ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಶಸ್ಸಿಗೆ ಶ್ರಮಿಸಿ


Team Udayavani, Dec 23, 2019, 3:00 AM IST

bahugrama

ಜಾವಗಲ್‌: ಹೇಮಾವತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಯಶಸ್ಸಿಗೆ ಪ್ರತಿಗ್ರಾಮ ಗ್ರಾಮಪಂಚಾಯಿತಿಯ ವಾಟರ್‌ಮನ್‌ಗಳು ಹಾಗೂ ಪಿಡಿಒಗಳು ಶ್ರಮಿಸಬೇಕು ಎಂದು ಶಾಸಕ ಕೆ.ಎಸ್‌. ಲಿಂಗೇಶ್‌ ತಿಳಿಸಿದರು.

ಜಾವಗಲ್‌ ಗ್ರಾಮ ಪಂಚಾಯಿತಿಯಿಂದ ಜಾವಗಲ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಾವಗಲ್‌ ಹೋಬಳಿಯ ಗ್ರಾಮ ಪಂಚಾಯಿತಿ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆಯನ್ನು 256ಕೋಟಿ ರೂ. ವೆಚ್ಚದಲ್ಲಿ ಅರಸೀಕೆರೆ ತಾಲೂಕಿನ 530 ಹಳ್ಳಿಗಳಿಗೆ ಹೊಸ ತಂತ್ರಜ್ಞಾನವನ್ನು ಅಳವಡಿಸಿ ಶುದ್ಧ ಕುಡಿಯುವ ನೀರನ್ನು 24*7 ಮಾದರಿಯಲ್ಲಿ ಸರಬರಾಜುಮಾಡಲಾಗುವುದೆಂದರು.

ಯೋಜನೆಯ ಬಗ್ಗೆ ಅರಿವು ಮೂಡಿಸಿ: ಪ್ರತಿ ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ ಒಎಚ್‌ಟಿ, ಸಿಸ್ಟನ್‌ಗಳಿಗೆ ಮೀಟರ್‌ ಅಳವಡಿಸಿ ನೀರು ಸರಬರಾಜು ಮಾಡಲಾಗುವುದು. ಪ್ರತಿಯೊಂದು ಗ್ರಾಮಗಳಲ್ಲಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಗ್ರಾಮಸ್ಥರಲ್ಲಿ ಯೋಜನೆಯ ಸದುಯೋಗದ ಬಗ್ಗೆ ಅರಿವು ಮೂಡಿಸಬೇಕೆಂದರು ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ನೀರನ್ನು ಮಿತವಾಗಿ ಬಳಸಿ: ನೀರನ್ನು ಹಿತಮಿತವಾಗಿ, ಸಮರ್ಪಕವಾಗಿ ಬಳಸುವಂತೆ, ಸ್ವತ್ಛತೆಗೆ, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಪಿಡಿಒ, ಕಾರ್ಯದರ್ಶಿ ಹಾಗೂ ವಾಟರ್‌ಮನ್‌ಗಳು ಸಮರ್ಪಕವಾಗಿ ನೀರಿನ ನಿರ್ವಹಣೆ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ತಿಳಿಸಿದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಂಜಿತಾ ಮಾತನಾಡಿ, ಜಾವಗಲ್‌ ಹೋಬಳಿಯ ಹಲವು ಹಳ್ಳಿಗಳು , ಹೊಸ ಬಡಾವಣೆಗಳು ಯೋಜನೆಯಡಿ ಕೈಬಿಟ್ಟಿದ್ದು ಅವುಗಳನ್ನು ಸೇರಿಸುವ ವ್ಯವಸ್ಥೆ ಮಾಡಲಾಗುವುದೆಂದರು. ಕೆಲವೊಂದು ಗ್ರಾಮಗಳಲ್ಲಿ ಒಎಚ್‌ಟಿ , ಜಿಎಲ್‌ಎಸ್‌ಆರ್‌ ಸೌಲಭ್ಯ ಇಲ್ಲದಿರುವ ಕಡೆ ಅವುಗಳ ನಿರ್ಮಾಣಕ್ಕೆ ಹಾಗೂ ಸಿಸ್ಟನ್‌ ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು.

