ಶೀಘ್ರದಲ್ಲಿಯೇ ಕಾಂಗ್ರೆಸ್‌ – ಜೆಡಿಎಸ್‌ ಜಂಟಿ ಸಭೆ


Team Udayavani, Mar 22, 2019, 7:35 AM IST

shigra.jpg

ಹಾಸನ: ಜೆಡಿಎಸ್‌ – ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರ ಜಂಟಿ ಸಮಾವೇಶವನ್ನು ಶೀಘ್ರವೇ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು ಮತ್ತು  ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ಅವರು ಕಾಂಗ್ರೆಸ್‌ ಮುಖಂಡರಾದ ಬಿ.ಶಿವರಾಮು, ಸಿ.ಎಸ್‌.ಪುಟ್ಟೇಗೌಡ, ಎಚ್‌.ಎಂ.ವಿಶ್ವನಾಥ್‌ ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರನ್ನು ಭೇಟಿಯಾಗಿ ಸಹಕಾರ ಕೋರಿದ್ದೇವೆ.  ಕಾಂಗ್ರೆಸ್‌ ಮುಖಂಡರು ಸೂಕ್ತ ದಿನಾಂಕವನ್ನು ನಿಗದಿಪಡಿಸಿದರೆ  ಜೆಡಿಎಸ್‌ – ಕಾರ್ಯಕರ್ತರ ಸಭೆಯನ್ನು ಏರ್ಪಡಿಸಲಾಗುವುದು ಎಂದರು.

ಕೋಮುವಾದಿಗಳನ್ನು ದೂರವಿಡಲು ಮೈತ್ರಿ: ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ರಾಷ್ಟ್ರಮಟ್ಟದಲ್ಲಿಯೇ ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಎಚ್‌.ಡಿ.ದೇವೇಗೌಡರು ಮೈತ್ರಿ ಮಾಡಿಕೊಂಡಿದ್ದಾರೆ. ಅದರಂತೆ ರಾಜ್ಯದಲ್ಲಿಯೂ ಮೈತ್ರಿ ಏರ್ಪಟ್ಟಿದೆ. ಕಾಂಗ್ರೆಸ್‌ ಅಭ್ಯರ್ಥಿಗಳಿರುವ ಕ್ಷೇತ್ರಗಳಲ್ಲಿ ಜೆಡಿಎಸ್‌ ಕಾರ್ಯಕರ್ತರು ಬೆಂಬಲಿಸಬೇಕು.

ಜೆಡಿಎಸ್‌ ಅಭ್ಯರ್ಥಿಗಳಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೇಂಬಲಿಸಬೇಕು . ಈ ನಿಟ್ಟಿನಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚರ್ಚಿಸಿ ಕಾಂಗ್ರೆಸ್‌ – ಜೆಡಿಎಸ್‌ ಜಂಟಿ ಪ್ರಚಾರ ಕೈಗೊಳ್ಳುವ ತೀರ್ಮಾನ ಮಾಡಿದ್ದಾರೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ  ಕಾಂಗ್ರೆಸ್‌ – ಜೆಡಿಎಸ್‌ ಜಂಟಿ ಸಭೆ ನಡೆಸಿ ಪ್ರಚಾರದ ಕಾರ್ಯತಂತ್ರ ರೂಪಿಸಲಾಗುವುದು ಎಂದು ಹೇಳಿದರು. 

ವಿಮಾನ ನಿಲ್ದಾಣದ ಡಿಪಿಆರ್‌ ಸಿದ್ಧ: ಹಾಸನ ಜಿಲ್ಲೆಯ ಹಲವು ಅಭಿವೃದ್ಧಿ ಯೋಜನೆಗಳಿಗೆ ಎಚ್‌.ಡಿ.ಕುಮಾರಸ್ವಾಮಿ ಅವರು ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ. ಹಾಸನ ವಿಮಾನ ನಿಲ್ದಾಣದ ಸಮಗ್ರ ಯೋಜನಾ ವರದಿಯು ಸಿದ್ಧವಾಗಿದ್ದು, ಟೆಂಡರ್‌ ಕರೆಯುವ ಹಂತದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಟೆಂಡರ್‌ ಕರೆಯಾಲಾಗಿಲ್ಲ. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಗತ್ಯವಿದೆ ಎಂದ ಅವರು, ಈ ಬಾರಿ ಕಾಂಗ್ರೆಸ್‌ ಬೆಂಬಲವೂ ಸಿಗುತ್ತಿರುವುದರಿಂದ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಭಾರೀ ಅಂತರದ ವಿಜಯ ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಲ್ಲ: ಚುನಾವಣೆಯ ಸಂದರ್ಭದಲ್ಲಿ  ಸಚಿವ ರೇವಣ್ಣ ಅವರು ಕಾಂಗ್ರೆಸ್‌ ಮುಂಡರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಘೋಷಿತ ಅಭ್ಯರ್ಥಿ ಎ.ಮಂಜು ಅವರ ಟೀಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರ ಆರೋಪ, ಟೀಕೆಗಳಿಗೆಲ್ಲಾ ಪ್ರತಿಕ್ರಿಯಿಸಿ ಪೊಳ್ಳಾಗುವುದಿಲ್ಲ.ಬಿಜೆಪಿ ಅಧಿಕಾರದಲ್ಲಿದ್ದಾಗ ಜಿಲ್ಲೆಯ ಅಭಿವೃದ್ಧಿಗೆ ಏನು ಕೊಡುಗೆ ನೀಡಿದೆ ? ಕಳೆದ 5 ವರ್ಷ ಕೇಂದ್ರ ಸರ್ಕಾರದಿಂದ ಹಾಸನ ಜಿಲ್ಲೆಗೆ ಮಹತ್ವದ ಕೊಡುಗೆ ಏನು ಸಿಕ್ಕಿದೆ? ನಾನು ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇವೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ನಾವು ಮುನ್ನಡೆಯುತ್ತೇವೆ ಎಂದು ರೇವಣ್ಣ ಅವರು ಸ್ಪಷ್ಟಪಡಿಸಿದರು. 

