ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಯೋಜನೆ ಆರಂಭ


Team Udayavani, Aug 4, 2019, 3:00 AM IST

student

ಹಾಸನ: ವಿದ್ಯಾರ್ಥಿ ದಿಸೆಯಿಂದಲೇ ದೇಶಪ್ರೇಮ, ಶಿಸ್ತು, ಕಾನೂನು ಸುವ್ಯವಸ್ಥೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಶನಿವಾರ ನಡೆದ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌(ಎನ್‌ಪಿಸಿ) ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ ಅವರು, ವಿದ್ಯಾರ್ಥಿ ದಿಸೆಯಿಂದಲೇ ಮಕ್ಕಳನ್ನು ಪ್ರಜ್ಞಾವಂತ ಪ್ರಜೆಗಳನ್ನಾಗಿ ರೂಪಿಸಬೇಕು. ಸದೃಢ ಭಾರತವನ್ನಾಗಿಸುವ ದೃಷ್ಟಿಯಿಂದ ಭಾರತದ ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್‌ ಕಲಾಂ ಅವರ ಕನಸಿನ ಕೂಸು ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ನ್ನು ಅನುಷ್ಠಾನ ಮಾಡಲಾಗಿದೆ ಎಂದರು.

ಕೇರಳದಲ್ಲಿ ಯೋಜನೆ ಆರಂಭ: 2010ರಲ್ಲಿ ಕೇರಳ ಸರ್ಕಾರ ಅಲ್ಲಿನ ಶಾಲೆಗಳಲ್ಲಿ ಈ ಯೋಜನೆ ಆರಂಭಿಸಿತು. ಅದರಂತೆ ಮಕ್ಕಳಲ್ಲಿ ನವ ನಾಗರಿಕ ಸಮಾಜದ ಸುಧಾರಣೆಗಾಗಿ ನಾಗರಿಕ ಜ್ಞಾನ, ಸಂವಿಧಾನ, ಕಾನೂನು ಅರಿವು ಮೂಡಿಸಿ ನಾಯಕತ್ವ, ಧೈರ್ಯ, ಆತ್ಮ ವಿಶ್ವಾಸ, ಸ್ವಯಂ ಶಿಸ್ತು, ಸಹಾನುಭೂತಿಯಂತಹ ನೈತಿಕ ಮೌಲ್ಯಗಳನ್ನು ಬೆಳಸಿ ಸಾಮಾಜಿಕ ಸುಧಾರಣೆ ಮಾಡುವುದು ಈ ಯೋಜನೆಯ ಧ್ಯೇಯವಾಗಿದೆ ಎಂದು ಹೇಳಿದರು.

ಹಾಸನ ಜಿಲ್ಲೆಯ 3 ಶಾಲೆಗಳ ಆಯ್ಕೆ: ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರಾದ್ಯಂತ ವಿಸ್ತರಿಸಿದೆ. ಕಳೆದ ಬಾರಿ ರಾಷ್ಟ್ರದ 87 ಜಿಲ್ಲೆಗಳ ಪೈಕಿ ಹಾಸನ ಜಿಲ್ಲೆಯ 3 ಶಾಲೆಗಳು ಈ ಯೋಜನೆಯ ತರಬೇತಿಗೆ ಆಯ್ಕೆಯಾಗಿದ್ದವು. ಪ್ರಸ್ತುತ ಸಾಲಿನಲ್ಲಿ ಕರ್ನಾಟಕದ 300 ಶಾಲೆಗಳು ಎಸ್‌ಪಿಸಿ ಯೋಜನೆಗೆ ಆಯ್ಕೆಯಾಗಿದ್ದು, ಒಟ್ಟು 13,200 ವಿದ್ಯಾರ್ಥಿಗಳು ಒಳಗೊಂಡಿದ್ದಾರೆ. ಇದರಲ್ಲಿ ಹಾಸನ ಜಿಲ್ಲೆಯ 10 ಶಾಲೆಗಳಿಂದ 440 ವಿದ್ಯಾರ್ಥಿಗಳನ್ನು 50:50 ಲಿಂಗಾನುಪಾತದಲ್ಲಿ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ನ ತರಬೇತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಅಶಿಸ್ತು ತಡೆಗಟ್ಟಿ: ಹಾಸನ ಉಪವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜು ಮಾತನಾಡಿ, ಸಮಾಜದಲ್ಲಿನ ಅಶಿಸ್ತನ್ನು ತಡೆಗಟ್ಟಿ ವೈಯಕ್ತಿಕ ಮತ್ತು ಸಮುದಾಯ ಶಿಸ್ತು ರೂಪಿಸುವ ಸಲುವಾಗಿ ಸ್ವಯಂ ಪೊಲೀಸ್‌ ವ್ಯವಸ್ಥೆಯನ್ನು ಅಭಿವೃದ್ಧಿ ಮಾಡಬೇಕು. ವಿದ್ಯಾರ್ಥಿ ದಿಸೆಯಿಂದಲೇ ಸ್ವಯಂ ಶಿಸ್ತು ರೂಢಿಸಿಕೊಂಡಲ್ಲಿ ಮುಂದೆ ಅವರೇ ಸಮಾಜವನ್ನು ತಿದ್ದಿ ಸುಸ್ಥಿರ ಸಮಾಜ ನಿರ್ಮಿಸುತ್ತಾರೆಂಬ ಆಶಯದಿಂದ ಜಿಲ್ಲೆಯಲ್ಲಿಯೂ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಅನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದರು.

