ಪೌರ ಕಾರ್ಮಿಕರ ಉಪಾಹಾರ ಸೇವನೆಗೆ ಬದಲಿ ವ್ಯವಸ್ಥೆ: ರೂಪಾ
Team Udayavani, May 20, 2019, 11:50 AM IST
ಹಾಸನ ನಗರಸಭೆ ಆಯುಕ್ತೆ ರೂಪಾಶೆಟ್ಟಿ ಅವರು ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.
ಹಾಸನ: ನಗರದ ಮಹಾರಾಜ ಉದ್ಯಾನವನದ ರಂಗ ಮಂದಿರದಲ್ಲಿ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ಸೇವನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ನಗರಸಭೆ ಆಯಕ್ತೆ ರೂಪಾಶೆಟ್ಟಿ ಹೇಳಿದರು.
ನಗರದ ಮಹಾರಾಜ ಉದ್ಯಾನವನದ ಶೌಚಾಲಯದ ಪಕ್ಕ ಮರದ ಕೆಳಗೆ ಪೌರ ಕಾರ್ಮಿಕರು ಬೆಳಗಿನ ಉಪಾಹಾರ ಸೇವನೆ ಮಾಡುತ್ತಿದ್ದಾರೆ. ಮಳೆ, ಬಿಸಿಲಿನಲ್ಲಿ ತೊಂದರೆ ಅನುಭವಿಸುತ್ತಿದ್ದು, ಉಪಾಹಾರ ಸೇವನೆಗೆ ಪ್ರತ್ಯೇಕ ಜಾಗದ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಪೌರ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ಹೆತ್ತೂರು ನಾಗರಾಜ್ ಹಾಗೂ ಅಧ್ಯಕ್ಷ ಲೋಕೇಶ್ ಅವರ ನೀಡಿದ ದೂರಿನ ಹಿನ್ನೆಲೆಯಲ್ಲಿ ನಗರಸಬೆ ಆಯಕ್ತೆ ರೂಪಾಶೆಟ್ಟಿ ಭಾನುವಾರ ಬೆಳಗ್ಗೆ ಭೇಟಿ ನೀಡಿ ಪೌರ ಕಾರ್ಮಿಕರಿಂದ ಸಮಸ್ಯೆ ಆಲಿಸಿದರು.
ಕಳೆದ ಮೂರು ವರ್ಷಗಳಿಂದ ಶೌಚಾಲಯದ ಪಕ್ಕದಲ್ಲಿನ ಮರದ ಕೆಳಗೆ ಉಪಾಹಾರ ಸೇವನೆ ಮಾಡುತ್ತಿದ್ದೇವೆ. ಮಳೆ ಬಂದರೆ ಸಾಕಷ್ಟು ತೊಂದರೆ ಯಾಗುತ್ತದೆ. ಬೇಸಿಗೆಯಲ್ಲಿಯೂ ಕಷ್ಟವಾಗುತ್ತಿದೆ. ಆಹಾರ ಸೇವನೆ ಮಾಡುವಾಗ ಮರದ ಮೇಲಿಂದ ಹುಳಹುಪ್ಪಟೆಗಳು ಬೀಳುತ್ತವೆ.
ಈ ಬಗ್ಗೆ ಬದಲಿ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರೂ ಯಾರೂ ಗಮನಹರಿಸಿರಲಿಲ್ಲ. ನಮಗೆ ಬದಲಿ ಜಾಗದ ವ್ಯವಸ್ಥೆ ಮಾಡಿಕೊಡುವಂತೆ ಇದೆ ವೇಳೆ ಕಾರ್ಮಿಕರು ಮನವಿ ಮಾಡಿದರು.
ಪೌರ ಕಾರ್ಮಿಕರ ಸಮಸ್ಯೆ ಆಲಿಸಿದ ಪೌರಾ ಯುಕ್ತರು ಸ್ಥಳ ಪರಿಶೀಲನೆ ನಡೆಸಿ ರಂಗಮಂದಿರ ದಲ್ಲಿ ಸೇವನೆ ಮಾಡಿ ಎಂದು ಸಲಹೆ ನೀಡಿದರು.
ಪೌರಾಯುಕ್ತೆ ರೂಪಶೆಟ್ಟಿ ಪೌರಕಾರ್ಮಿಕರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳು ವುದು ನಗರಸಭೆಯ ಜವಾಬ್ದಾರಿಯಾಗಿದೆ. ಉಪಾಹಾರದ ಗುಣಮಟ್ಟದ ಲೋಪ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.