ಇಂದು 12.05 ಕ್ಕೆ ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ 
ಹಾಸನ:
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪ್ರತಿನಿಧಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಉತ್ತರಾಧಿಕಾರಿಯಾಗಲು ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಮಾ.22 ರಂದು ಮಧ್ಯಾಹ್ನ 12.05 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಬೃಹತ್‌ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು, ಮಾ.22 ರಂದು ಬೆಳಗ್ಗೆ  ಹೊಳೆನರಸೀಪುರದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ  ದೇಗುಲದಲ್ಲಿ ಪೂಜೆ, ಆನಂತರ ಹರದನಹಳ್ಳಿಯ ಶ್ರೀ ಈಶ್ವರ ದೇವಾಲಯದಲ್ಲಿ ಪೂಜೆ, ಮಾವಿನಕೆರೆ ಬೆಟ್ಟದ ಶ್ರೀರಂಗನಾಥ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಹಾಸನಕ್ಕೆ ಆಗಮಿಸುವ ಪ್ರಜ್ವಲ್‌ ಅವರು, ಬೆಳಗ್ಗೆ 10 ಗಂಟೆಗೆ ಹಾಸನ ಎನ್‌.ಆರ್‌. ವೃತ್ತಕ್ಕೆ ಆಗಮಿಸಿ  ಕಾರ್ಯಕರ್ತರ ಬೃಹತ್‌ ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು.

ಆನಂತರ ಮಧ್ಯಾಹ್ನ 12.05 ಗಂಟೆಗೆ ನಾಮಪತ್ರ ಸಲ್ಲಿಸಿದ ನಂತರ  ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಹೇಳಿದರು. ಕಡೂರು ಸೇರಿ ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದಲೂ ಕಾರ್ಯಕರ್ತರು ಆಗಮಿಸಬೇಕು ಎಂದು ಮನವಿ ಮಾಡಿದ ರೇವಣ್ಣ ಅವರು, ಕಾರ್ಯಕರ್ತರು ಮೆರವಣಿಗೆ ಹಾಗೂ ಸಭೆಯಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಪಕ್ಷದ ಮುಖಂಡರಾದ ಪಟೇಲ್‌ ಶಿವರಾಂ, ಕೆ.ಎಂ.ರಾಜೇಗೌಡ, ಬೂವನಹಳ್ಳಿ ಸ್ವಾಮಿಗೌಡ ಅವರು ಉಪಸ್ಥಿತರಿದ್ದರು. 
 
ಕಾಂಗ್ರೆಸ್‌ ಮುಖಂಡರ ನಿವಾಸಕ್ಕೆ ಸಚಿವ ರೇವಣ್ಣ ಭೇಟಿ
ಹಾಸನ:
ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು ಗುರುವಾರ ಜಿಲ್ಲಾ ಕಾಂಗ್ರೆಸ್‌ ಮುಖಂಡರ ನಿವಾಸಗಳಿಗೆ ಭೇಟಿ ನೀಡಿ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. 

ವಿಧಾನ ಪರಿಷತ್‌ ಮಾಜಿ ಸದಸ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಅನಂದ್‌ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಸಮಯ ಚರ್ಚಿಸಿದರು. ಚುನಾವಣೆಯಲ್ಲಿ ಪ್ರಜ್ವಲ್‌ ಅವರನ್ನು  ಬೆಂಬಲಿಸಬೇಕು. ಕಾಂಗ್ರೆಸ್‌ ಕಾರ್ಯಕರ್ತರಿಗೂ ಚುನಾವಣಾ ಮೈತ್ರಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರನ್ನು ಭಾರೀ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಲು ಸಹಕರಿಸಬೇಕು ಎಂದು ಕೋರಿದರು. 

ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಕೆ.ರಂಗಸ್ವಾಮಿ ಅವರ ನಿವಾಸಕ್ಕೂ ಭೇಟಿ ನೀಡಿದ ರೇವಣ್ಣ ಅವರು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಮತೀಯ ಶಕ್ತಿಗಳ ವಿರುದ್ಧ ಹೋರಾಟ ನಡೆಸಲು ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ಪರ ಪ್ರಚಾರ ನಡೆಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. 
ಇಬ್ಬರು ಕಾಂಗ್ರೆಸ್‌ ಮುಖಂಡರೂ ಪಕ್ಷದ ಹೈ ಕಮಾಂಡ್‌ ತೀರ್ಮಾನದಂತೆ ಪ್ರಜ್ವಲ್‌ ರೇವಣ್ಣ ಅವರ ಪರ ಕೆಲಸ ಮಾಡುವುದಾಗಿ ರೇವಣ್ಣ ಅವರಿಗೆ ಭರವಸೆ ನೀಡಿದರು. 

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.