ಶಿರಾಡಿ ಸುರಂಗ ಮಾರ್ಗ, ವಿಮಾನ ನಿಲ್ದಾಣ ನಿರೀಕ್ಷೆ
Team Udayavani, Jul 5, 2019, 10:43 AM IST
ಮಂದಗತಿಯಲ್ಲಿ ಸಾಗಿರುವ ಶಿರಾಡಿ ಘಾಟ್ ರಸ್ತೆ ಕಾಮಗಾರಿ.
ಹಾಸನ: ಕೇಂದ್ರದಲ್ಲಿ ಮೋದಿ ಸರ್ಕಾರ ಮತ್ತೂಮ್ಮೆ ಅಧಿಕಾರಕ್ಕೆ ಬಂದಿದ್ದು ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದು ಹಾಸನ ಜಿಲ್ಲೆಯ ಜನತೆ ಅನೇಕ ನಿರೀಕ್ಷೆಗಳನ್ನು ಹೊಂದಿದ್ದಾರೆ.
ಹಾನಸದಲ್ಲಿ ಹಲವು ವರ್ಷ ನೆನಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಮಂಜೂರಾತಿ, ಶಿರಾಡಿ ಘಾಟ್‌ನಲ್ಲಿ ಸುರಂಗ ಮತ್ತು ಮೇಲ್ಸೇತುವೆ ಮಾರ್ಗ, ಹಾಸನಕ್ಕೆ ಸ್ಮಾಟ್ ರ್ಸಿಟಿ ಯೋಜನೆ, ಹಾಸನ- ಬೆಲೂರು-ಚಿಕ್ಕಮಗಳೂರು ರೈಲು ಮಾರ್ಗ ನಿರ್ಮಾ ಣಗಳಲ್ಲದೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೆಚ್ಚು ಅನುದಾನ ನೀಡುವ ನಿರೀಕ್ಷೆಯನ್ನು ಜಿಲ್ಲೆಯ ರಾಜಕಾರಣಿಗಳು ಹಾಗೂ ಜನತೆ ಹೊಂದಿದ್ದಾರೆ.
ಸ್ಮಾರ್ಟ್ ಸಿಟಿ ಸೌಲಭ್ಯ ಅಗತ್ಯ: ಹಾಸನ ನಗರ ದಶಕದಿಂದ ತೀವ್ರವಾಗಿ ಬೆಳೆಯುತ್ತಿದ್ದು ಅನೇಕ ಮೂಲ ಸೌಕರ್ಯಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಹಾಸನ ಸ್ಮಾರ್ಟ್‌ಸಿಟಿ ಯೋಜನೆ ಸೇರಬೇಕೆಂಬುದು ಎರಡ್ಮೂರು ವರ್ಷಗಳ ಬೇಡಿಕೆಯಾಗಿದೆ. ಈ ಹಿಂದೆ ಜಿಲ್ಲೆಯ ಸಂಸದರಾಗಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಮಾರ್ಟ್‌ಸಿಟಿ ಹಾಗೂ ಜಿಲ್ಲೆಗೆ ಐಐಟಿ ತರಲು ಹೋರಾಟ ನಡೆಸಿದ್ಧಲ್ಲದೆ, ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದರು.
ಆದರೆ ಈ ಬಾರಿ ಜಿಲ್ಲೆಗೆ ನೂತನ ಸಂಸದ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಇರುವುದರಿಂದ ಕೇಂದ್ರದ ಮೇಲೆ ಅಷ್ಟಾಗಿ ಒತ್ತಡ ಹೇರಲು ಸಾಧ್ಯವಿಲ್ಲ. ಒಂದು ವೇಳೆ ಇವರ ತಾತ ದೇವೇಗೌಡರು ತುಮಕೂರಿನಿಂದ ಸಂಸದರಾಗಿ ಆಯ್ಕೆಯಾಗಿ ತಾತನೊಂದಿಗೆ ಮೊಮ್ಮಗನೂ ಜೊತೆಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬಹುದಿತ್ತು, ಆದರೆ ಈಗ ಪ್ರಜ್ವಲ್ ಜಿಲ್ಲೆಯ ಬೇಡಿಕೆ ಈಡೇರಿಸಲು ಸಂಸತ್‌ನಲ್ಲಿ ಏಕಾಂಗಿಯಾಗಿ ಹೋರಾಟ ಮಾಡಬೇಕಿದೆ.
