ಬೀದಿಬದಿ ವ್ಯಾಪಾರಸ್ಥರು ಸಂಘಟಿತರಾಗಲಿ
Team Udayavani, Feb 15, 2019, 7:31 AM IST
ರಾಮನಾಥಪುರ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ರಾಜ್ಯ ಸರ್ಕಾರವು ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಡವರಬಂಧು ಕಾರ್ಯಕ್ರಮ ಜಾರಿಗೆ ತಂದಿದ್ದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಸ್ಥರು ಸಂಘಟಿತರಾಗಬೇಕು ಎಂದು ಜಿಪಂ ಮಾಜಿ ಸದಸ್ಯ ಎಚ್. ಎಸ್.ಶಂಕರ್ ಸಲಹೆ ನೀಡಿದರು.
ರಾಮನಾಥಪುರದಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕೊಡಗು ಹಾಗೂ ಹಾಸನ ಜಿಲ್ಲಾ ಘಟಕದ ವತಿಯಿಂದ ರಾಮನಾಥಪುರ ಗ್ರಾಮ ಪಂಚಾಯಿತಿ ಅವರಣದಲ್ಲಿ ಹೋಬಳಿಯ ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಒಕ್ಕೂಟದ ಸಮಿತಿ ರಚನೆಯ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.
ಗುರುತಿನ ಚೀಟಿ ಪಡೆಯಿರಿ: ತಮ್ಮ ವ್ಯಾಪ್ತಿಗೆ ಬರುವ ಸ್ಥಳೀಯಸಂಸ್ಥೆ, ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಪಾಲಿಕೆ ಮತ್ತು ಪುರಸಭೆಗಳಲ್ಲಿ ವ್ಯಾಪಾರದ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರಗಳನ್ನು ಪಡೆದರೆ ಮಾತ್ರ ಬಡವರ ಬಂಧು ಯೋಜನೆಯ ಸೌಲಭ್ಯಗಳನ್ನು ಹೊಂದಲು ಸಾಧ್ಯ ಎಂದರು.
ಸಂಘಟನೆ ಕೊರತೆ: ಕೊಡಗು ಮತ್ತು ಹಾಸನ ಜಿಲ್ಲಾಘಟಕದ ಅಧ್ಯಕ್ಷ ಕೆ.ಆರ್.ಜಗದೀಶ್ ಮಾತನಾಡಿ, ಸುಮಾರು ಇಪ್ಪತ್ತು ವರ್ಷಗಳಿಗೂ ಅಧಿಕ ಸಮಯದಿಂದ ರಾಮನಾಥಪುರದ ಬೀದಿಬದಿ ವ್ಯಾಪಾರಿಗಳು ಇದುವರೆಗೂ ಯಾವುದೇ ರೀತಿಯ ಸೌಲಭ್ಯವನ್ನು ಪಡೆದಕೊಳ್ಳದಿರುವುದು ದುರದೃಷ್ಟಕರ ಸಂಗತಿ. ತಮ್ಮಲ್ಲಿನ ಸಂಘಟನೆಯ ಕೊರತೆಯಿಂದಾಗಿ ಗುರುತಿನ ಚೀಟಿ ಮತ್ತು ಪ್ರಮಾಣಪತ್ರವನ್ನು ಪಡೆದುಕೊಂಡಿಲ್ಲ ಎಂದರು.
ಇನ್ನಾದರೂ ಗುರುತಿನಚೀಟಿ ಮತ್ತು ಪ್ರಮಾಣಪತ್ರ ಪಡೆಯಿರಿ ಎಂದು ಸಲಹೆ ನೀಡಿದರು. ರಾಜ್ಯಮಾನವ ಹಕ್ಕು ಜನಜಾಗೃತಿವೇದಿಕೆಯ ರಾಜ್ಯಾಧ್ಯಕ್ಷ ಗುರುಸ್ವಾಮಿ ಮಾತನಾಡಿ ಬೀದಿಬದಿ ವ್ಯಾಪಾರಿಗಳು ರಾಜ್ಯಾದ್ಯಂತ ಇಂದು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪದಾಧಿಕಾರಿಗಳ ಆಯ್ಕೆ: ರಾಮನಾಥಪುರ ಹೋಬಳಿಯ ನೂತನ ಅಧ್ಯಕ್ಷರಾಗಿ ಅಪ್ಪಾಜಿಶೆಟ್ಟಿ, ಉಪಾಧ್ಯಕ್ಷರಾಗಿ ಮೋಹನ್‌ಕುಮಾರ್, ಕಾರ್ಯದರ್ಶಿಯಾಗಿ ಕುಮಾರ್, ಮಹಿಳಾಘಟಕದ ಅಧ್ಯಕ್ಷರಾಗಿ ಚೇತನ, ಉಪಾಧ್ಯಕ್ಷರಾಗಿ ಉಷಾರನ್ನು ಈ ಸಂದರ್ಭದಲ್ಲಿ ಆಯ್ಕೆಮಾಡಲಾಯಿತು.
ರಾಮನಾಥಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನಚೀಟಿ ಮತ್ತು ಪ್ರಮಾಣಪತ್ರವನ್ನು ನೀಡಲು ಮನವಿಪತ್ರ ಸಲ್ಲಿಸಲಾಯಿತು. ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಉಸ್ತುವಾರಿ ಕೆ ರವಿ.ಕಾರ್ಯದರ್ಶಿ ಆರ್. ಸತೀಶ್, ಸಹಕಾರ್ಯದರ್ಶಿ ದೀಕ್ಷಿತ್ ಕೆ.ಟಿ. ಶ್ರೀನಿವಾಸ್. ಘಟಕದ ನೂತನ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.