ಗೃಹ ಬಳಕೆ ವಸ್ತು ಮಾರಾಟ
Team Udayavani, Apr 23, 2020, 2:34 PM IST
ಸಾಂದರ್ಭಿಕ ಚಿತ್ರ
ಚನ್ನರಾಯಪಟ್ಟಣ: ಕೋವಿಡ್ ದಿಂದ ಸೊಂಕು ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ತಾಲೂಕಿನಲ್ಲಿ ರುವ ಸುಮಾರು 38 ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಗೃಹ ಬಳಕೆ ವಸ್ತುಗಳನ್ನು ಮಾರಾಟ ಮಾಡಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಚೋಳೇನಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ನಂತರ ಪಟ್ಟಣದಲ್ಲಿನ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್‌ನ ಶಾಖಾ ಕಚೇರಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವ ಜನಿಕರಿಗೆ ಪಡಿತರ ವಿತರಿಸುತ್ತಿರುವ ಎಲ್ಲಾ ಸಹಕಾರ ಸಂಘಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಬೇಳೆ ಕಾಳು, ಅಡುಗೆ ಎಣ್ಣೆ, ಉಪ್ಪು, ಕಡ್ಲೆಹಿಟ್ಟು, ಕಾಳುಗಳು ಹೀಗೆ ದಿನ ನಿತ್ಯ ಉಪಯೋಗಕ್ಕೆ ಬೇಕಾಗುವ ಎಲ್ಲಾ ಸಾಮಗ್ರಿಗಳನ್ನು ಮಾರಾಟ ಮಾಡಲು ಮುಂದಾಗಬೇಕು ಎಂದು ಆದೇಶಿಸಿದರು.
ಸಗಟು ವ್ಯಾಪಾರಸ್ಥರೊಂದಿಗೆ ಮಾತು ಕತೆ ನಡೆಸಿದ್ದು, ಪ್ರತಿ ಸಹಕಾರ ಸಂಘಕ್ಕೂ ಆಹಾರ ಸಾಮಗ್ರಿ ಸರಬರಾಜು ಮಾಡಲಿದ್ದಾರೆ. ಸೊಸೈಟಿಯವರು ಲಾಭದ ಉದ್ದೇಶವಿಟ್ಟುಕೊಳ್ಳದೇ ಗ್ರಾಮಸ್ಥರ ಹಿತದೃಷ್ಟಿಯಿಂದ ವ್ಯಾಪಾರ ಮಾಡಬೇಕು. ಅಗತ್ಯ ವಸ್ತುಗಳ ಖರೀದಿ ಸಂದರ್ಭ ದಲ್ಲಿ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸ ಬೇಕು ಎಂದು ಹೇಳಿದರು.
ತಹಶೀಲ್ದಾರ್ ಜೆ.ಬಿ.ಮಾರುತಿ, ಮೇಲ್ವಿಚಾರಕ ಎಸ್.ಕೆ.ಅಭಿಲಾಷ್, ಎಸ್.ಆರ್.ಮಧು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.