ಇಂದಿನ ಯುವ ಜನಾಂಗ ಪರಿಸರ ಜ್ಞಾನವನ್ನು ಹೆಚ್ಚಾಗಿ ಬೆಳೆಸಿಕೊಳ್ಳುವುದರ ಮೂಲಕ ಸುತ್ತಮುತ್ತಲಿನ ಪ್ರಕೃತಿಗೆ ಹಾನಿಯುಂಟು ಮಾಡುವವರ ವಿರುದ್ಧ ಧ್ವನಿ ಎತ್ತಬೇಕು. ಸಮಾಜದಲ್ಲಿನ ದುರ್ಬಲರ ನೆರವಾಗಿ ಬದುಕುವಂತಹ ಕೆಲಸವನ್ನು ಮಾಡಬೇಕೆಂದು ಅವರು ತಿಳಿಸಿದರು. ನಂತರ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌.ನಂದಿನಿ ಅವರು ಮಾತನಾಡಿ ನಗರೀಕರಣ ಮತ್ತು ತಂತ್ರಜ್ಞಾನದ ಕಾರಣಕ್ಕಾಗಿ ಎಲ್ಲ ಸೌಲಭ್ಯಗಳೂ ಸುಲಭವಾಗಿದೆ.

ಅದರಲ್ಲೂ ಮೊಬೈಲ್‌ ನಮ್ಮ ದೇಹದ ಒಂದು ಅವಿಭಾಜ್ಯ ಅಂಗ ಎನ್ನುವ ಮಟ್ಟಕ್ಕೆ ನಮ್ಮನ್ನ ಆವರಿಸಿದೆ. ಆದರೆ ವಿದ್ಯಾರ್ಥಿಗಳಿಗೆ ಅದು ಅನವಶ್ಯಕ. ಸ್ವ-ಶಿಸ್ತು ಇದ್ದರೆ ಕುಟುಂಬ ಮತ್ತು ಸಮಾಜ ಆರೋಗ್ಯವಾಗಿರುತ್ತದೆ. ಹಾಗಾಗಿ ಮಕ್ಕಳ ಕೌಟುಂಬಿಕ ಸಮಸ್ಯೆಯ ಕುರಿತು ದೂರು ನೀಡಲು ಶಾಲೆಗಳಿಗೆ ನಿಗದಿತ ಸಮಯವನ್ನು ಕೊಟ್ಟಿದ್ದೇವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಮಹೇಶ್‌, ತರಬೇತಿಗೆ ಆಯ್ಕೆಯಾದ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಸ್ವಯಂ ರಕ್ಷಣಾ ಕಲೆ ತರಬೇತಿ: ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ಮಾನಸಿಕ ಮತ್ತು ದೈಹಿಕ ಸದೃಢತೆ, ಸ್ವಯಂ ರಕ್ಷಣಾ ಕಲೆ ಬಗ್ಗೆ ಪ್ರಾಯೋಗಿಕವಾಗಿ ತರಬೇತುಗೊಳಿಸಲಾಗುತ್ತದೆ. ಸಂಚಾರಿ ನಿಯಮಗಳು, ಅಪರಾಧಗಳನ್ನ ತಡೆಯುವುದರ ಬಗ್ಗೆಯೂ ತಿಳಿಸಬೇಕು. ಸಮಾಜದಲ್ಲಿರುವ ದುಶ್ಚಟಗಳಾದ ಡ್ರಗ್ಸ್‌, ಅಫೀಮು, ಸಿಗರೇಟ್‌, ಗುಟ್ಕಾ, ಮದ್ಯಪಾನದಂತಹ ದುಶ್ಚಟಗಳ ನಿರ್ಮೂಲನೆ ಮಾಡುವುದು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬಗ್ಗೆ ತರಬೇತಿಯನ್ನು ನೀಡಬೇಕು. ವಿದ್ಯಾರ್ಥಿ ಜೀವನದಲ್ಲಿ ಎಲ್ಲವನ್ನೂ ಸಾಧಿಸುವ ಹಂಬಲರುವುದರಿಂದ ರಚನಾತ್ಮಕ ಯೋಜನೆಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಸೂಚಿಸಿದರು.

ಧನಾತ್ಮಕ ಚಿಂತನೆ ಅಗತ್ಯ: ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಆರ್‌ಪಿ 11ನೇ ಬೆಟಾಲಿಯನ್‌ನ ಕಮಾಂಡೆಂಟ್‌ ಕೃಷ್ಣಪ್ಪ ಅವರು ಮಾತನಾಡಿ, ಪ್ರತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಯಲ್ಲಿ ಇತರೆ ಸಾಮಾಜಿಕ ಕಾರ್ಯಗಳನ್ನು ಮಾಡುವಂತೆ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಯಾವಾಗಲೂ ಧನಾತ್ಮಕ ಅಥವಾ ರಚನಾತ್ಮಕ ಯೋಚನೆಗಳನ್ನು ರೂಪಿಸಿಕೊಳ್ಳಬೇಕು ಎಂದರು. ಭಾರತವು ಜಗತ್ತಿನಲ್ಲಿಯೇ ಅತಿ ಹೆಚ್ಚು ನೈಸರ್ಗಿಕ ಸಂಪತ್ತು ಹೊಂದಿರುವ ಶ್ರೀಮಂತ ರಾಷ್ಟ್ರ. ಆದರೆ ಅದನ್ನ ಉಳಿಸಿಕೊಳ್ಳುವ ಪ್ರಜ್ಞೆ ನಮ್ಮಲ್ಲಿಲ್ಲ. ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ನಾವೆಲ್ಲ ಆಮ್ಲಜನಕದ ಬಾರ್‌ಗಳಿಗೆ ಹೋಗುವ ಸ್ಥಿತಿ ನಿರ್ಮಾಣವಾಗುತ್ತದೆಂದು ಆತಂಕ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.