ಚುನಾವಣಾ ಅಕ್ರಮಗಳ ತಡೆಗೆ ಕಟ್ಟೆಚ್ಚರ ವಹಿಸಿ
Team Udayavani, Apr 21, 2018, 12:37 PM IST
ಹಾಸನ: ವಿಧಾನಸಭಾ ಚುನಾವನೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಂದೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣೆಗಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಂದು ಅಂಶವನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸಬೇಕು. ಎಲ್ಲಾ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಅಭ್ಯìರ್ಥಿಗಳ ಚುನಾವಣಾ ವೆಚ್ಚಗಳ ಬಗ್ಗೆ ಅತ್ಯಂತ ಹೆಚ್ಚಿನ ಗಮನ ಹರಿಸಬೇಕು. ಚುನಾವಣೆಯ ಜಿಲ್ಲಾ ಲೆಕ್ಕ ವೆಚ್ಚ ಅಧಿಕಾರಿಗಳು ಎಲ್ಲಾ ತಾಲೂಕುಗಳಿಂದ ಪ್ರತಿನಿತ್ಯ ಮಾಹಿತಿ ಪಡೆದು ಕ್ರೂಢೀಕರಿಸಿ ವಿವರ ನೀಡಬೇಕು. ಜಿಲ್ಲಾಧಿಕಾರಿ ಕಚೇರಿಯ ದೂರು ಕೋಶದಲ್ಲಿ ಬರುವ ದೂರುಗಳ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದರು.
ತಾಲೂಕು ಮಟ್ಟದಲ್ಲಿ ಸ್ಥಾಪನೆಯಾಗಿರುವ ದೂರುಕೋಶಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರೂಢೀಕರಿಸಿ ಕೈಗೊಳ್ಳುವ ಕ್ರಮಗಳ ಬಗ್ಗೆ ಪ್ರತಿ ದಿನ ವಿವರ ಒದಗಿಸಬೇಕು ಎಂದು ದೂರು ನಿರ್ವಹಣಾ ಕೋಶದ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ರಂದೀಪ್ ಸೂಚನೆ ನೀಡಿದರು.
ಪೋಸ್ಟಲ್ ಬ್ಯಾಲೆಟ್ ನಿರ್ವಹಣಾ ಜವಾಬ್ದಾರಿ ಅತ್ಯಂತ ಮಹತ್ವದ್ದು. ಇದನ್ನು ಎಚ್ಚರಿಕೆಯಿಂದ ನಿರ್ವಹಿಸುವಂತೆ ನೋಡಲ್ ಅಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಯವರು ಚುನಾವಣಾ ಕರ್ತವ್ಯದಲ್ಲಿ ಪಾಲ್ಗೊಳ್ಳುವ ಯಾವುದೇ ಸಿಬ್ಬಂದಿ ಮತದಾನದ ಸೌಲಭ್ಯದಿಂದ ವಂಚಿತರಾಗದಂತೆ ಅಥವಾ ಮತದಾನದಿಂದ ಹೊರಗುಳಿಯದಂತೆ ಗಮನ ಹರಿಸಿ ಸ್ವೀಪ್ ಸಮಿತಿಯು ಚುನಾವಣಾ ಸಿಬ್ಬಂದಿ ತರಬೇತಿ ಸಂದರ್ಭಗಳಲ್ಲಿ ಹಾಜರಿದ್ದು ಕಡ್ಡಾಯವಾಗಿ ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ಮಾಧ್ಯಮ ದೃಢೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯು ಸುದ್ದಿಮಾಧ್ಯಮಗಳಿ ಬರುವ ಜಾಹೀರಾತು ಮತ್ತು ಪಾವತಿ ಸುದ್ದಿಗಳ ಬಗ್ಗೆ ನಿಗಾ ವಹಿಸಬೇಕು ಮತ್ತು ಕಾಲಕಾಲಕ್ಕೆ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕಾಗಿದ್ದು ಎನ್.ಐ.ಸಿ. ನೇತ„ತ್ವದಲ್ಲಿ ಇದರ ಜವಾಬ್ದಾರಿ ನಿರ್ವಹಣೆಯಾಗಬೇಕಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಎಂ.ಜಾನಕಿ, ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, ಚುನಾವಣಾ ಜಿಲ್ಲಾ ವೆಚ್ಚ ನಿರ್ವಹಣಾಧಿಕಾರಿ ಜಿ.ರಾಜೇಂದ್ರ ಕುಮಾರ್, ಆಹಾರ ಇಲಾಖೆ ಉಪ ನಿರ್ದೇಶಕ ಹಾಗೂ ಬೇಲೂರು ಕ್ಷೇತ್ರದ ಎಂ.ಸಿ.ಸಿ. ನೋಡಲ್ ಅಧಿಕಾರಿ, ಎನ್.ಎಸ್.ಶ್ರೀಕಂಠಮೂರ್ತಿ, ಡಿ.ಇ.ಎಂ.ಪಿ. ನೋಡಲ್ ಅಧಿಕಾರಿ ಸಿದ್ದರಾಜು, ವಾರ್ತಾಧಿಕಾರಿ ವಿನೋದ್‌ಚಂದ್ರ, ಎನ್.ಐ.ಸಿ. ಜಿಲ್ಲಾ ಇನ್‌ರೆಟಿಕ್ ಅಧಿಕಾರಿ ಸತ್ಯಮೂರ್ತಿ, ಪೋಸ್ಟಲ್ ಬ್ಯಾಲೆಟ್ ಸೆಕ್ಷನ್ ಅಧಿಕಾರಿ ಎಂ. ಜಿನೇಂದ್ರ ಎಂ., ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಕುಲಕರ್ಣಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ವೇಮರಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.