ಸಕಲೇಶಪುರ ನಗರಸಭೆ ಅಧಿಕಾರಿಗೆ “ಸುಪ್ರೀಂ’ ನೋಟಿಸ್
Team Udayavani, Nov 18, 2018, 6:15 AM IST
ನವದೆಹಲಿ: ನಿಯಮಗಳನ್ನು ಮೀರಿ ಬೀದಿ ನಾಯಿಗಳನ್ನು ಕೊಂದ ಆರೋಪ ಹೊತ್ತಿರುವ ಕರ್ನಾಟಕದ ಸಕಲೇಶಪುರ ನಗರಸಭೆಯ ಆಡಳಿತಾಧಿಕಾರಿ ವಿ.ಟಿ. ವಿಲ್ಸನ್ ಹಾಗೂ ಗುತ್ತಿಗೆದಾರ ವಿ. ಜಾರ್ಜ್ ರಾಬರ್ಟ್ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗಾಗಿ ಸ್ವೀಕರಿಸಿದ್ದು, ಆರೋಪಗಳಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಈ ಇಬ್ಬರಿಗೂ ನೋಟಿಸ್ ಜಾರಿಗೊಳಿಸಿದೆ.
ಪ್ರಾಣಿಗಳ ಹಕ್ಕುಗಳ ಹೋರಾಟಗಾರ್ತಿ ನೆವಿನಾ ಕಾಮತ್ ಎಂಬುವರ ಪರವಾಗಿ ಅವರ ವಕೀಲರಾದ ಸಿದ್ದಾರ್ಥ್ ಗಾರ್ಗ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎನ್.ವಿ. ರಮಣ ಹಾಗೂ ಎಂ.ಎಂ. ಶಾಂತನಗೌಡರ್ ಅವರುಳ್ಳ ನ್ಯಾಯಪೀಠ ಸ್ವೀಕರಿಸಿ ಈ ನೋಟಿಸ್ ನೀಡಿದೆ.
2015ರ ನ. 18ರಂದು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆ ಹಾಗೂ ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ನಿಯಮಗಳನ್ನು ಬೀದಿ ನಾಯಿಗಳ ವಿಚಾರದಲ್ಲೂ ಪಾಲಿಸುವಂತೆ ದೇಶದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಆದರೆ, ಸಕಲೇಶಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣದ ಗುತ್ತಿಗೆ ಪಡೆದಿರುವ ಜಾರ್ಜ್ ಈ ನಿಯಮ ಸರಿಯಾಗಿ ಪಾಲಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.