ತೆಂಗು ಬೆಳೆ ಪರಿಹಾರಕ್ಕಾಗಿ 200 ಕೋಟಿ ರೂ.ಬಿಡುಗಡೆ


Team Udayavani, Feb 1, 2019, 7:04 AM IST

tengu.jpg

ಅರಸೀಕೆರೆ: ಸತತ ಮಳೆಯ ಅಭಾವ, ವಿವಿಧ ರೋಗ ಬಾಧೆಗಳಿಂದ ತೆಂಗಿನಮರ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ತಾವು ರೈತರ ಜೊತೆಗೆ ನಡೆಸಿದ ಅಹೋರಾತ್ರಿ ಹೋರಾಟಕ್ಕೆ ನಡೆಸಿದ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ.ರೇವಣ್ಣ ಅವರು ತಮಗೆ ನೀಡಿದ ಭರವಸೆಯಂತೆ ತೆಂಗು ಬೆಳೆಗಾರರ ಪರಿಹಾರಕ್ಕೆ ರಾಜ್ಯ ಸರ್ಕಾರ 200 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿರುವುದಕ್ಕೆ ತೆಂಗು ಬೆಳೆಗಾರರ ಪರವಾಗಿ ಅಭಿನಂದಿಸುತ್ತೇನೆ ಎಂದು ಶಾಸಕ ಕೆ ಎಂ ಶಿವಲಿಂಗೇಗೌಡ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗಾರ ಜೊತೆ ಗುರುವಾರ ಮಾತನಾಡಿದ ಅವರು ಸತತ ಬರಗಾಲ ಪೀಡಿತ ಪ್ರದೇಶವಾದ ತಾಲೂಕಿನಲ್ಲಿ ಮಳೆ ಅಭಾವ ಹಾಗೂ ವಿವಿಧ ರೋಗ ಬಾಧೆಗಳಿಗೆ ತುತ್ತಾಗಿ ತೆಂಗಿನ ಮರಗಳು ನಾಶವಾಗಿದೆ.

ರಾಜ್ಯದ ತೆಂಗು ಬೆಳೆಗಾರರ ನೆರವಿಗೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 200 ಕೋಟಿ ರೂ. ಸಹಾಯ ಧನವನ್ನು ಈಗಾಗಲೇ ಬಿಡುಗಡೆ ಮಾಡಿದ್ದು ಈ ಯೋಜನೆಯಡಿ ತಾಲೂಕಿಗೆ 32 ಕೋಟಿ ರೂ. ಅನುದಾನ ಸಂದಾಯವಾಗಿದೆ. ಈ ಪೈಕಿ 40,021 ಫಲಾನುಭವಿಗಳಿಗೆ ತೆಂಗಿನ ಮರ ಒಂದಕ್ಕೆ 400 ರೂ. ನಂತೆ ನೇರವಾಗಿ ಆರ್‌ಬಿಐ ನಿಂದ ರೈತನ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕಾ ಬೆಳೆಗೆ ಪ್ರೋತ್ಸಾಹ: ಉದ್ಯೋಗ ಖಾತ್ರಿ ಯೋಜನೆಯ ಸಹ ಭಾಗಿತ್ವದಲ್ಲಿ ತೆಂಗು ಬೆಳೆ ಅಥವಾ ಬಹು ವಾರ್ಷಿಕ ಬೆಳೆಗಳಾದ ಸಪೋಟ, ದಾಳಿಂಬೆ ಗೋಡಂಬಿ ಮತ್ತಿತರ ತೋಟಗಾರಿಕೆ ಬೆಳೆಗಳನ್ನು ರೈತರು ಬೆಳೆಯಲು ಎಕರೆಗೆ 17 ಸಾವಿರ ಪ್ರೋತ್ಸಾಹ ಧನ ನೀಡುವ ಯೋಜನೆಗೆ ಈಗಾಗಲೇ ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಾಲೂಕಿನಾದ್ಯಂತ ಸರ್ವೇ ಕಾರ್ಯ ಮುಗಿಸಿದ್ದು ಯೋಜನೆ ಅನುಷ್ಠಾನಕ್ಕೆ ತಾಲೂಕಿಗೆ 65 ಕೋಟಿ ರೂ. ಅನುದಾನ ಕೋರಿದ್ದಾರೆ, ಈ ಸಂಬಂದ ಮಂತ್ರಿ ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಸದ್ಯದಲ್ಲೇ 65 ಕೋಟಿ ಅನುದಾನ ಬಿಡುಗಡೆಯಾಗಲಿದೆ ಎಂದರು.

ಹೆಸರು ನೋಂದಾಯಿಸಿ: ತೆಂಗಿನ ಮರ ಕಳೆದುಕೊಂಡಿರುವ ತೆಂಗು ಬೆಳೆಗಾರರು ಹಾಗೂ ಪುನಶ್ಚೇತನ ಯೋಜನೆಯಡಿ ಬಹುವಾರ್ಷಿಕ ಬೆಳೆ ಬೆಳೆಯುವ ಆಸಕ್ತಿ ಹೊಂದಿರುವ ರೈತರು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳುವಂತೆ ಹೇಳಿದರು.

ತಾಲೂಕಿನ ಯಾವ ಒಬ್ಬ ತೆಂಗು ಬೆಳೆಗಾರರಿಗೂ ಅನ್ಯಾಯವಾಗಲು ತಾವು ಬಿಡುವುದಿಲ್ಲ ಇನ್ನೂ ಎಷ್ಟೇ ಅನುದಾನ ಬೇಕಾದರು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ತಂದು ತಾಲೂಕಿನ ರೈತರ ಋಣ ತೀರಿಸುತ್ತೇನೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ ಜೆಡಿಎಸ್‌ ಮುಖಂಡರಾದ ಮೈಲೇನಹಳ್ಳಿ ಜಗದೀಶ್‌, ಲಿಂಗರಾಜು, ರಂಗರಾಜ್‌, ಚಿಕ್ಕಬಾಣಾವಾರ ವೆಂಕಟೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.