Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ
ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣ
Team Udayavani, May 15, 2024, 9:56 PM IST
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋವುಳ್ಳ ಪೆನ್‌ಡ್ರೆçವ್ ಹಂಚಿಕೆ ಪ್ರಕರಣದ ಹಾಸನ ಹಾಗೂ ಜಿಲ್ಲೆಯ 18 ಕಡೆ ಏಕಕಾಲದಲ್ಲಿ ಎಸ್‌ಐಟಿ ತಂಡ ಮಂಗಳವಾರ ಸಂಜೆಯಿಂದ ಬುಧವಾರ ಮುಂಜಾನೆ 3.30ರ ವರೆಗೂ ಶೋಧ ಕಾರ್ಯ ನಡೆಸಿದೆ.
ಬೆಂಗಳೂರಿನಿಂದ ಆಗಮಿಸಿದ್ದ ಎಸ್‌ಐಟಿ ಟೀಂಗಳು ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣ, ಹೊಳೆನರಸೀಪುರ ಸೇರಿದಂತೆ ಹದಿನೆಂಟು ಕಡೆಗಳಲ್ಲಿ ದಾಳಿ ನಡೆಸಿ ಕೂಲಂಕಷ ಪರಿಶೀಲನೆ ನಡೆಸಿದವು.
ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಕ್ವಾಲಿಟಿ ಬಾರ್‌ನ ಶರತ್, ಪುನೀತ್, ಎಚ್.ಪಿ. ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್ ಗೌಡ, ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಶಶಿಧರ್, ಚೇತನ್ ಗೌಡ ಹಾಗೂ ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಮೊದಲಾದವರ ನಿವಾಸ, ಕಚೇರಿ, ರೆಸ್ಟೋರೆಂಟ್, ಹೊಟೇಲ್ ಮೊದಲಾದ ಕಡೆಗಳಲ್ಲಿ ಎಸ್‌ಐಟಿ ಶೋಧ ಕಾರ್ಯ ನಡೆಸಿತು.
ಇದಕ್ಕೂ ಮುನ್ನ ಕ್ವಾಲಿಟಿ ಬಾರ್‌ನ ಶರತ್ ಅವರ ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್‌ಮೆಂಟ್‌ನಲ್ಲಿರುವ ನಿವಾಸದ ಮೇಲೂ ಎಸ್‌ಐಟಿ ತಂಡ ದಾಳಿ ಮಾಡಿ ಐಫೋನ್ ವಶಪಡಿಸಿಕೊಂಡಿದೆ ಎನ್ನಲಾಗಿದೆ. ಜತೆಗೆ ಹಲವು ಮಹತ್ವದ ಸಾಕ್ಷ್ಯ ಹಾಗೂ ದಾಖಲೆಗಳನ್ನೂ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಪೆನ್‌ಡ್ರೆçವ್ ಹಂಚಿಕೆಯ ಮೂಲ ಪತ್ತೆ ಹಚ್ಚಲು ಎಸ್‌ಐಟಿ ತಂಡ ತನಿಖೆ ತೀವ್ರಗೊಳಿಸಿದೆ.
ಷಡ್ಯಂತ್ರದ ಆರೋಪ
ಮುಖ್ಯವಾಗಿ ಪ್ರೀತಂ ಗೌಡ ಅವರ ಆಪ್ತರ ಒಡೆತನದ ಬಾರ್ ಹಾಗೂ ಹೊಟೇಲ್, ಕಚೇರಿ ಮೊದಲಾದ ಕಡೆಗಳಲ್ಲಿ ಎಸ್‌ಐಟಿ ದಾಳಿ ನಡೆಸಿ ಶೋಧಿಸಿದ ವೇಳೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ತಪಾಸಣೆ ವೇಳೆ ಕಂಪ್ಯೂಟರ್ ಮಾನಿಟರ್, ಹಾರ್ಡ್ ಡಿಸ್ಕ್ ಪರಿಶೀಲಿಸಿದಾಗ ಯಾವ ಸಾಕ್ಷಿಯೂ ದೊರಕಲಿಲ್ಲ ಎನ್ನಲಾಗಿದೆ. ಈ ನಡುವೆ ಮಂಗಳವಾರ ಎಸ್‌ಐಟಿ ದಾಳಿ ವೇಳೆ ಪ್ರೀತಂ ಗೌಡರ ಆಪ್ತ ಬಳಗವನ್ನೇ ಟಾರ್ಗೆಟ್ ಮಾಡಲಾಗಿದೆ. ಇದೆಲ್ಲಾ ರಾಜಕೀಯ ಷಡ್ಯಂತ್ರ ಎಂದು ಬಿಜೆಪಿಯ ಹಲವರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.