ಜಿಲ್ಲೆಗೆ ಪ್ರವೇಶಿಸುವವರ ಮೇಲೆ ಕಣ್ಗಾವಲು
ಮೇ 3ರವರೆಗೂ ಅಂತರ ಜಿಲ್ಲಾ ಸಂಚಾರ ಸಂಪೂರ್ಣ ಸ್ಥಗಿತ : ಡೀಸಿ ಗಿರೀಶ್
Team Udayavani, Apr 18, 2020, 3:07 PM IST
ಹಾಸನ: ಕೋವಿಡ್ -19 ಸೋಂಕು ನಿಯಂತ್ರಿಸಲು ಇನ್ನೂ ಮೂರು ವಾರ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಹೊರಗಿನಿಂದ ಜಿಲ್ಲೆಯನ್ನು ಪ್ರವೇಶಿಸುವವರ ಮೇಲೆ ಕಣ್ಗಾವಲಿಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಪ್ರಕರಣಗಳು ಕಂಡು ಬಂದಿಲ್ಲ. ಇದೇ ಪರಿಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗಲು ಜನರು ಸಹಕಾರ ನೀಡಬೇಕು. ಹೊರ ಜಿಲ್ಲೆಯವರು ಹಾಸನ ಜಿಲ್ಲೆಗೆ ಪ್ರವೇಶಿಸುವುದನ್ನು ತಡೆಯಲು ಗಡಿಯಲ್ಲಿ 15 ಚೆಕ್‌ಪೋಸ್ಟ್ ಹಾಗೂ ನಗರ ಹಾಗೂ ಪಟ್ಟಣಗಳಲ್ಲಿ 23 ಸೇರಿ ಒಟ್ಟು 38 ಚೆಕ್ ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅನುಮತಿ ಪಡೆದು ಬರುತ್ತಿರುವವನ್ನು ಚೆಕ್‌ಪೋಸ್ಟ್‌ಗಳಲ್ಲಿಯೇ ಪರೀಕ್ಷೆ ಮಾಡಿಸೀಲ್ ಹಾಕಿ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗುತ್ತಿದೆ.
ಚೆಕ್‌ಪೋಸ್ಟ್‌ನಲ್ಲಿರುವವರ ಕಣ್ತಪ್ಪಿಸಿ ಒಳ ದಾರಿಗಳ ಮೂಲಕ ಹೊರ ಜಿಲ್ಲೆಗಳಿಂದ ಬರುವವರ ಬಗ್ಗೆ ಪಿಡಿಒಗಳು ನಿಗಾ ವಹಿಸಲಿದ್ದಾರೆ. ಅಂತಹವರು ಪತ್ತೆಯಾದರೆ 15 ದಿನ ಕ್ವಾರಂ ಟೈನ್‌ನಲ್ಲಿಡಲಾಗುವುದು. ಮೇ3 ರವರೆಗೂ ಅಂತರ ಜಿಲ್ಲಾ ಸಂಚಾರಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
500 ರೂ., 1000 ರೂ. ದಂಡ: ಪೊಲೀಸ್ ಸಿಬ್ಬಂದಿಯ ಜೊತೆಗೆ ಕೆಎಸ್‌ಆರ್‌ಟಿಸಿಯ 50 ನೌಕರರನ್ನು ಸೇವೆ ಸೇರಿಸಿಕೊಳ್ಳಲಾಗಿದೆ. ನಿಯಮ ಉಲ್ಲಂಘಿಸಿ ಓಡಾಡುವ ಬೈಕ್ ಸವಾರರಿಗೆ 500 ರೂ., ಲಘು ವಾಹನಗಳಿಗೆ ಸಾವಿರ ರೂ. ದಂಡ ವಿಧಿಸಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳದ ದಿನಸಿ, ತರಕಾರಿ ಅಂಗಡಿ ಮಾಲೀಕರಿಗೆ 500 ರೂ. ದಂಡ ವಿಧಿಸಲಾಗುವುದು ಎಂದರು.
1.20 ಕೋಟಿ ರೂ. ಖರ್ಚು: ಕೋವಿಡ್ -19 ನಿಯಂತ್ರಣ ಕ್ರಮಗಳಿಗೆ ಸರ್ಕಾರ ಹಾಸನ ಜಿಲ್ಲೆಗೆ 1.20 ಕೋಟಿ ರೂ. ಬಿಡುಗಡೆ ಮಾಡಿತ್ತು. ಅದರಲ್ಲಿ ಒಂದು ಕೋಟಿ ರೂ.ಗಳನ್ನು ಅಗತ್ಯ ಸಾಮಗ್ರಿಗಳ ಖರೀದಿಗೆ ಬಳಸಲಾಗುತ್ತಿದೆ. ಎಲ್ಲಾ ತಹಶೀಲ್ದಾರಿಗೂ ತಲಾ 2 ಲಕ್ಷ ರೂ. ಬಿಡುಗಡೆ ಮಾಡಿ. ಎನ್ ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮಾಗದರ್ಶಿ ಸೂತ್ರಗಳ ಪ್ರಕಾರ ಖರ್ಚು ಮಾಡಬೇಕೆಂದು ಲಿಖೀತ ಸೂಚನೆ ನೀಡಿದ್ದು, ಹಣದ ಅಗತ್ಯವಿದ್ದರೆ ಮತ್ತೆ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈರುಳ್ಳಿ, ಬೆಳ್ಳುಳ್ಳಿ ಮಾರಾಟ: ಜಿಲ್ಲೆಯ 175 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಈರುಳ್ಳಿ, ಬೆಳ್ಳುಳ್ಳಿ ಮಾರಾಟದ ವ್ಯವಸ್ಥೆ ಮಾಡಿದ್ದು, ರೈತರು ಬೆಳೆದ ಹಣ್ಣು, ತರಕಾರಿ ಮಾರಾಟವಾಗದೇ ನಷ್ಟವಾಗಿದ್ದರೆ ಅದರ ಬಗ್ಗೆ ಸಮೀಕ್ಷೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
2912 ಕೇಸ್ ದಾಖಲು: ಎಸ್ಪಿ ಶ್ರೀನಿವಾಸಗೌಡ ಮಾತನಾಡಿ, ಲಾಕ್‌ಡೌನ್ ಉಲ್ಲಂಘನೆ ಸಂಬಂಧ 2,912 ಕೇಸ್ ದಾಖಲು ಮಾಡಿದ್ದು, 16.13 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದುವರೆಗೂ 188 ಜನರು ಒಳದಾರಿಗಳಲ್ಲಿ ನುಸುಳಿ ಬಂದಿದ್ದು, ಅವರನ್ನು ಪತ್ತೆಹಚ್ಚಿ ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ತಿಳಿಸಿದರು.
ನರೇಗಾದಡಿ 1,944 ಕಾಮಗಾರಿ: ಜಿಪಂ ಸಿಇಒ ಪರಮೇಶ್ ಅವರು ಮಾತನಾಡಿ, ಲಾಕ್‌ಡೌನ್ ಜಾರಿಯ ನಂತರ ಕೆಲಸದ ಅಗತ್ಯವಿದ್ದವರಿಗೆ ಮಹಾತ್ಮಗಾಂಧಿ ನರೇಗಾಡಡಿ 1,944 ಕಾಮಗಾರಿ ಆರಂಭವಾಗಿವೆ ಎಂದರು. ಡಿಎಚ್‌ಒ ಡಾ.ಸತೀಶ್ ಕುಮಾರ್, ಉಪವಿಭಾಗಾಧಿಕಾರಿ ಡಾ.ನವೀನ್‌ಭಟ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.