ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಅರಕಲಗೂಡು ಸಂತ್ರಸ್ತನಿಂದ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲು

Team Udayavani, Jun 23, 2024, 7:05 AM IST

ಅನೈಸರ್ಗಿಕ ಲೈಂಗಿಕ ಕ್ರಿಯೆ: ಸೂರಜ್‌ಗೂ ಬಂಧನ ಭೀತಿ

ಹಾಸನ: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರ ಹಿರಿಯ ಪುತ್ರ, ವಿಧಾನ ಪರಿಷತ್‌ ಸದಸ್ಯ ಡಾ| ಸೂರಜ್‌ ರೇವಣ್ಣ ವಿರುದ್ಧದ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ.

ದೂರಿನ ಬೆನ್ನಲ್ಲೇ ಸೂರಜ್‌ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಶನಿವಾರ ರಾತ್ರಿ ಹಾಸನದ ಸೆನ್‌ ಠಾಣೆಗೆ ಕರೆ ದೊಯ್ದು ವಿಚಾರಣೆ ಆರಂಭಿಸಿದ್ದಾರೆ.

ಏನಿದು ಪ್ರಕರಣ?
ಸೂರಜ್‌ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. 16ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಸೂರಜ್‌ ಮತ್ತು ಹನುಮನಹಳ್ಳಿಯ ಶಿವ ಕುಮಾರ್‌ ಎಂಬವರಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ಅವರಿಬ್ಬರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೊಳೆನರಸೀಪುರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಅರಕಲಗೂಡು ತಾಲೂಕಿನ ಸಂತ್ರಸ್ತ ಯುವಕ ಮನವಿ ಮಾಡಿದ್ದಾನೆ. ಹೊಳೆ ನರಸೀಪುರ ಗ್ರಾಮಾಂತರ ಪೊಲೀಸರು ಐಪಿಸಿ ಕಲಂ 377, 342, 506, 34ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಂತ್ರಸ್ತ ಯುವಕ 14 ಪುಟಗಳ ದೂರು ಬರೆದು, ಬೆಂಗಳೂರಿನಲ್ಲಿ ಡಿಜಿಪಿ ಕಚೇರಿಗೂ ನೀಡಿದ್ದ. ಆ ದೂರಿನ ಪ್ರತಿಯು ಹಾಸನ ಎಸ್‌ಪಿಗೂ ಇಮೇಲ್‌ ಮೂಲಕ ತಲುಪಿತ್ತು. ಜತೆಗೆ ಸಿಎಂ, ಡಿಸಿಎಂ, ಗೃಹ ಸಚಿವರಿಗೂ ದೂರಿನ ಪ್ರತಿಯನ್ನು ರವಾನಿಸಿದ್ದ ಎನ್ನಲಾಗಿದೆ.

ಹಾಸನ ಎಸ್‌ಪಿ ಕಚೇರಿಗೆ ಬಂದ ದೂರನ್ನು ಹೊಳೆನರಸೀಪುರ ಗ್ರಾಮಾಂ ತರ ಠಾಣೆಗೆ ವರ್ಗಾಯಿಸಲಾಗಿದ್ದು, ಪ್ರಕರಣ ದಾಖಲಿಸಿ ದೂರಿನ ಸತ್ಯಾಸತ್ಯ ಅರಿಯಲು ದೂರುದಾರನನ್ನು ಸಂಪ ರ್ಕಿಸಿ ಮಾಹಿತಿ ಪಡೆಯುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೂರು ದಾರನನ್ನು ಸಂಪರ್ಕಿಸಿದ ಹೊಳೆನರಸೀ ಪುರ ಪೊಲೀಸರು ಠಾಣೆಗೆ ಬಂದು ದೂರು ದಾಖಲಿಸಬೇಕು ಎಂದು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಯುವಕ ಬೆಂಗಳೂರಿನಿಂದ ಬಂದು ದೂರು ದಾಖಲಿಸಿದ್ದಾನೆ.

ಸೂರಜ್‌ ರೇವಣ್ಣ ವಿಚಾರಣೆ
ಸಂತ್ರಸ್ತ ಯುವಕ ಹಣಕ್ಕಾಗಿ ಬ್ಲ್ಯಾಕ್‌ವೆುàಲ್‌ ಮಾಡಿದ ಸಂಬಂಧದ ಆಡಿಯೋ ಗಳನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ಇನ್ನಷ್ಟು ಆಡಿಯೋ ಸೇರಿ ಹಲವು ದಾಖಲೆಗಳನ್ನು ಪಡೆಯುವ ಪ್ರಯತ್ನ ಮುಂದುವರಿಸಿದ್ದಾರೆ.

