ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಸ್ಪೀಕರ್‌


Team Udayavani, Jun 15, 2019, 3:00 AM IST

ettin-hool

ಸಕಲೇಶಪುರ: ತೀವ್ರ ಬರಪೀಡಿತ ಕೋಲಾರ ಜಿಲ್ಲೆಯ ಜನರಿಗೆ ಎತ್ತಿನಹೊಳೆ ಕಾಮಗಾರಿ ಬಗ್ಗೆ ಮನವರಿಕೆ ಮಾಡಿಸಲು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಜನರೊಂದಿಗೆ ಖಾಸಗಿಯಾಗಿ ಆಗಮಿಸಿ ಪರಿಶೀಲನೆ ನಡೆಸಿದ್ದೇನೆ ಎಂದು ವಿಧಾನಸಭೆ ಸ್ಪೀಕರ್‌ ಹಾಗೂ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್‌ ಕುಮಾರ್‌ ತಿಳಿಸಿದರು.

ತಾಲೂಕಿನಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಹೆಬ್ಬನಹಳ್ಳಿ, ಹೆಬ್ಬಸಾಲೆ, ಮತ್ತಿತರ ಕಡೆಗಳಿಗೆ ಶುಕ್ರವಾರ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿದ್ದು ಜನ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಬೆಂಗಳೂರು ಸುತ್ತಮುತ್ತಲಿನ ಬರಪೀಡಿತ ಜಿಲ್ಲೆಗಳ ಜನತೆಗೆ ನೀರು ಹರಿಸುವ ದೃಷ್ಟಿಯಿಂದ ಎತ್ತಿನಹೊಳೆ ಯೋಜನೆ ಆರಂಭಿಸಲಾಗಿದೆ.

ಈ ನಿಟ್ಟಿನಲ್ಲಿ ತನ್ನ ಕ್ಷೇತ್ರವಾದ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಜನತೆಗೆ ಕಾಮಗಾರಿ ಬಗ್ಗೆ ಖುದ್ದಾಗಿ ಮನವರಿಕೆ ಮಾಡಿಸಲು ಕ್ಷೇತ್ರದ 3 ಹೋಬಳಿಗಳ ಪ್ರತಿ ಗ್ರಾಪಂಗೆ 8 ಜನರಂತೆ 3 ಬಸ್‌ಗಳಲ್ಲಿ ಒಟ್ಟು 150ಕ್ಕೂ ಹೆಚ್ಚು ಜನರನ್ನು ಕರೆ ತಂದು ಕಾಮಗಾರಿ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ಜನರಲ್ಲಿ ನೀರು ದೊರಕುವ ಬಗ್ಗೆ ಒಂದು ಆಶಾಭಾವನೆ ಹುಟ್ಟಿದೆ.

ಯಾವುದೇ ರೀತಿಯ ರಾಜಕೀಯ ಗಿಮಿಕ್‌ ಮಾಡಲು ತಾನು ಜನರನ್ನು ಇಲ್ಲಿಗೆ ಕರೆತಂದಿಲ್ಲ ಎಂದು ಸ್ಪಷ್ಟಪಡಿಸಿದರು. ಸಂಕಷ್ಟದಲ್ಲಿರುವ ಜನರಿಗೆ ಕೂಡಲೇ ನೀರು ಹರಿಯಬೇಕಾಗಿದೆ. ಹಾಗೂ ಇಲ್ಲಿನ ಜನರಿಗೂ ಯಾವುದೇ ಅನ್ಯಾಯವಾಗಬಾರದು. ಮಲೆನಾಡಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಶ್ರೀನಿವಾಸಪುರದಿಂದ ಆಗಮಿಸಿದ್ದ ತಾಪಂ ಸದಸ್ಯ ಕೆ.ಕೆ.ಮಂಜು, ಕೋಲಾರ ಭಾಗದ ಜನ ಹನಿ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಜಾನುವಾರುಗಳಿಗೆ, ಪ್ರಾಣಿ ಪಕ್ಷಿಗಳಿಗೆ ನೀರಿಲ್ಲ. 10000 ಅಡಿಗಳಷ್ಟು ಆಳದಲ್ಲಿ ಕೊಳವೆ ಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಜನ ಪ್ರೇಕ್ಷಣಿಯ ಸ್ಥಳಗಳಿಗೆ ಸಂತೋಷಕ್ಕಾಗಿ ಹೋದರೆ ನಾವು ನೀರಿಗಾಗಿ ಇಲ್ಲಿಗೆ ಬಂದಿದ್ದೇವೆ.

