Crop loss; 5,200 ಕೋಟಿ ರೂ. ಬೆಳೆ ನಷ್ಟದ ಅಂದಾಜು: ಸಚಿವ ಎನ್.ಚಲುವರಾಯ ಸ್ವಾಮಿ
Team Udayavani, Oct 22, 2023, 8:17 PM IST
ಹಾಸನ: ರಾಜ್ಯದ 216 ತಾಲೂಕುಗಳನ್ನು ತೀವ್ರ ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು, 5,200 ಕೋಟಿ ರೂ. ಬೆಳೆ ನಷ್ಟದ ಅಂದಾಜು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ ನಂತರ 2ನೇ ಹಂತದಲ್ಲಿ 21 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ.
ಮೊದಲ ಹಂತದ ಬರ ಘೋಷಣೆಯ ತಾಲೂಕುಗಳಲ್ಲಿ ಕೇಂದ್ರದ ಅಧಿಕಾರಿಗಳ ತಂಡವು ಪರಿಶೀಲನೆ ಮಾಡಿಕೊಂಡು ಹೋಗಿದೆ. ಆದರೆ ಇನ್ನೂ ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿಲ್ಲ. ಈ ವಾರದೊಳಗೆ ವರದಿ ಕೊಡುವ ನಿರೀಕ್ಷೆಯಿದೆ ಎಂದರು.
ಶೇ.98 ರಷ್ಟು ಬೆಳೆ ಹಾನಿಯ ಸಮೀಕ್ಷೆ: ಕೇಂದ್ರ ಕೃಷಿ ಸಚಿವರ ಭೇಟಿಗೆ ಸಮಯ ಕೇಳಲಾಗಿದ್ದು, ಇನ್ನೂ ಅವಕಾಶ ಕೊಟ್ಟಿಲ್ಲ. ಕೇಂದ್ರ ಕೃಷಿ ಸರ್ಕಾರದ ಕಾರ್ಯದರ್ಶಿಗಳ ಭೇಟಿಗಾಗಿ ಅ.25 ರಂದು ಸಮಯ ನಿಗದಿಯಾಗಿದ್ದು, ಹೆಚ್ಚುವರಿಯಾಗಿ ಬರ ಘೋಷಣೆ ಆಗಿರುವ 21 ತಾಲೂಕುಗಳ ವರದಿ ಸಲ್ಲಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ ಶೇ.98 ರಷ್ಟು ಬೆಳೆ ಹಾನಿಯ ಸಮೀಕ್ಷೆ ನಡೆದಿದ್ದು, 5,200 ಕೋಟಿ ರೂ. ಬೆಳೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರೈತರಿಂದ ಮೆಕ್ಕೆಜೋಳ ಖರೀದಿಗೆ ಕೆಎಂಎಫ್ ನಿರ್ಧಾರ
ಹಾಸನ: ರೈತರಿಂದ ನೇರವಾಗಿ ಕೆಎಂಎಫ್ನಿಂದ ಮೆಕ್ಕೆಜೋಳ ಖರೀದಿಸುವ ನಿರ್ಧಾರ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗದಿತ ದರದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸುವ ಸಂಬಂಧ ಈಗಾಗಲೇ ಕೆಎಂಎಫ್ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚೆ ನಡೆಸಿದ್ದೇನೆ. ಸಾಲುಸಾಲು ರಜೆಗಳ ಹಿನ್ನೆಲೆಯಲ್ಲಿ ಖರೀದಿಸಲು ಸಾಧ್ಯವಾಗಿಲ್ಲ. ವಾರದೊಳಗೆ ಅಧಿಕೃತವಾಗಿ ಮೆಕ್ಕೆ ಜೋಳ ಖರೀದಿಯ ಆದೇಶ ಹೊರಬೀಳಲಿದೆ ಎಂದು ಹೇಳಿದರು.
ವಿವಾದಕ್ಕೆ ತೆರೆ: ರೈತರಿಂದ ಕೆಎಂಎಫ್ ನೇರವಾಗಿ ಮೆಕ್ಕೆಜೋಳ ಖರೀದಿಸಬೇಕು ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರು ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಜೆಡಿಎಸ್‌ನಿಂದ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಸಹಕಾರ ಸಚಿವರೇ ಮೆಕ್ಕೆಜೋಳ ಖರೀದಿಗೆ ತೀರ್ಮಾನವಾಗಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಂತಾಗಿದೆ.
ಸಹಕಾರ ಇಲಾಖೆ ಅಧೀನದಲ್ಲಿ ಕೆಎಂಎಫ್ ಬಂದರೂ ಕೆಎಂಎಫ್ ಪ್ರತ್ಯೇಕ ಮಂಡಳಿ. ಅದಕ್ಕೆ ಅಧ್ಯಕ್ಷರು, ಆಡಳಿತ ಮಂಡಳಿ ಇದೆ. ಅಧಿಕೃತವಾಗಿ ಅವರು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸಹಕಾರ ಸಚಿವನಾಗಿ ನಾನು ಮೆಕ್ಕೆಜೋಳ ಖರೀದಿಗೆ ಸೂಚನೆ ಕೊಟ್ಟಿದ್ದೇನೆ. ಮುಂದಿನ ಪ್ರಕ್ರಿಯೆಯನ್ನು ಕೆಎಂಎಫ್ ನಿರ್ವಹಣೆ ಮಾಡಲಿದೆ ಎಂದು ಕೆ.ಎನ್.ರಾಜಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.