ಕೃಷಿ ಕಾಯ್ದೆ ಪುನರ್‌ ಪರಿಶೀಲನೆ ಅಗತ್ಯ

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಅತ್ಯಗತ್ಯ: ಪ್ರಕಾಶ್‌ ಕಮ್ಮರಡಿ

Team Udayavani, Oct 4, 2021, 2:38 PM IST

ಕೃಷಿ ಕಾಯ್ದೆ ಪುನರ್‌ ಪರಿಶೀಲನೆ ಅಗತ್ಯ

ಹಾಸನ: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ತಿದ್ದುಪಡಿಗಳ ಪುನರ್‌ ಪರಿಶೀಲನೆ ಅಗತ್ಯ. ರೈತರ ಅಭಿಪ್ರಾಯಗಳನ್ನು ಮಾನ್ಯ ಮಾಡದೆ ಸರ್ಕಾರಗಳು ಕೃಷಿ ಕಾಯ್ದೆಗಳನ್ನು ಜಾರಿ ಮಾಡಬಾರದು ಎಂದು ರಾಜ್ಯ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ, ಕೃಷಿ ಆರ್ಥಿಕ ತಜ್ಞ ಡಾ. ಟಿ.ಎನ್‌. ಪ್ರಕಾಶ್‌ ಕಮ್ಮರಡಿ ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ:- “ನನ್ನ ಪುತ್ರ ಡ್ರಗ್ಸ್​ ಸೇವಿಸಲಿ” ಎಂದಿದ್ದ ಶಾರುಖ್ ಖಾನ್ : ಹಳೆಯ ವಿಡಿಯೋ ವೈರಲ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ತಿದ್ದುಪಡಿಗಳ ಬಗ್ಗೆ ದೆಹಲಿಯಲ್ಲಿ ರೈತರ ಬೃಹತ್‌ ಹೋರಾಟ ಮುಂದುವರಿದಿದೆ. ರೈತರ ಹೋರಾಟಕ್ಕೆ ದೇಶದ ರೈತರಿಂದ ಅಷ್ಟೇ ಅಲ್ಲ.

ಜಾಗತಿಕ ಬೆಂಬಲವೂ ವ್ಯಕ್ತವಾಗಿದೆ. ರೈತ ಸಮುದಾಯದೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದು ದಿಢೀರನೆ ಜಾರಿಗೊಳಿಸುವ ಅನಿವಾರ್ಯತೆಯಿರಲಿಲ್ಲ. ಹಾಗಾಗಿ ಸರ್ಕಾರ ಕೃಷಿ ಕಾಯ್ದೆ ತಿದ್ದುಪಡಿಗಳ ಬಗ್ಗೆ ಪುನರ್‌ ಪರಿಶೀಲನೆ ನಡೆಸಬೇಕು. ಎಂದರು. ಕೊರೊನಾ ವ್ಯಾಪಕವಾಗಿ ಹರಡಿದ ಸಂದರ್ಭದಲ್ಲಿ ಜಾರಿಯಾದ ಲಾಕ್‌ಡೌನ್‌ನಿಂದ ರೈತ ಸಮುದಾಯ ಭಾರೀ ಸಂಕಷ್ಟ ಅನುಭವಿಸಿತು. ಆ ಸಂದರ್ಭದಲ್ಲಿ ಸರ್ಕಾರ ಕೃಷಿ ಕ್ಷೇತ್ರದ ಬಗ್ಗೆ ಗಮನಹರಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ರೈತರ ಕೃಷಿ ಉತ್ಪನ್ನಗಳು ಸ್ಥಳೀಯವಾಗಿಯೇ ಮಾರಾಟವಾಗುವ ವ್ಯವಸ್ಥೆ ಜಾರಿಯಾದರೆ ಮಾತ್ರ ಕೃಷಿ ಕ್ಷೇತ್ರ ಹಾಗೂ ರೈತರಿಗೆ ನ್ಯಾಯ ಒದಗಿಸಲು ಸಾಧ್ಯ. ಬಹುಮುಖ್ಯವಾಗಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೊಳಿಸುವ ಕಾನೂನು ಜಾರಿಗೊಳಿಸುವುದು, ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚದ ಶೇ.50 ದರ ಸೇರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು.

ಡಾ. ಎಂ.ಎಸ್‌. ಸ್ವಾಮಿನಾಥನ್‌ ವರದಿಯನ್ನು ಆಧಾರವಾಗಿಟ್ಟುಕೊಂಡು ಬೆಂಬಲ ಬೆಲೆಯನ್ನು ಖಾತರಿಗೊಳಿಸಬೇಕು ಎಂದು ಹೇಳಿದರು.  ಕರ್ನಾಟಕದಲ್ಲಿರುವ ರೈತರ ಬವಣೆ ಅರಿಯಲು 2020-21ರ ಮುಂಗಾರಿಗಿಂತ ಮೊದಲು ನಡೆಸಲಾದಸಮೀಕ್ಷೆಯ ಅಂಕಿ-ಅಂಶಗಳನ್ನು ಸಂಖ್ಯಾ ಶಾಸ್ತ್ರದ

ಮಾದರಿಗಗಳನ್ನು ಬಳಸಿ ಅಧ್ಯಯನದ ವರದಿ ರೂಪಿಸಲಾಗಿದೆ. ಸರ್ಕಾರ ಅದನ್ನು ಪರಿಗಣಿಸಬೇಕು. ಕಾಲ್‌ಡೌನ್‌ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆಯ ಫ‌ಲಾನುಭವವನ್ನು ರೈತರಿಗೆದೊರಕಿಸಿಕೊಡುವ ಆಶ್ವಾಸನೆಯನ್ನು ಕೇಂದ್ರ  ಸರ್ಕಾರವು ನೀಡಿತ್ತು. ಆದರೆ ಇದು ರೈತರಿಗೆ ಅದರಲ್ಲೂ ಬಡ ಮತ್ತು ಸಣ್ಣ ರೈತರಿಗೆ ತಲಪಲಿಲ್ಲ.

ಕೊರೊನಾ ಮತ್ತು ಲಾಕ್‌ಡೌನ್‌ ಸಂದರ್ಭದಲ್ಲಿ ಸರ್ಕಾರ ಬೇರೆ ವಲಯಗಳ ಮೇಲೆ ಗಮನಹರಿಸಿದಂತೆ ಕೃಷಿ ಕೇತ್ರದತ್ತ ಗಮನಕೊಡಲಿಲ್ಲ ಎಂದ ಅವರು, ಈ ಸಂಬಂಧ ನಡೆಸಿದ ಸಮೀಕ್ಷೆಯಲ್ಲಿ ಶೇ.55 ರಷ್ಟು ರೈತರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ ಎಂದರು. ರೈತ ಮುಖಂಡ ಮಂಜುನಾಥ ದತ್ತ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.