ಬಿತ್ತನೆ ಬೀಜಕ್ಕೆ ತಕ್ಷಣ ಸಬ್ಸಿಡಿಘೋಷಿಸಲು ರೇವಣ್ಣ ಆಗ್ರಹ
Team Udayavani, Apr 28, 2020, 6:01 PM IST
ಹಾಸನ: ನಿರ್ಮಾಣ ಸಾಮಗ್ರಿ ದರ ಏರಿಕೆ ನಿಯಂತ್ರಿಸಬೇಕು ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಸರ್ಕಾರ ಸಹಾಯಧನ ಘೋಷಿಸಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ – ಜೂನ್ ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಆಲೂಗಡ್ಡೆ ಬಿತ್ತನೆ ಆರಂಭವಾಗಲಿದೆ. ಮೇ ಮೊದಲ ವಾರದಿಂದಲೇ ಆಲೂಗಡ್ಡೆ ಬಿತ್ತನೆ ಬೀಜದ ಮಾರಾಟ ಆರಂಭವಾಗಲಿದ್ದು, ಬಿತ್ತನೆ ಬೀಜ ಮಾರಾಟದ ಸಂದರ್ಭ ದಲ್ಲಿಯೇ ಬಿತ್ತನೆ ಬೀಜ ಮತ್ತು ಔಷಧಿ ಖರೀದಿಗೆ ಸಹಾಯಧನ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಆಲೂಗಡ್ಡೆ ಬಿತ್ತನೆಗೆ ಸಬ್ಸಿಡಿಯನ್ನು ಕೂಡಲೇ ಘೋಷಣೆ ಮಾಡಬೇಕು. ಈ ಸಂಬಂಧ ಜಿಲ್ಲಾಧಿಕಾರಿ ಯವರು ಕೂಡಲೇ ಜಿಲ್ಲೆಯ ಎಲ್ಲ ಶಾಸಕರು, ಎಪಿಎಂಸಿ ಅಧ್ಯಕ್ಷರ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.
ಸರ್ಕಾರ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡಿದೆ. ಆದರೆ ಸಿಮೆಂಟ್ ಮತ್ತು ಉಕ್ಕು ದುಬಾರಿಯಾಗಿದೆ. ವರ್ತಕರು ದುಪ್ಪಟ್ಟು ದರದಲ್ಲಿ ಸಿಮೆಂಟ್, ಉಕ್ಕು ಮಾರಾಟ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ವರ್ತಕರ ಗೋದಾಮುಗಳ ಮೇಲೆ ದಾಳಿ ನಡೆಸಿ ದಾಸ್ತಾನು ಮತ್ತು ಮಾರಾಟದ ಮೇಲೆ ನಿಗಾ ವಹಿಸಬೇಕು ಎಂದರು. ಹಾಸನ ನಾಚನಹಳ್ಳಿ ನಿವಾಸಿ 108 ಆ್ಯಂಬುಲೆನ್ಸ್ ಚಾಲಕ ಕೃಷ್ಣಮೂರ್ತಿ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದು, ಆತನನ್ನು ಕೊರೊನಾ ವಾರಿಯರ್ ಎಂದು ಪರಿಗಣಿಸಿ 25 ಲಕ್ಷ ರೂ. ವಿಶೇಷ ಪರಿಹಾರ ನೀಡಬೇಕು ಹಾಗೂ ಆತನ ಕುಟುಂಬದವರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದೂ ಮನವಿ ಮಾಡಿದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್ ಉಪಸ್ಥಿತರಿದ್ದರು. ಇಲಾಖೆ ಉಪನಿರ್ದೇಶಕ ಮಂಜು ನಾಥ್ ವಿವಿಧ ಎಪಿಎಂಸಿ ಕಾರ್ಯ ದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.