ಬೆಂಬಲ ಬೆಲೆ: ರಾಗಿ ಖರೀದಿ ಶುರು


Team Udayavani, Dec 19, 2021, 2:16 PM IST

ಬೆಂಬಲ ಬೆಲೆ: ರಾಗಿ ಖರೀದಿ ಶುರು

ಹಾಸನ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ  ಮತ್ತು ರಾಗಿ ಖರೀದಿಯ ಪ್ರಕ್ರಿಯೆ ಆರಂಭವಾಗಿದ್ದು, ರೈತರು ಫ್ರೂಟ್ಸ್‌ ತಂತ್ರಾಂಶದ ಗುರುತಿನ ಪತ್ರ ನೀಡಿ ಡಿ.30 ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಆಹಾರ ಇಲಾಖೆ ಉಪ ನಿರ್ದೇಶಕರು ಸೂಚಿಸಿದ್ದಾರೆ.

ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕೆಟಿಂಗ್‌ ಫೆಡರೇಷನ್‌) ದಿಂದ ಪ್ರತಿ ಕ್ವಿಂಟಲ್‌ ಭತ್ತವನ್ನು 1940 ರೂ.ನಿಂದ 1969 ರೂ., ರಾಗಿಯನ್ನು 3377 ರೂ. ದರದಲ್ಲಿಖರೀದಿಸಲಾಗುವುದು. ಖರೀದಿ ಕೇಂದ್ರದಲ್ಲಿ ಭತ್ರ ಮತ್ತು ರಾಗಿ ಮಾರಾಟ ಮಾಡಿದ ರೈತರ ಬ್ಯಾಂಕ್‌ ಖಾತೆಗಳಿಗೆ ಹಣವನ್ನು ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕ್ವಿಂಟಲ್‌ ಸಾಮಾನ್ಯ ದರ್ಜೆ ಭತ್ತವನ್ನು 1,940 ರೂ. ದರಲ್ಲಿ ಹಾಗೂ ಭತ್ತ ಗ್ರೇಡ್‌ ಎ ಭತ್ತವನ್ನು 1,960 ರೂ.ದರದಲ್ಲಿ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಲ್‌ ವರೆಗೆ ಪ್ರತಿ ಎಕರೆಗೆ 25 ಕ್ವಿಂಟಲ್‌ನಂತೆ ಖರೀದಿಸಲಾಗುವುದು. ರಾಗಿಯನ್ನು ಪ್ರತಿ ಕ್ವಿಂಟಲ್‌ಗೆ 377 ರೂ. ದರದಲ್ಲಿ ಎಕರೆಗೆ 10 ಕ್ವಿಂಟಲ್‌ನಂತೆ ಪ್ರತಿರೈತರಿಂದ ಗರಿಷ್ಠ 20 ಕ್ವಿಂಟಲ್‌ ಖರೀದಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನ ಜಿಲ್ಲೆಯ ಈ ಕೆಳಕಂಡ ತಾಲೂಕಿನ ಸ್ಥಳಗಳಲ್ಲಿ ರೈತರು ಕೃ ಇಲಾಖೆುಂದ ಜಾರಿಗೊಳಿಸಿರುವ ಫ್ರೂಟ್ಸ್‌ ತಂತ್ರಾಂಶದ ಗುರುತಿನ ಪತ್ರ ನೀಡಿ ಡಿ.31 ರೊಳಗೆ ನೋಂದಣಿ ಮಾಡಬಹುದಾಗಿದೆ.ಜಿಲ್ಲೆಯ ರೈತರು ಈ ಸದವಕಾಶವನ್ನು ಬಳಸಿಕೊಳ್ಳಬೇಕು. ಆಲೂರು ಮತ್ತು ಹಾಸನ ತಾಲೂಕಿನ ರೈತರಿಂದ ಭತ್ತ ಮತ್ತು ರಾಗಿಯನ್ನು ಹಾಸನದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ,ಅರಕಲಗೂಡು ತಾಲೂಕಿನ ರೈತರಿಂದ ಅರಕಲಗೂಡು ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿ ಖರೀದಿಸಲಾಗುತ್ತದೆ.

ಬೇಲೂರು ತಾಲೂಕಿನ ರೈತರಿಂದ ಬೇಲೂರು ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿ, ಚನ್ನರಾಯ ಪಟ್ಟಣ ತಾಲೂಕಿನ ರೈತರಿಂದ ಚನ್ನರಾಯಪಟ್ಟಣದ ಕೃಷಿ ಉತ್ಪನ್ನಮಾರುಕಟ್ಟೆ ಪ್ರಾಂಗಣದಲ್ಲಿ ಮತ್ತು ನುಗ್ಗೇಹಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಭತ್ತ ಮತ್ತು ರಾಗಿಯನ್ನು ಖರೀದಿಸಲಾಗುತ್ತದೆ ಎಂದು ಹೇಳಿದ್ದಾರೆ.

ಹೊಳೆನರಸೀಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹೊಳೆನರಸೀಪುರ ತಾಲೂಕಿನ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲಾಗುವುದು. ಸಕಲೇಶಪುರ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸಕಲೇಶಪುರ ತಾಲೂಕಿನರೈತರಿಂದ ಭತ್ತ ಮಾತ್ರ ಖರೀದಿಸಲಾಗುವುದು ಎಂದಿದ್ದಾರೆ. ಅರಸೀಕೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ, ಜಾವಗಲ್‌ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ, ಗಂಡಸಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ , ಜೆ.ಸಿ ಪುರದಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣ ಹಾಗೂ ಬಾಣಾವಾರದಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರಾಗಿಯನ್ನು ಮಾತ್ರ ಖರೀದಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಮಾರ್ಗಸೂಚಿಗಳು :

ಭತ್ತವನ್ನು ರೈತರು ಚೀಲಗಳಲ್ಲಿ ತಂದು ಅಕ್ಕಿ ಗಿರಣಿಗೆ ಸಲ್ಲಿಸಿದಾಗ ಪ್ರತಿ ಕ್ವಿಂಟಲ್‌ ಚೀಲಕ್ಕೆ 6 ರೂ.ನಂತೆ ಖರೀದಿ ಏಜೆನ್ಸಿಗಳು ಪಾವತಿ ಮಾಡತಕ್ಕದ್ದು. ರೈತರು ಭತ್ತವನ್ನುಒಮ್ಮೆ ಬಳಸಿದ ಉತ್ತಮ ಗುಣಮಟ್ಟದ ಗೋಣಿ ಚೀಲದಲ್ಲಿಯೇ ಮಾರಾಟಕ್ಕೆ ತರಬೇಕು. ಗೋಣಿ ಚೀಲ ಖರೀದಿ ವೆಚ್ಚ ಪ್ರತಿ 50 ಕೆ.ಜಿ. ಚೀಲಕ್ಕೆ 22 ರೂ. ನಂತೆ ನೇರ ನಗದು ವರ್ಗಾವಣೆಯನ್ನು ರೈತರಿಗೆ ರೈತರಿಗೆ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಯ ಬಗ್ಗೆ ಸಮಸ್ಯೆಗಳು ಉದ್ಭವಿದಲ್ಲಿ ಕೂಡಲೇ ಆಯಾ ತಾಲೂಕಿನಆಹಾರ ಶಿರಸ್ತೇದಾರರು, ಆಹಾರ ನಿರೀಕ್ಷಕರನ್ನಾಗಲೀಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರೀಕರ ಸರಬರಾಜು ಇಲಾಖೆ ಉಪ ನಿರ್ದೇಶಕರು ಸೂಚಿಸಿದ್ದಾರೆ

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.