ಆಲೂಗಡ್ಡೆಗೆ ಸಬ್ಸಿಡಿ ನೀಡಿ: ರೇವಣ್ಣ ಆಗ್ರಹ
Team Udayavani, May 12, 2020, 6:48 AM IST
ಸಾಂದರ್ಭಿಕ ಚಿತ್ರ
ಹಾಸನ: ಬಿತ್ತನೆ ಆಲೂಗಡ್ಡೆಗೆ ತಕ್ಷಣವೇ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿತ್ತನೆ ಆಲೂಗಡ್ಡೆ ಮಾರಾಟ ಆರಂಭವಾಗಿದೆ. ಈಗ ಜಿಲ್ಲಾಡಳಿತ ನಿಗದಿಪಡಿಸಿದ ದರ 2,250 ರೂ. ಹೆಚ್ಚಾಗಿದೆ. ಜಿಲ್ಲಾಧಿಕಾರಿಯವರು ಮಾಹಿತಿ ಪಡೆದು ದರ ನಿಗದಿಪಡಿಸಬೇಕಾಗಿತ್ತು. ಸಹಾಯಧನ ನೀಡಿದ್ದರೆ ರೈತರಿಗೆ ಹೊರ ಕಡಿಮೆ ಯಾಗುತ್ತಿತ್ತು. ಹಾಗಾಗಿ ಸರ್ಕಾರ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಆಲೂಗಡ್ಡೆ ಬೆಳೆಗಾರರಿಗೆ ಸಹಾಯ ಧನ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ನಾನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ್ದೆ . ನಾನು ಸಲ್ಲಿಸಿದ ಮನವಿ ಪತ್ರದ ಮೇಲೆ ಕ್ರಮ ಕೈಗೊಳ್ಳಿ ಎಂದು ಲಿಖಿತ ವಾಗಿ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರು. ಆದರೆ ಇದುವರೆಗೂ ಸಹಾಯಧನ ಬಗ್ಗೆ ಸರ್ಕಾರದಿಂದ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ನೀಡಿದ ಸೂಚನೆಗೆ ಬೆಲೆಯೇ ಇಲ್ಲವೇ ಎಂದು ಅವರು ಪ್ರಶ್ನಿಸಿದರು.
ರೈತರ ವಿಚಾರದಲ್ಲಿ ಮುಖ್ಯಮಂತ್ರಿ ರಾಜಕೀಯ
ಮಾಡಬಾರದು. ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಮೇಲೆ ರಾಜಕೀಯ ದ್ವೇಷ ಸಾಧಿಸಿ ಅನುದಾನ ನಿಲ್ಲಿಸಿದ್ದಾರೆ. ಎಷ್ಟುದಿನ ದ್ವೇಷದ ರಾಜಕಾರಣ ಮಾಡುತ್ತಾರೋ ಮಾಡಲಿ. ನಮಗೆ ಅವಕಾಶ ಸಿಕ್ಕಿದಾಗ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತೇವೆ. ಈಗ ಆಲೂಗಡ್ಡೆ ಬೆಳೆಗಾರರಿಗೂ ಸಹಾಯ ಧನ ನೀಡದೆ ಸ್ವೇಷ ಸಾಧಿಸುವುದು ಬೇಡ. ಹಾಸನ ಜಿಲ್ಲೆಯ ರೈತರ ಮೇಲೂರಾಜಕೀಯ ಹಗೆ ಸಾಧಿಸಲು ಮುಂದಾದರೆ ಬಿಜೆಪಿಗೆ ತಿರುಗು ಬಾಣವಾಗುತ್ತದೆ ಎಂದು ರೇವಣ್ಣ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.