ ಚಿಂತನೆಯ ನಮ್ಮ ಸಂಸ್ಕೃತಿಯ ನ್ಯಾಯ, ನೀತಿ, ಧರ್ಮಗಳನ್ನು ದೂರ ಮಾಡಿ ಸಮಾಜ ಸರ್ವನಾಶಕ್ಕೆ ಹೊರಟಿದ್ದಾನೆ ಎಂದರು.

ನೆಮ್ಮದಿಗಾಗಿ ಹುಡುಕಾಟ: ಮುಂದೆ ಒಂದು ದಿನ ಇದೇ ಮನುಷ್ಯ ನೆಮ್ಮದಿಯ ಬದುಕಿನ ಕಡೆ ಗಮನ ಹರಿಸುವ ಕಾಲ ಸನಿಹದಲ್ಲೇ ಬರಲಿದೆ ಆಗ ಅವನ ನೆಮ್ಮದಿ ಹುಡುಕಾಟವೇ ನಮ್ಮ ಭಾರತದ ಸನಾತನ ಹಿಂದೂ ಧರ್ಮದ ಸಂಸ್ಕೃತಿಯ ಆಧ್ಯಾತ್ಮಿಕ ಚಿಂತನೆಯ ನೆಲೆಗಟ್ಟು ನಮ್ಮ ದೇಶದ ಬುನಾದಿ ಆಗಿರುತ್ತದೆ.

ಅಷ್ಠಲ್ಲದೇ ಇಡೀ ಜಗತ್ತೇ ನಮ್ಮ ದೇಶದ ಕಡೆ ನೋಡುವಂತಾಗುತ್ತದೆ ಏಕೆಂದರೆ ಜಗತ್ತಿನಲ್ಲಿ ವಿಜ್ಞಾನ ಎಷ್ಟೇ ಆವಿಷ್ಕಾರಗಳಿಂದ ಮುಂದುವರಿದರೂ ಎಲ್ಲವೂ ನಾಶವಾಗಬಹುದು ಆದರೆ ನಮ್ಮ ದೇಶಕ್ಕೆ ಯಾವುದೇ ಹಾನಿ ಆಗಲಾರದು ಕಾರಣ ಜಗತ್ತಿನ ಯಾವ ರಾಷ್ಟ್ರದಲ್ಲೂ ಇಲ್ಲದಂತಹ ದೈವಿ ಶಕ್ತಿ ನಮ್ಮ ಭಾರತ ಮಾತೆಯ ಒಡಲಿನಲ್ಲಿದ್ದು, ಅದೇ ಹಿಂದೂ ಧರ್ಮದ ಜೀವಾಳವಾಗಿದ್ದು, ನಮ್ಮ ದೇಶದ ನೆಲ ಜಲದಲ್ಲಿ ಅಂತಹ ಅದ್ಬುತ ಶಕ್ತಿಯನ್ನು ತುಂಬಿದೆ ಎಂದು ಹೇಳಿದರು.

ಧಾರ್ಮಿಕ ಪ್ರಜ್ಞೆ: ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಎಡೆಯೂರಿನ ಬಾಳೆಹೊನ್ನೂರು ಶಾಖಾ ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬೂದಿಹಾಳ್‌ ವಿರಕ್ತ ಮಠದಲ್ಲಿ ಪ್ರತಿ ತಿಂಗಳು ಸುಜ್ಞಾನ ಗೋಷ್ಠಿ ಕಾರ್ಯಕ್ರಮ ಆಯೋಜಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುತ್ತಿರುವುದು ಶ್ಲಾಘನೀಯ,

ಭಕ್ತರು ದೈನಂದಿನ ಬದುಕಿನ ಜಂಜಾಟದಿಂದ ಸ್ವಲ್ಪ ಸಮಯ ದೂರವಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಭಾಗವಹಿಸಿ ಸಮಾಜಮುಖೀಯಾಗಿ ಚಿಂತಿಸಲು ಪ್ರೇರಕಶಕ್ತಿ ನೀಡುತ್ತಿದೆ. ಭಕ್ತಾದಿಗಳು ಲಿಂಗೈಕ್ಯ ರಾಜಶೇಖರ ಸ್ವಾಮಿಗಳ ಮೂರ್ತಿ ಪ್ರತಿಷ್ಠಾಪಿಸಿರುವುದು, ಅವರ ತತ್ವ ಆದರ್ಶ ಮುಂದಿನ ಪೀಳಿಗೆಗೆ ದಾರಿದೀಪವಾಗಲಿದೆ ಎಂದರು.

ಆರ್‌.ಎಸ್‌.ನಟರಾಜು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಕಂಚುಕಲ್‌ ಬಿದರೆ ಮಠದ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ರಾಜ್‌ ಕೃಷ್ಣಮೂರ್ತಿ, ಆರ್‌.ಸಿ. ಶಿವಮೂರ್ತಿ, ನಿವೃತ್ತ ಶಿಕ್ಷಕ ಚಂದ್ರಪ್ಪ ಹಾಗೂ ದಾಸೋಹಿಗಳಾದ ರಾಂಪುರ ಗ್ರಾಮಸ್ಥರು ಮತ್ತು ಅನೇಕ ಭಕ್ತಾಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.