ಮೀಟರ್‌ ಅಳವಡಿಕೆ ಮಾಡಲಾಗಿದ್ದು, ಅವುಗಳನ್ನು ದುಷ್ಕಮಿಗಳು ಹಾಳು ಮಾಡದಂತೆ ಅಧಿಕಾರಿಗಳು ವಾಟರ್‌ ಮನ್‌ಗಳು ಗಮನಹರಿಸುವಂತೆ ಸೂಚಿಸಿದರು. ಅರಸೀಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಪಿ ನಟರಾಜು ಮಾತನಾಡಿ, ಯೋಜನೆಯ ಸಂಪೂರ್ಣ ಯಶಸ್ಸಿಗೆ ಪಿಡಿಒ, ಕಾರ್ಯದರ್ಶಿ, ವಾಟರ್‌ಮನ್‌ಗಳ ಸಂಪೂರ್ಣ ಜವಾಬ್ದಾರಿಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯವೆಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮಹದೇವಪ್ಪ, ತಾಪಂ ಸದಸ್ಯರಾದ ವಿಜಯಕುಮಾರ್‌, ಬಸವರಾಜು, ಪ್ರಭಾಕರ್‌ , ಪಿಡಿಒ ಮಂಜುನಾಥ್‌, ಕಾರ್ಯದರ್ಶಿ ಈರೇಗೌಡ, ಮಾತನಾಡಿದರು. ಗ್ರಾಪಂ ಅಧ್ಯಕ್ಷ ಕುಮಾರ್‌ ನಾಯ್ಕ ಉಪಾಧ್ಯಕ್ಷೆ ಶಂಕರಮ್ಮ , ಎಪಿಎಂಸಿ ಸದಸ್ಯ ಧರ್ಮಪ್ಪ, ಹೋಬಳಿ ಪಿಡಿಒ ಗಳು ಕಾರ್ಯದರ್ಶಿಗಳು ವಾಟರ್‌ಮನ್‌ಗಳು, ಅ ಕಾರಿಗಳು, ಯೋಜನೆಯ ಗುತ್ತಿಗೆದಾರರು ಭಾಗವಹಿಸಿದ್ದರು.

ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ: ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಾವಗಲ್‌ ಪಟ್ಟಣ ಸೇರಿದಂತೆ ಹೋಬಳಿಯ ಸುಮಾರು, 23 ಗ್ರಾಮಗಳಿಗೆ ಯಗಚಿ ನೀರು ಸಮರ್ಪಕವಾಗಿ ಸರಬರಾಜು ಆಗದಿರುವುದರಿಂದ ಜಾವಗಲ್‌ ಪಟ್ಟಣವನ್ನು ಹೇಮಾವತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸೇರಿಸಿ ಕುಡಿಯುವ ನೀರಿನ ಸೌಲಭ್ಯ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನಮಾಡುವುದಾಗಿ ಶಾಸಕ ಶಿವಲಿಂಗೇಗೌಡ ಭರವಸೆನೀಡಿದರು.

183 ಹಳ್ಳಿಗಳಿಗೆ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡುತ್ತಿದೆ. 2020ರ ಜನವರಿ ಅಂತ್ಯಕ್ಕೆ ಎಲ್ಲಾ 530 ಗ್ರಾಮಗಳಿಗೂ ನೀರು ಸರಬರಾಜು ಮಾಡಲಾಗುವುದು.
-ಶ್ರೀನಿವಾಸ್‌, ಗ್ರಾಮೀಣ ಕುಡಿಯುವ ನೀರು ವ್ಯವಸ್ಥೆ ಎಇಇ

ಟಾಪ್ ನ್ಯೂಸ್

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.