![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 13, 2020, 3:00 AM IST
ಹೊಳೆನರಸೀಪುರ: ಕಳೆದ ವರ್ಷ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನಗಳಿಸಿದೆ. ಬಾರಿಯೂ ಅಗ್ರ ಸ್ಥಾನವನ್ನು ಕಾಯ್ದುಕೊಳ್ಳಲು ಪ್ರೌಢಶಾಲಾ ಶಿಕ್ಷಕರು ಪರಿಶ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಭವಾನಿ ರೇವಣ್ಣ ಹೇಳಿದರು.
ಪಟ್ಟಣದ ಚನ್ನಾಂಬಿಕಾ ಕನ್ವೆನ್ಷನಲ್ ಹಾಲ್‌ನಲ್ಲಿ ಏರ್ಪಡಿಸಿದ್ದ ತಾಲೂಕಿನ ಸರ್ಕಾರಿ, ಅನುದಾನ ಹಾಗೂ ಅನುದಾನಿತ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ಕಳೆದ ವರ್ಷ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮಸ್ಥಾನ ಬರಲು ಶಿಕ್ಷಕರ ಪರಿಶ್ರಮ ಅಪಾರವಾಗಿದೆ ಎಂದು ಶ್ಲಾಘಿಸಿದರು. ಸಭೆಗೆ ತಾಲೂಕಿನಲ್ಲಿನ ಬಹುತೇಕ ಎಲ್ಲಾ ಶಾಲೆಯ ಶಿಕ್ಷಕರು ಆಗಮಿಸಿರುವುದು ತಮಗೆ ಸಂತಸ ತಂದಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಮಾತನಾಡಿ,ಶಿಕ್ಷಕರು ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಸಭೆ ನಡೆಸುವ ಮೂಲಕ ವಿದ್ಯಾರ್ಥಿಗಳು ಉತ್ತಮವಾಗಿ ವ್ಯಾಸಂಗ ಮಾಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.
ಈ ವಿಶೇಷ ಸಭೆಯಲ್ಲಿ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಪನ್ಯಾಸಕ ಟಿ.ಎಸ್.ಕುಮಾರಸ್ವಾಮಿ ಉಪಸ್ಥಿತರಿದ್ದರು. ವಿಶೇಷ ಪ್ರೌಢಶಾಲಾ ಶಿಕ್ಷಕರ ಸಭೆಯಲ್ಲಿ ತಾಲೂಕಿನ ಸುಮಾರು ಅರವತ್ತಕ್ಕೂ ಹೆಚ್ಚು ಪ್ರೌಢಶಾಲಾ ಶಿಕ್ಷಕರು ವಿಶೇಷ ಸಭೆಯಲ್ಲಿ ಭಾಗವಹಿಸಿದ್ದರು.
ಎಸ್ಸೆಸ್ಸೆಲ್ಸಿ ಮಕ್ಕಳಿಗೆ ವಿಶೇಷ ತರಗತಿ ನಡೆಸಿ: ಮಾರ್ಚ್ ,ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಕ್ಕೆ ತರುವಲ್ಲಿ ಪೂರಕವಾಗಿ ಪ್ರತಿ ಶಾಲೆಯಲ್ಲಿಯೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತಗೆದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಅವಶ್ಯವಾದ ವಿಶೇಷ ಪಾಠ ಪ್ರವಚನಗಳನ್ನು ನಡೆಸಬೇಕೆಂದು ಜಿಪಂ ಸದಸ್ಯೆ ಭವಾನಿ ಕಿವಿಮಾತು ಹೇಳಿದರು.
ಸಭೆಯಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಮಾತನಾಡಿ, ಶಿಕ್ಷಕರು ತಂತಮ್ಮ ಶಾಲೆಯಲ್ಲಿನ ವಿದ್ಯಾರ್ಥಿಗಳನ್ನು ಬರಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಸುಲಲಿತವಾಗಿ ಎದುರಿಸುವಂತೆ ಆತ್ಮ ಸ್ಥೈರ್ಯವನ್ನು ತುಂಬಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ತಾವು ಬರಲಿರುವ ಪರೀಕ್ಷೆಗೆ ಬೇಕಾದ ಪೂರ್ವ ತಯಾರಿ ನಡೆಸಿ ಕಳೆದ ವರ್ಷ ನಮ್ಮ ಜಿಲ್ಲೆಗೆ ಲಭಿಸಿರುವ ಪ್ರಥಮ ಸ್ಥಾನವನ್ನು ಈ ವರ್ಷವೂ ಕಾಯ್ದುಕೊಳ್ಳಲು ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.