ಜೀವಜಲದ ಮಹತ್ವ ಸಾರಿದ್ದ ಸಿದ್ದರಾಮೇಶ್ವರರು

Team Udayavani, Jan 15, 2020, 3:00 AM IST

jeevajala

ಅರಸೀಕೆರೆ: ಜಗಜ್ಯೋತಿ ಬಸವೇಶ್ವರರ ಸಮಕಾಲೀನರಾಗಿದ್ದ ಸಿದ್ದರಾಮೇಶ್ವರರು ವಚನಗಳ ಮೂಲಕ ಸಮಾಜ ಸುಧಾರಣೆ ಮಾಡುವುದರೊಂದಿಗೆ ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ ಜೀವಜಲದ ಮಹತ್ವದ ಬಗ್ಗೆ ಅರಿವು ಮೂಡಿಸಿದ್ದರು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದರಾಮೇಶ್ವರರ ಮಾದರಿಯಲ್ಲಿ ಕೆರೆ, ಕಟ್ಟೆಗಳನ್ನು ನಿರ್ಮಿಸಿ ಸಂರಕ್ಷಿ ಸಿದರೆ ನೀರಿನ ಕೊರತೆ ನಿವಾರಿಸಬಹುದು ಎಂದರು.

ಮಹಾಪುರುಷರನ್ನು ಸೀಮಿತಗೊಳಿಸದಿರಿ: ಜಿಲ್ಲಾ ಪಂಚಾಯಿತಿ ಸದಸ್ಯ ಪಟೇಲ್‌ ಶಿವಣ್ಣ ಮಾತನಾಡಿ, ಮಹಾ ಪುರುಷರ ಜಯಂತಿ ಕಾರ್ಯಕ್ರಮಗಳನ್ನ ಒಂದು ಸಮುದಾಯಕ್ಕೆ ಸೇರಿದವರು ಆಚರಿಸುವುದಕ್ಕಿಂತ ಸರ್ವರು ಸೇರಿ ಆಚರಿಸುವುದರಿಂದ ಮಹನೀಯರ ಜಯಂತಿಗೆ ಅರ್ಥ ಪೂರ್ಣವಾಗುತ್ತದೆ. ಅದೇ ರೀತಿ ಅವರ ಆದರ್ಶಮಯ ಜೀವನವನ್ನ ನಾವು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದಿದ್ದೇ ಆದರೆ ನಿಜವಾಗಲು ಅವರಿಗೆ ನಾವುಗಳು ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ಜಾಗೃತಿ ಮೂಡಿಸಿದ್ದಾರೆ: ತಹಶೀಲ್ದಾರ್‌ ಸಂತೋಷ್‌ಕುಮಾರ್‌ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರರವರು 68 ಸಾವಿರಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ ಎಂದು ಇತಿಹಾಸ ಹೇಳುತ್ತದೆ. ಆದರೆ 1,379 ವಚನಗಳು ಲಭ್ಯವಾಗಿದೆ. ಆದರೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಚನ ಸಾಹಿತ್ಯವನ್ನು ಬರೆಯುವುದು ಸುಲಭದ ಮಾತಲ್ಲ ಎಂದ ಅವರು ಸಿದ್ದರಾಮೇಶ್ವರರ ವಚನ ಬಸವಣ್ಣನವರ ವಚನದಂತೆಯೇ ಸಮಾಜಕ್ಕೆ ಸಂದೇಶ ನೀಡುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಡಾಳು ಸ್ವಾಮಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ರೂಪಾ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಜಯರಾಂ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಸ್‌.ಪಿ .ನಟರಾಜ್‌, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಂಡಿಗೌಡರ ರಾಜಣ್ಣ, ನಗರಸಭೆ ಮಾಜಿ ಅಧ್ಯಕ್ಷ ಮೋಹನ್‌ಕುಮಾರ್‌, ರಾಷ್ಟ್ರೀಯ ಹಿರಿಯ ಕ್ರೀಡಾಪಟು ಎಚ್‌.ಟಿ.ಮಹಾದೇವ್‌ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.