ಗ್ರಾಮಾಭಿವೃದ್ಧಿಯಿಂದ ಜನಪರ ಕಾರ್ಯಕ್ರಮ
Team Udayavani, Jan 30, 2021, 7:06 PM IST
ಜಾವಗಲ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 4 ದಶಕಗಳಿಂದ ಸಮುದಾಯದ ಸಹಭಾಗಿತ್ವದೊಂದಿಗೆ ಅನೇಕ ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಂಸ್ಥೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಿಕ ಪಿ.ಗಂಗಾಧರ ರೈ ತಿಳಿಸಿದರು.
ಜಾವಗಲ್ ಹೋಬಳಿ ಬಂದೂರು ಗ್ರಾಮದಲ್ಲಿ ನಮ್ಮೂರು, ನಮ್ಮ ಕೆರೆ ಯೋಜನೆಯಡಿ ಕೆರೆ ಪುನಶ್ಚೇತನ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಸಹಕಾರ ನೀಡಿ: ಕೆರೆ ಪುನಶ್ಚೇತನ ಕಾಮಗಾರಿಯನ್ನು ಶ್ರೀ ಧರ್ಮಸ್ಥಳ ಗ್ರಾಮೀಣ ಯೋಜನೆ ಸಹಕಾರದೊಂದಿಗೆ 14.5 ಲಕ್ಷ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಕೆರೆ ಮತ್ತು ಜೀವ ಜಲದ ಹನಿ ನೀರನ್ನು ಸಂರಕ್ಷಿಸಿ ಅಂತರ್ಜಲ ಮಟ್ಟ ಹೆಚ್ಚಿಸಲು ಗ್ರಾಮಸ್ಥರು ಹೆಚ್ಚಿನ ಸಹಕಾರ ನೀಡಬೇಕೆಂದರು.
ನೀರಿನ ಮೂಲಗಳನ್ನು ಬಲಪಡಿಸಬೇಕಾದ ಅನಿವಾರ್ಯತೆ ಇದೆ. ನೀರಿಲ್ಲದ ಬದುಕನ್ನು ಎಂದಿಗೂ ಊಹಿಸಲು ಸಾಧ್ಯವಿಲ್ಲ. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಕೆರೆಯ ಸಂರಕ್ಷಣೆಗಾಗಿ ನಮ್ಮೂರು ನಮ್ಮ ಕೆರೆ ಯೋಜನೆ ಜಾರಿಗೆ ತಂದು ಆ ಮೂಲಕ ಕೆರೆ ಹೂಳೆತ್ತಿಸಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹಿಸುವ ಕಾರ್ಯಕ್ರಮ ರೂಪಿಸಿದ್ದಾರೆಂದರು.
ರಾಜ್ಯಾದ್ಯಂತ ಈವರೆಗೆ 250 ಕೆರೆಗಳ ಪುನಶ್ಚೇತನಕಾರ್ಯಕ್ಕೆ ಚಾಲನೆ ನೀಡಿ ಅಭಿವೃದ್ಧಿಪಡಿಸಲಾಗಿದೆ. ಬಂದೂರು ಕೆರೆ ಸುತ್ತಮುತ್ತಲ 1 ಕಿ.ಮೀ.ವ್ಯಾಪ್ತಿಯಲ್ಲಿ ರೈತರ ಜಮೀನುಗಳಿಗೆ 500-600 ಲೋಡ್ ಮಣ್ಣನ್ನು ಸಾಗಿಸಿ ಭೂಮಿಯ ಫಲವತ್ತತೆ ಹೆಚ್ಚಿಸಲು ಶ್ರಮಿಸಲಾಗಿದೆ ಎಂದರು.
ಇದನ್ನೂ ಓದಿ:ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ : ಬೈಕ್ ಸವಾರ ಸಾವು
ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಸ್.ಮಹೇಶ್ ಮಾತನಾಡಿ, ಕೆರೆ ಪುನಶ್ಚೇತನಕ್ಕೆ ಇದುವರೆಗೂ ರೈತರ ಹೊಲಗಳಿಗೆ 900ಕ್ಕೂ ಅಧಿಕ ಟ್ರ್ಯಾಕ್ಟರ್ ಲೋಡ್ ಮಣ್ಣನ್ನು ಸಾಗಾಟ ಮಾಡಲಾಗಿದೆ. ಪ್ರತಿದಿನ 3 ಜೆಸಿಬಿ 35-40 ಟ್ರ್ಯಾಕ್ಟರ್ ಕೆಲಸ ಮಾಡುತ್ತಿವೆ ಎಂದರು. ಸಂಸ್ಥೆಯ ಅರಸೀಕೆರೆ ಹಾಗೂ ಹಾಸನ ತಾಲೂಕು ಯೋಜನಾಧಿಕಾರಿಗಳಾದ ಕೆ.ವಿನಾಯಕ ಪೈ, ಪುರುಷೋತ್ತಮ್ ವಲಯ ಮೇಲ್ವಿಚಾರಕ ಶ್ರೀನಿವಾಸ ಮೂರ್ತಿ, ಕೃಷಿ ಮೇಲ್ವಿಚಾರಕ ಅನಿಲ್, ಕೆರೆ ಅಭಿವೃದ್ಧಿಸಮಿತಿ ಸದಸ್ಯರಾದ ಗಣೇಶ್, ಬಸವಲಿಂಗೇಗೌಡ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.