ಸಂತ್ರಸ್ತನ ವಿರುದ್ಧವೇ ಎಫ್ಐಆರ್‌
ಸೂರಜ್‌ ವಿರುದ್ಧ ಗಂಭೀರ ಆರೋಪ ಮಾಡಿರುವ ಸಂತ್ರಸ್ತನ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 384, 506ರ ಅಡಿಯಲ್ಲಿ ಶುಕ್ರವಾರ ಎಫ್ಐಆರ್‌ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ ಆರೋಪ ಮತ್ತು ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಗ್ಗೆ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್‌ ಎಂಬವರು ನೀಡಿರುವ ದೂರು ಆಧರಿಸಿ ಎಫ್ಐಆರ್‌ ದಾಖಲಾಗಿದೆ. 5 ಕೋಟಿ ರೂ. ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್‌ ದಾಖಲಿಸುತ್ತೇನೆಂದು ಯುವಕ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ಸೂರಜ್‌ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳುತ್ತಿರುವ ಯುವಕ ಆರಂಭದಲ್ಲಿ 5 ಕೋ.ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಅನಂತರ 3, ಬಳಿಕ 2 ಕೋಟಿ ರೂ.ಗೆ ಬಂದ. ಆದರೆ ಸೂರಜ್‌ ನಿರಾಕರಿಸಿದಾಗ ಆತ ದೂರು ನೀಡಿದ್ದಾನೆ ಎಂದು ಸೂರಜ್‌ ಬ್ರಿಗೇಡ್‌ ಖಜಾಂಚಿ ಶಿವಕುಮಾರ್‌ ದೂರಿನಲ್ಲಿ ತಿಳಿಸಿದ್ದಾರೆ.

ಯಾವ ಸೆಕ್ಷನ್‌? ಏನು ಶಿಕ್ಷೆ ?
-377-ಅಸಹಜ ಲೈಂಗಿಕ ಕ್ರಿಯೆ
(ಜೀವಾವಧಿ ಶಿಕ್ಷೆ ಅಥವಾ 10 ವರ್ಷ ಜೈಲು ಹಾಗೂ ದಂಡ)
-342-ವ್ಯಕ್ತಿಯ ಅಕ್ರಮ ಬಂಧನ
(1 ವರ್ಷದವರೆಗಿನ ಸಾಧಾರಣ ಜೈಲು ಶಿಕ್ಷೆ ಮತ್ತು ದಂಡ)
-506-ಬೆದರಿಕೆ (2 ವರ್ಷದವರೆಗೆ ಜೈಲಿನ ವಾಸ ಮತ್ತು ದಂಡ)
-34- ಪ್ರಕರಣದಲ್ಲಿ ಹಲವರು ಭಾಗಿ

ಆರೋಪವನ್ನು ಖಡಾಖಂಡಿತವಾಗಿ ನಿರಾಕರಿಸುತ್ತೇನೆ. ಈಗಾಗಲೇ ನನ್ನ ಮೇಲೆ ಎಫ್ಐಆರ್‌ ದಾಖಲಾಗಿರುವುದರಿಂದ ಈಗ ಹೆಚ್ಚಿಗೆ ಏನನ್ನೂ ಹೇಳಲಾರೆ. ಈ ನೆಲದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ದೂರಿನ ಕುರಿತು ತನಿಖೆ ನಡೆಯಲಿ. ನನ್ನ ಮೇಲಿನ ರಾಜಕೀಯ ಷಡ್ಯಂತ್ರಕ್ಕೆ ಕಾಲವೇ ಉತ್ತರ ನೀಡಲಿದೆ. ಈ ಎಲ್ಲ ಕುತಂತ್ರಗಳಿಗೆ ನಾನು ಜಗ್ಗುವುದಿಲ್ಲ.
– ಸೂರಜ್‌ ರೇವಣ್ಣ, ವಿಧಾನ ಪರಿಷತ್‌ ಸದಸ್ಯ

ಸೂರಜ್‌ ರೇವಣ್ಣ ವಿರುದ್ಧ ದಾಖಲಾದ ದೂರಿನ ಬಗ್ಗೆ ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ಮಾಹಿತಿಯಿಲ್ಲ. ಅವರ ಕುಟುಂಬದಲ್ಲಿ ದೊಡ್ಡ ದೊಡ್ಡವರಿದ್ದಾರೆ. ಅವರು ಉತ್ತರ ಕೊಡುತ್ತಾರೆ.
-ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಈ ವಿಷಯವನ್ನೆಲ್ಲ ನನ್ನ ಹತ್ತಿರ ಏಕೆ ಚರ್ಚೆ ಮಾಡುತ್ತೀರಿ? ಅದರ ಆವಶ್ಯಕತೆ ಏನಿದೆ? ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಿದ್ದರೆ ಚರ್ಚೆ ಮಾಡಿ. ಕಾನೂನಿದೆ, ಕಾನೂನು ನೋಡಿಕೊಳ್ಳುತ್ತದೆ. ಈ ರೀತಿಯ ದೂರುಗಳು ಏಕೆ ಬರುತ್ತವೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ತಲೆ ಕೆಡಿಸಿಕೊಳ್ಳಬೇಡಿ.
-ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.