ಇಲ್ಲಿನ ಕಾಮಗಾರಿ ನೋಡಿ ನಮಗೆ ಸಂತೋಷವಾಗಿದೆ. ರಮೇಶ್‌ ಕುಮಾರ್‌ರವರು ನಮ್ಮ ಭಾಗಕ್ಕೆ ನೀರು ಹರಿಸಲು ವ್ಯಾಪಕ ಶ್ರಮ ಪಡುತ್ತಿದ್ದಾರೆ. ಇಲ್ಲಿಂದ ನೀರು ನಮಗೆ ದೊರಕುವುದರಲ್ಲಿ ಯಾವುದೆ ಅನುಮಾನವಿಲ್ಲ ಎಂದರು.

ಎತ್ತಿನಹೊಳೆ ಯೋಜನೆ ಭೂಸ್ವಾಧೀನ ಅಧಿಕಾರಿ ಗಿರೀಶ್‌ ನಂದನ್‌, ಎತ್ತಿನಹೊಳೆ ಯೋಜನೆ ಅಧೀಕ್ಷಕ ಗುರುದತ್‌, ಕಾರ್ಯಪಾಲಕ ಅಭಿಯಂತರ ಜಯಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಶಶಿಧರ್‌, ಸತೀಶ್‌ ಮತ್ತಿತರರಿದ್ದರು.

ಪತ್ರಕರ್ತರು ಸೇರಿದಂತೆ ತಾಲೂಕು ಆಡಳಿತಕ್ಕೆ ಮಾಹಿತಿ ಇಲ್ಲ: ರಮೇಶ್‌ ಕುಮಾರ್‌ ಅವರು ಕ್ಷೇತ್ರದ ಜನರೊಡನೆ ಖಾಸಗಿಯಾಗಿ ಬಂದಿದ್ದರಿಂದ ಸ್ಥಳೀಯ ಆಡಳಿತಕ್ಕೆ ರಮೇಶ್‌ ಕುಮಾರ್‌ ಅವರು ಇಲ್ಲಿಗೆ ಬರುವ ಯಾವುದೇ ಮಾಹಿತಿ ಇರಲಿಲ್ಲ. ಕ್ಷೇತ್ರದ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರು ಚಾಮರಾಜನಗರ ಗುಂಡ್ಲುಪೇಟೆಯಲ್ಲಿ ದೌರ್ಜನ್ಯಕ್ಕೆ ಒಳಗಾದ ಯುವಕನನ್ನು ಭೇಟಿ ಮಾಡಲು ಹೋಗಿದ್ದು ಖುದ್ದು ಶಾಸಕರಿಗೂ ಈ ಬಗ್ಗೆ ಮಾಹಿತಿಯಿರಲಿಲ್ಲ.

ಸ್ಥಳೀಯ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌ ಈ ಹಿನ್ನೆಲೆಯಲ್ಲಿ ಗೈರು ಹಾಜರಾಗಿದ್ದರು. ಎತ್ತಿನಹೊಳೆ ಯೋಜನೆ ಅಧಿಕಾರಿಗಳಿಗೂ ಸರಿಯಾದ ಮಾಹಿತಿ ಇಲ್ಲದೆ ಅಂತಿಮವಾಗಿ ತರಾತುರಿಯಲ್ಲಿ ಸಿದ್ಧತೆ ನಡೆಸಿದರು. ಎತ್ತಿನಹೊಳೆ ಕಾಮಗಾರಿ ವ್ಯಾಪ್ತಿಯ ಬೆಳಗೋಡು ಹೋಬಳಿಯ ಹೆಬ್ಬನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಟನಲ್‌ ವೀಕ್ಷಿಸಲು ಶ್ರೀನಿವಾಸಪುರದ ಜನತೆ ಶಿಸ್ತಿನ ಸಿಪಾಯಿಗಳಂತೆ ನಡೆದು ಸಾಗಿದರು.

ಬೈರಗೊಂಡ್ಲುವಿನಿಂದ ಅವಳಿ ಜಿಲ್ಲೆಗೆ ನೀರು: ಸುಮಾರು 140 ಕೋಟಿ ರೂ. ವೆಚ್ಚದಲ್ಲಿ 2 ಕಿ.ಮೀ. ಟನಲ್‌ ನಿರ್ಮಾಣ ಮಾಡಲಾಗುತ್ತಿದ್ದು, ಸುಮಾರು 260 ಮೀಟರ್‌ನಷ್ಟು ನೀರನ್ನು ಒಂದು ಸಮಯದಲ್ಲಿ ಪಂಪ್‌ ಮಾಡಿ ಟನಲ್‌ ಮೂಲಕ ಗುರುತ್ವಾಕರ್ಷಣ ಶಕ್ತಿಯಲ್ಲಿ ಬೈರಗುಂಡ್ಲು ಸಮೀಪ ಹರಿಸಿ ಅಲ್ಲಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ನೀರನ್ನು ನೀಡಲಾಗುವುದು.

