ಹೊರ ಜಿಲ್ಲೆಗಳ ಜನರ ಪ್ರವೇಶಕ್ಕೆ ನಿರ್ಬಂಧ
Team Udayavani, Apr 9, 2020, 4:02 PM IST
ಸಕಲೇಶಪುರ: ತಾಲೂಕಿಗೆ ಹೊಂದಿ ಕೊಂಡಿರುವ ಜಿಲ್ಲೆಗಳಿಂದ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಎಚ್ಚರಿಕೆ ನೀಡಿದ್ದಾರೆ.
ಮಿನಿ ವಿಧಾನಸೌಧದಲ್ಲಿ ನಡೆದ ಕೋವಿಡ್ 19 ನಿಯಂತ್ರಣದ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಕಲೇಶಪುರ ತಾಲೂಕು ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹೊಂದಿಕೊಂಡಿದೆ. ಆ ಭಾಗದಲ್ಲಿ ಅಧಿಕಾರಿಗಳು ಕಣ್ಗಾವಲಿರಿಸಿದ್ದಾರೆ. ಅನುಮತಿಯಿಲ್ಲದೇ ಆ ಜಿಲ್ಲೆಗಳಿಂದ ಹಾಸನ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದರು.
ಈಗಾಗಲೇ ಜಿಲ್ಲೆಯ ಹೊರ ಭಾಗಗಳಿಂದ ತಾಲೂಕಿಗೆ ಪ್ರವೇಶಿಸುವ 5 ಮಾರ್ಗಗಳಲ್ಲಿ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇನ್ನುಳಿದ 4 ದ್ವಾರಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ಆಹಾರ, ಔಷಧಿ ಸಾಗಣೆ, ಆ್ಯಂಬುಲೆನ್ಸ್‌ಗಳಿಗೆ ಮಾತ್ರ ಓಡಾಡಲು ಅವಕಾಶ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೂ ವಾಹನಗಳಲ್ಲಿ ತರಕಾರಿಗಳ ಸಾಗಣೆಗೆ ಅವಕಾಶ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನ ಪಟ್ಟಣದತ್ತ ಅಗತ್ಯ ವಸ್ತುಗಳನ್ನು ಖರೀದಿಸಲು ಬರಬಾರದು ಹಾಗೂ ಪೆಟ್ರೋಲ್ ಬಂಕ್‌ಗಳಲ್ಲಿ ಖಾಸಗಿ ವಾಹನಗಳಿಗೆ ಪೆಟ್ರೋಲ್ ಹಾಕಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ತಹಶೀಲ್ದಾರ್ ಮಂಜುನಾಥ್, ತಾಪಂ ಇಒ ಮಹರೀಶ್‌ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.