ಶಿರಾಡಿಘಾಟ್ : ಶಿರಾಡಿಘಾಟ್ ಸುರಂಗ ಎಕ್ಸ್‌ಪ್ರೆಸ್ ಹೈವೆ ಮೇಲ್ಸೇತುವೆ ನಿರೀಕ್ಷೆಯಲ್ಲಿದ್ದು ರಾಜ್ಯದ ಕರಾವಳಿ ಮತ್ತು ರಾಜಧಾನಿ ಬೆಂಗಳೂರು ಮೂಲಕ ಚನೈ ಬಂದರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ-75 ಜಿಲ್ಲೆಯಲ್ಲಿ ಹಾದು ಹೋಗಿರುವುದರಿಂದ ಬೆಂಗಳೂರು-ಮಂಗಳೂರು ನಡುವೆ ಇರುವ ಶಿರಾಡಿಘಾಟ್ ರಸ್ತೆ ಮಳೆಗಾಲ ಬಂತೆಂದರೆ ಭೂ ಕುಸಿತದಿಂದ ವಾಹನ ಸಂಚಾರಕ್ಕೆ ಅನೇಕ ತೊಂದರೆ ಆಗಲಿದೆ ಹಾಗಾಗಿ ಶಿರಾಡಿಘಾಟ್ ಚತುಷ್ಟಪಥ ಸುರಂಗ ಮತ್ತು ಮೇಲ್ಸೇತುವೆ ನಿರ್ಮಾಣ ಮಾಡುವ ನಿರೀಕ್ಷೆಯನ್ನು ಹೊಂದಿದ್ದಾರೆ. ಬೆಲೂರು-ಹಾಸನ-ಚಿಕ್ಕಮಗಳೂರು-ಶೃಂಗೇರಿ ರೈಲು ಮಾರ್ಗ ನಿರ್ಮಾಣದ ಸರ್ವೆ ಮುಕ್ತಾಯವಾಗಿದ್ದು ಈಗಾಗಲೆ ಚಿಕ್ಕಮಗಳೂರು-ಬೆಲೂರು- ಸಕಲೇಶಪುರ ರೈಲು ಮಾರ್ಗಕ್ಕೆ ಮಂಜೂರಾತಿ ದೊರೆತಿದೆ, ಆದರೆ ಬೆಲೂರುನಿಂದ ಸಕಲೇಶಪುರ ನಡುವೆ ರೈಲು ಮಾರ್ಗ ನಿರ್ಮಾಣದಿಂದ ಹೆಚ್ಚು ಪ್ರಯೋಜನ ವಿಲ್ಲ ಎಂಬ ಲೆಕ್ಕಾಚಾರದಿಂದ ಚಿಕ್ಕಮಗಳೂರು-ಬೇಲೂರು-ಹಾಸನ ಮಾರ್ಗವಾಗಿ ರೈಲು ಸಂಚಾರ ಮಾಡ ಬೇಕಿದೆ. ಇದಕ್ಕಾಗಿ ಸರ್ವೆಕಾರ್ಯ ಮುಗಿದಿದ್ದು 460 ಕೋಟಿ ರೂ. ಯೋಜನೆ ಅಂದಾಜು ಮಾಡಲಾಗಿದೆ.
ಈ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಹಣ ನೀಡಲು ಮುಂದಾದರೆ ರಾಜ್ಯದ ಮೈತ್ರಿ ಸರ್ಕಾರ ದಿಂದ ಶೇ.50ರಷ್ಟು ಅನುದಾನವನ್ನು ತಂದು ಆದಷ್ಟು ಬೇಗ ಕಾಮಗಾರಿ ಮುಕ್ತಾಯ ಮಾಡಿಸುತ್ತೇನೆ ಎಂದು ಜಿಲ್ಲಾ ಮಂತ್ರಿ ಎಚ್.ಡಿ.ರೇವಣ್ಣ ತುದಿಗಾಲಿನಲ್ಲಿ ನಿಂತಿ ದ್ದಾರೆ. ಇವರ ಆಸೆಗೆ ಇಂದು ನಡೆಯುವ ಬಜೆಟ್ ಯಾವ ರೀತಿಯಲ್ಲಿ ಪೂರಕವಾಗಲಿದೆ ಎನ್ನುವದು ತಿಳಿಯಲಿದೆ.
● ಎನ್. ನಂಜುಂಡೇಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.