ಮುಂದಿನ ಪೀಳಿಗೆಗೆ ಪರಿಸರ ಉಳಿಸಿ
Team Udayavani, Jun 6, 2020, 6:24 AM IST
ಹಾಸನ: ಪ್ರತಿಯೊಬ್ಬರೂ ಒಂದೊಂದು ಸಸಿ ನೆಡುವ ಮೂಲಕ ಮುಂದಿನ ಪೀಳಿಗೆಗೂ ಪರಿಸರವನ್ನು ಉಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಹೇಳಿದರು.
ನಗರದ ಹೊಸ ಬಸ್ ನಿಲ್ದಾಣದ ಎದುರು ಹೌಸಿಂಗ್ ಬೋರ್ಡ್ ಕಾಲೋನಿಯ ಪಾರ್ಕಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಪರಿಸರ ಸಂರಕ್ಷಣಾ ಬಳಗದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸಾಲುಮರದ ತಿಮ್ಮಕ್ಕಸಾವಿರಾರು ಸಸಿಗಳನ್ನು ಬೆಳೆಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದರು. ಅರಣ್ಯ ಇಲಾಖೆ ಅಧಿಕಾರಿ ಶಿವರಾಂ ಮಾತನಾಡಿ, ವಿಶ್ವ ಪರಿಸರ ದಿನದ ಅಂಗವಾಗಿ ಸಸಿ ನೆಡುವ ಸ್ಪರ್ಧೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಸಸಿ ಕೊಂಡೊಯ್ದು ವಿಡಿಯೋ ಮಾಡಿ ಕಳುಸಿದರೆ ಗಿಡನೆಡುವ ಉತ್ತಮ ಕಾರ್ಯಕ್ಕೆ ಬಹುಮಾನ ವಿತರಿಸಲಾಗುವುದು ಎಂದರು.
ಎಸ್ಪಿ ಶ್ರೀನಿವಾಸ್‌ಗೌಡ, ಜಿಪಂಸಿ ಇಒ ಬಿ.ಎ.ಪರಮೇಶ್, ಉಪ ವಿಭಾಗಾಧಿಕಾರಿ ನವೀನ್ ಭಟ್, ಸ್ವಾತಂತ್ರ ಹೋರಾಟಗಾರ ಎಚ್.ಎಂ. ಶಿವಣ್ಣ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶಂಕರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.