ಜನಿವಾರ ಕೆರೆಯಲ್ಲಿ ದೋಣಿ ವಿಹಾರ ಶುರು
Team Udayavani, Feb 13, 2018, 7:15 AM IST
ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕದ ಆಕರ್ಷಣೆಗಳಲ್ಲೊಂದಾದ ದೋಣಿ ವಿಹಾರ ಮತ್ತು ಜಲ ಸಾಹಸ ಕ್ರೀಡೆ ಜನಿವಾರ ಗ್ರಾಮದ ಕೆರೆಯಲ್ಲಿ ಸೋಮವಾರ ದಿಂದ ಅರಂಭವಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಶಾಸಕ ಸಿ.ಎನ್.ಬಾಲಕೃಷ್ಣ ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮೋಟಾರ್ ಬೋಟ್ನಲ್ಲಿ ಸಂಚರಿಸುವ ಮೂಲಕ ಜಲಸಾಹಸ
ಕ್ರೀಡೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವ ಎ.ಮಂಜು, ಶ್ರವಣಬೆಳಗೊಳ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರ ಆಗಿದ್ದು, 88ನೇ ಮಹಾಮಸ್ತಕಾಭಿಷೇಕದ ಶಾಶ್ವತ ಕೊಡುಗೆಯಾಗಿ ಜನಿವಾರದ ಕೆರೆಯಲ್ಲಿ ಜಲಸಾಹಸ ಕ್ರೀಡೆ ಆರಂಭಿಸ
ಲಾಗಿದೆ. ಈಗ ಆರಂಭವಾಗಿರುವ ದೋಣಿ ವಿಹಾರ ಮತ್ತು ಜಲ ಸಾಹಸ ಕ್ರೀಡೆಗೆ 50 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಈ ಕೆರೆಯ ವಿಸ್ತೀರ್ಣ ಹಾಗೂ ನೀರಿನ ಲಭ್ಯತೆ ಆಧರಿಸಿ ಇನ್ನೂ 5 ಕೋಟಿ ರೂ.ವೆಚ್ಚದಲ್ಲಿ ಜಲ ಸಾಹಸ ಕ್ರೀಡಾ ವ್ಯವಸ್ಥೆಯನ್ನು ಅಭಿವೃದಿಟಛಿಪಡಿಸಲು ಯೋಜನೆ ರೂಪಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜನಿವಾರ ಕೆರೆ 600 ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿದೆ. ಈ ಕೆರೆಯ ಸುತ್ತಲೂ ಸುಮಾರು 100 ಎಕರೆ ಒತ್ತುವರಿಯಾಗಿರುವ ಅಂದಾಜಿದೆ. ಒತ್ತುವರಿ ಮಾಡಿಕೊಂಡಿರುವವರು ತೆಂಗು, ಅಡಿಕೆ ಬೆಳೆದಿದ್ದಾರೆ. ಈ ಕೆರೆಯಲ್ಲಿ ದೋಣಿ ವಿಹಾರ ಆರಂಭಿಸುವ ಯೋಜನೆ ರೂಪಿಸಿದಾಗ 15 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನುಳಿದ ಒತ್ತುವರಿಯನ್ನೂ ತೆರವುಗೊಳಿಸಲಾಗುವುದು
ಎಂದು ಸಚಿವರು ತಿಳಿಸಿದರು. ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.