ಆಲೂಗಡ್ಡೆ ಬೆಳೆಗಾರರಿಗೆ ಪರಿಹಾರದ ಪರಿಶೀಲನೆ
Team Udayavani, Jun 23, 2020, 6:27 AM IST
ಹಾಸನ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ 8,337 ಹೆಕ್ಟೇರ್‌ನಲ್ಲಿ ಆಲೂಗಡ್ಡೆ ಬೆಳೆಯಲಾಗಿದ್ದು, ಈ ಪೈಕಿ 1,501 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಈ ಸಂಬಂಧ ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಪರಿಹಾರ ನೀಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ತೋಟಗಾರಿಕಾ ಸಚಿವ ನಾರಾಯಣಗೌಡ ಅವರು ಬೆಂಗಳೂರಿನಲ್ಲಿ ಸೋಮವಾರ ನಡೆದ ಅಧಿಕಾರಿಗಳ ಪರಿಶೀಲನೆ ನಡೆಸಿದರು.
ಬಿತ್ತನೆ ಮಾಡಿದ್ದ ಆಲೂಗಡ್ಡೆ ಮೊಳಕೆ ಯೊಡೆಯದೇ ಭೂಮಿಯಲ್ಲಿಯೇ ಕೊಳೆತು ಹೋಗಿದೆ. ಇದುವರೆಗೂ ನಡೆಸಿರುವ ಸಮೀಕ್ಷೆ ಪ್ರಕಾರ 1,501 ಎಕರೆಯಲ್ಲಿ ನಾಶವಾಗಿದ್ದು, 2,584 ಹೆಕ್ಟೇರ್‌ನಲ್ಲಿ ಇನ್ನೂ ಸಮೀಕ್ಷೆ ಮಂದುವರಿದಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಅವರು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರಿಗೆ ಮಾಹಿತಿ ನೀಡಿದರು ಎಂದು ಮಾಹಿತಿ ಲಭ್ಯವಾಗಿದೆ.
ಲಾಕ್‌ಡೌನ್ ಅವಧಿಯಲ್ಲಿ ಹೂವು ಮಾರಾಟಮಾಡಲಾಗದೇ ನಷ್ಟ ಅನು ಭವಿಸಿರುವ ರೈತರ ಹೆಚ್ಚುವರಿ ಸಮೀಕ್ಷೆ ನಡೆಸಿದ್ದು, 1,042 ರೈತರು ಅರ್ಜಿ ಸಲ್ಲಿಸಿ ದ್ದಾರೆ. ಈ ಹಿಂದೆ ಸಲ್ಲಿಸಿದ ಪ್ರಸ್ತಾವನೆ ಜೊತೆಗೆ ಹೆಚ್ಚುವರಿಯಾಗಿ 88 ಲಕ್ಷ ರೂ. ಅಗತ್ಯವಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ತರಕಾರಿ ಬೆಳೆ ನಷ್ಟವಾಗಿದೆ ಎಂದು 16,007 ಬೆಳೆಗಾರರೂ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದು, ಪರಿಹಾರಕ್ಕೆ 8.44 ಕೋಟಿ ರೂ. ಅಗತ್ಯವಿದೆ ಎಂದು ಅಧಿಕಾರಿಗಳು ಸಭೆಗೆ ವಿವರ ಸಲ್ಲಿಸಿದ್ದಾರೆ.
ಹಣ್ಣಿನ ಬೆಳೆಗಾರು ನಷ್ಟ ಅನುಭವಿಸಿದ್ದು, 1,042 ಬೆಳೆಗಾರರಿಗೆ 88 ಲಕ್ಷ ರೂ. ಪರಿಹಾರದ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಅಧಿಕಾರಿಗಳು ಸಚಿವರ ಸಭೆಗೆ ಮಾಹಿತಿ ನೀಡಿದರು ಎಂದು ಹೇಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ ಸಿಇಒ ಬಿ.ಎ.ಪರಮೇಶ್, ತೋಟ ಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಜಂಟಿ ನಿರ್ದೇಶಕ ಮಧುಸೂದನ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.