ಎಸ್ಸೆಸ್ಸೆಲ್ಸಿ ಪರೀಕ್ಷೆ: ಆತ್ಮವಿಶ್ವಾಸ ಮೂಡಿಸಿ


Team Udayavani, Jun 23, 2020, 6:30 AM IST

atmavishvasa

ಹಾಸನ: ಕೋವಿಡ್‌ 19 ವ್ಯಾಪಕವಾಗಿ ಹರಡುತ್ತಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ವಾತಾವರಣ ಸೃಷ್ಟಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಸೂಚಿಸಿದರು.

ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ನಡೆಸಿದ ಅವರು ಜೂ. 25ರಿಂದ ಜು.4ರವರೆಗೆ ಪರೀಕ್ಷೆ ನಡೆಯಲಿದ್ದು,  ಪರೀಕ್ಷಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಹಾಗೂ ಪರೀಕ್ಷೆಗೆ ಮುನ್ನ ಮತ್ತು ನಂತರ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುವಂತೆ ಕಟ್ಟನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಜೂ.24ರಂದು ಪರೀಕ್ಷಾ ಕೇಂದ್ರಗಳಲ್ಲಿ ಕೂರುವ ಕೊಠಡಿ ಹಾಗೂ ಸ್ಥಳಗಳನ್ನು ವೀಕ್ಷಿಸಲು ವಿದ್ಯಾರ್ಥಿಗಳು ಬರುತ್ತಾರೆ. ಹಾಗಾಗಿ ಅಂದು ಹಾಗೂ ಉಳಿದೆಲ್ಲಾ ದಿನ ದಂದು ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಜೇಷನ್‌ ಮಾಡಬೇಕು  ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರೀಕ್ಷೆ ದಿನದಂದು ವಿದ್ಯಾರ್ಥಿಗಳನ್ನು ತಪಾಸಣೆ ಮಾಡುವುದರಿಂದ ವಿದ್ಯಾರ್ಥಿಗಳು ಬೆಳಗ್ಗೆ 7.30ಕ್ಕೆ ಪರೀಕ್ಷಾ ಕೇಂದ್ರಕ್ಕೆ ಬರಲಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ  ಹಾಗೂ ಪೊಲೀಸ್‌ ಇಲಾಖೆಯ ಸಿಬ್ಬಂದಿ ಅದಕ್ಕೆ ಮುನ್ನವೇ ಹಾಜರಿರುವಂತೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿ ಎಂದು ಎಲ್ಲ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ಕಂಟೈನ್ಮೆಂಟ್‌ ಪರೀಕ್ಷಾರ್ಥಿಗಳ ಮಾಹಿತಿ ನೀಡಿ: ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಒಂದುಗೂಡಿ ಕಂಟೈನ್ಮೆಂಟ್‌ ವಲಯ ಗಳಲ್ಲಿ ಪರೀಕ್ಷೆ ಬರೆಯುವವರು ಎಷ್ಟು ಮಕ್ಕಳಿ ದ್ದಾರೆ ಎಂಬುದರ ಬಗ್ಗೆ ಮಾಹಿತಿ ನೀಡಬೇಕು.

ಅಂತಹ  ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿ ಯಲ್ಲಿ ಕೂರಿಸಿ ಪರೀಕ್ಷೆ ನಡೆಸಿ ಮತ್ತು ಎಲ್ಲರಿಗೂ ಎನ್‌-95 ಮಾಸ್ಕ್ ಕಡ್ಡಾಯವಾಗಿ ನೀಡಬೇಕು ಎಂದು ನಿರ್ದೇಶಿಸಿದ ಸಚಿವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕ್ವಾರಂಟೈನ್‌  ಕೇಂದ್ರಗಳಲ್ಲಿದ್ದರೆ ಅಥವಾ ಸೋಂಕಿತ ರಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ದಿನದಂದು ಬರೆಸಿ ಪ್ರಥಮ ಪ್ರಯತ್ನವೆಂದು ಪರಿಗಣಿಸಲಾಗುತ್ತದೆ ಎಂದರು.

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡಿರುವ ಮಾಸ್ಕ್ಗಳನ್ನು  ಹೊರತುಪಡಿಸಿ ಯಾರಾದರೂ ದಾನಿಗಳು, ಸಂಘ ಸಂಸ್ಥೆಗಳು ಮಾಸ್ಕ್ ನೀಡಲು ಬಂದರೆ ಅಂತಹವರನ್ನು ಪರೀಕ್ಷಾ ಕೇಂದ್ರದ ಬಳಿ ಸೇರಿಸದಂತೆ ಪೊಲೀಸ್‌ ಸಿಬ್ಬಂದಿ ಎಚ್ಚರ ವಹಿಸಬೇಕು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೆ  ಮತ್ತೂಂದು ಮಾಸ್ಕ್ ನೀಡಬೇಕು. ವಿದ್ಯಾರ್ಥಿ ಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿ ಹಾಗೂ  ಮಲೆನಾಡು ಮತ್ತು ಕರಾವಳಿ ಪ್ರದೇಶಗಳಿಗೆ ವಿಶೇಷ ಗಮನಹರಿಸಿ ಮಕ್ಕಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ವ್ಯವಸ್ಥೆ ಮಾಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು ಹಾಸನ  ಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ  ಮಾಡಿಕೊಂಡಿರುವ ಪೂರ್ವ ಸಿದ್ಧತೆ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್‌, ಡಿಡಿಪಿಐ  ಪ್ರಕಾಶ್‌ ಹಾಗೂ ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.