ಎತ್ತಿನಹೊಳೆ ಕಾಮಗಾರಿಯನ್ನು 2 ಹಂತದಲ್ಲಿ ಕೈಗೊಳ್ಳಲಾಗಿದ್ದು ಮೊದಲ ಹಂತದ ಪೈಪ್‌ ಲೈನ್‌ ಕಾಮಗಾರಿ ಶೇ.80 ಪೂರ್ಣಗೊಂಡಿದೆ. 2ನೇ ಹಂತದಲ್ಲಿ ಗುರುತ್ವಾಕರ್ಷಣ ಮೂಲಕ ನೀರು ಕೊಡುವ ಕಾಮಗಾರಿ ಶೇ.46 ಮುಗಿದಿದ್ದು ಅತಿ ವೇಗವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಶ್ರೀನಿವಾಸಪುರ ಕ್ಷೇತ್ರದಿಂದ ಆಗಮಿಸಿದ್ದ ಎತ್ತಿನಹೊಳೆ ಯೋಜನೆ ಅಧೀಕ್ಷಕ ಗುರುದತ್‌ ಮಾಹಿತಿ ನೀಡಿದರು.

ಪತ್ರಕರ್ತರ ಪ್ರಶ್ನೆಗೆ ಸ್ಪೀಕರ್‌ ಉತ್ತರ
1. ರಾಜಕೀಯ ಗಿಮಿಕ್‌ಗಾಗಿ ತಾವು ಕ್ಷೇತ್ರದ ಜನರನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದೀರಾ?
ಯಾವುದೇ ರಾಜಕೀಯ ಗಿಮಿಕ್‌ ಇಲ್ಲ. ಮಲೆನಾಡಿನ ಜನ ಉದಾರಿಗಳು ಇಲ್ಲಿನ ಜನ ಯಾವುದೇ ರೀತಿಯಲ್ಲಿ ಅಡ್ಡಿಪಡಿಸದೆ ಕಾಮಗಾರಿ ನಡೆಯಲು ಸಹಕರಿಸಿದ್ದಾರೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲೂ ಸಹಕರಿಸುತ್ತೇವೆ ಹಾಗೂ ಸದಾ ಈ ಭಾಗದ ಜನತೆಗೆ ಚಿರಋಣಿಯಾಗಿರುತ್ತೇವೆ ಎಂದರು.

2. ಎತ್ತಿನಹೊಳೆ ಯೋಜನೆಯಿಂದ ಮಲೆನಾಡಿಗೆ ರಸ್ತೆ ಬಿಟ್ಟರೆ ಬೇರೆ ಏನು ಉಪಯೋಗವಾಗಿಲ್ಲ. ಕಾಡಾನೆ ಸಮಸ್ಯೆ, ಗ್ರಂಥಾಲಯ, ಕ್ರೀಡಾಂಗಣ, ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ, ಉದ್ಯಾನವನ ಕೊರತೆ ಮುಂತಾದ ಸಮಸ್ಯೆ ಇದ್ದೇ ಇದೆ?
ಈ ಬಗ್ಗೆ ಇಲ್ಲಿನ ಶಾಸಕರು ಗಮನಹರಿಸಬೇಕು.

3. ಸ್ವಾಮಿ, ನಾನು ಎತ್ತಿನಹೊಳೆ ಯೋಜನೆ ಭೂ ಸಂತ್ರಸ್ಥ. ಜಾಗ ಕಳೆದುಕೊಂಡಿದ್ದೇನೆ, ಮಕ್ಕಳಿಗೆ ಉದ್ಯೋಗ ಅವಕಾಶ ಕಲ್ಪಿಸಿ.
ಯಾರೂ ಬಡವರಲ್ಲ. ಪ್ರತಿ ಯೋಜನೆ ಜಾರಿಗೆ ತರುವಾಗ ಆ ಪ್ರದೇಶದ ಸಂತ್ರಸ್ಥರ ಕುಟುಂಬಕ್ಕೆ ಉದ್ಯೋಗ ನೀಡಲು ಮೀಸಲಾತಿ ನೀಡಬಹುದಾಗಿದೆ. ಇದನ್ನು ಅನುಷ್ಠಾನಗೊಳಿಸಲು ವಿಶ್ವೇಶ್ವರಯ್ಯ ನೀರಾವರಿ ನಿಗಮಕ್ಕೆ ಆದೇಶಿಸುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.