ಕಟ್ಟೆಯಲ್ಲಿ ಮಣ್ಣು ತೆಗೆಯುವುದನ್ನು ನಿಲ್ಲಿಸಿ
Team Udayavani, May 10, 2019, 3:01 PM IST
ಹಾಸನ: ತಾಲೂಕಿನ ಸಾಲಗಾಮೆ ಗ್ರಾಮಕ್ಕೆ ಸೇರಿದ ಕಟ್ಟೆಯ ಮಣ್ಣನ್ನು ಅಕ್ರಮವಾಗಿ ತೆಗೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಲಗಾಮೆ ಗ್ರಾಮಸ್ಥರು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ತಾಲೂಕಿನ ಸಾಲಗಾಮೆ ಗ್ರಾಮದ ಸರ್ವೆ ನಂ. 158 ರಲ್ಲಿ 2.34 ಎಕರೆ ವಿಸ್ತೀರ್ಣದ ಮುಗುಳಿಕಟ್ಟೆ ಶಂಖ ಗ್ರಾಮಕ್ಕೆ ಹೋಗುವ ದಾರಿಯ ಪಕ್ಕದಲ್ಲಿದೆ. ಈ ಕಟ್ಟೆಯಲ್ಲಿ ಸುಮಾರು 15 ರಿಂದ 20 ಅಡಿ ಆಳದಲ್ಲಿ ಸ್ವಂತ ಜಮೀನಿಗಾಗಿ ಮಣ್ಣನ್ನು ತೆಗೆಯುತ್ತಿದ್ದಾರೆ ಎಂದು ಆಪಾದಿಸಿದರು.
ಕಟ್ಟೆಗೆ ಹೊಂದಿಕೊಂಡಂತೆ ನಮ್ಮ ಜಮೀನಿದೆ. ಆಳವಾಗಿ ಮಣ್ಣು ತೆಗೆಯುವುದರಿಂದ ಕಟ್ಟೆಯ ಬಳಿ ಭೂಮಿ ಕುಸಿಯುವ ಸಂಭವವಿದೆ. ದನ-ಕರುಗಳು ಕಟ್ಟೆಯ ಒಳಗಡೆ ಇರುವ ನೀರನ್ನು ಕುಡಿಯಲು ಇಳಿದರೆ ಮತ್ತೆ ಮೇಲಕ್ಕೆ ಬರುವುದು ಕಷ್ಟವಾಗಿ ಸಾಯುವ ಸಂಭವ ಇದೆ. ಈ ಬಗ್ಗೆ ಗ್ರಾಮಸ್ಥರು ಪ್ರಶ್ನೆ ಮಾಡಿದರೇ ಜಗಳಕ್ಕೆ ಬರುತ್ತಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಸ್ಥಳೀಯ ನಾಡ ಕಚೇರಿ, ತಹಶೀಲ್ದಾರ್ ಕಚೇರಿ, ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಡಳಿತಕ್ಕೂ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮುಗುಳಿಕಟ್ಟೆ ಮಣ್ಣು ತೆಗೆದು ಅಪಾಯದ ಸ್ಥಿತಿ ತಂದಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಅವರು ತಕ್ಷಣವೇ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಕೆ.ಎಸ್. ನಿರ್ಮಲಾ, ಸಾಲಗಾಮೆ ಗ್ರಾಮದ ನಿವಾಸಿಗಳಾದ ಪ್ರಕಾಶ್, ಶಿವಲಿಂಗಯ್ಯ, ಸವಿತ, ಜಯಲಕ್ಷ್ಮೀ, ರುಕ್ಮಿಣಿ, ಅಕ್ಕಯಮ್ಮ, ರಮೇಶ್, ಸೂರಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.