ಕಾರ್ಮಿಕರಿಗೆ ತಾಲೂಕು ಆಡಳಿತ ನೆರವು
ಕೂಲಿ ಕಾರ್ಮಿಕರ ಸಮಸ್ಯೆ ಬಗ್ಗೆ ವರದಿ ಮಾಡಿದ್ದ ಉದಯವಾಣಿ
Team Udayavani, Apr 18, 2020, 3:13 PM IST
ಸಾಂದರ್ಭಿಕ ಚಿತ್ರ
ಚನ್ನರಾಯಪಟ್ಟಣ/ಶ್ರವಣಬೆಳಗೊಳ: ತಾಲೂಕಿನ ಶ್ರವಣ ಬೆಳಗೊಳ ಹೋಬಳಿ ಬೆಟ್ಟದಹಳ್ಳಿ ಕ್ವಾರಿಯಲ್ಲಿ ನೆಲೆಸಿರುವ ಕೂಲಿಕಾರ್ಮಿಕರಿಗೆ ಶಾಸಕ ಸಿ.ಎನ್.ಬಾಲಕೃಷ್ಣ ತಾಲೂಕು ಆಡಳಿತದಿಂದ ಆಹಾರ ಪದಾರ್ಥವನ್ನು ವಿತರಿಸಿದರು. ಕೂಲಿ ಕೆಲಸವಿಲ್ಲದೇ ಪರಿತಪಿಸುತ್ತಿದ್ದ ಬಗ್ಗೆ ಉದಯವಾಣಿ ಪತ್ರಿಕೆ “ನಮ್ಮೂರಿಗೆ ತೆರಳಲು ವ್ಯವಸ್ಥೆ ಮಾಡಿ’ ಎಂದ ಶೀರ್ಷಿಕೆ ಅಡಿಯಲ್ಲಿ ವಿಶೇಷ ವರದಿ ಪ್ರಕಟಣೆ ಮಾಡಿತ್ತು. ಇದನ್ನು ಗಮನಿಸಿದ ತಾಲೂಕು ಆಡಳಿತ ಕೂಲಿ ಕಾರ್ಮಿಕರು ನೆಲೆಸಿರುವ ಸ್ಥಳಕ್ಕೆ ಧಾವಿಸಿ ತಾಲೂಕು ಆಡಳಿತ ನಿಮ್ಮೊಂದಿಗೆ ಇದೆ. ಲಾಕ್‌ಡೌನ್ ಮುಗಿಯುವವರೆಗೂ ಇಲ್ಲೇ ನೆಲೆಸ ಬೇಕೆಂದು ಧೈರ್ಯ ತುಂಬಿ ನಿತ್ಯ ಬಳಕೆಯ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಿದೆ.
ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಮಿಕರು ನೆಲೆಸಿರುವ ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದರು. ಆರೋಗ್ಯ ಸಮಸ್ಯೆ ಕಂಡು ಬಂದಾಗ ದೂರವಾಣಿ ಕರೆ ಮಾಡಿದರೆ ವೈದ್ಯರೊಂದಿಗೆ ಸ್ಥಳಕ್ಕೆ ಆಗಮಿಸಿ ಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಇಲ್ಲಿ ವಾಸವಾಗಿರುವ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಕ್ರಷರ್ ಮಾಲೀಕರಾದ ಎಲ್‌ವಿಆರ್ ಸುನಿಲ್‌ಕುಮಾರ, ಜಗದೀಶ್ ಜನಪ್ರತಿನಿಧಿ ಮತ್ತು ಅಧಿಕಾರಿಗಳೊಂದಿಗೆ ಮಾತ ನಾಡಿ, ಕಾರ್ಮಿಕರು ಪೋಷಕರು ಅವರ ಹುಟ್ಟೂರಿನಲ್ಲಿ ಇದ್ದಾರೆ. ಕೊರೊನಾ ವೈರಸ್ ಭೀತಿಯಿಂದ ಪೋಷಕರ ನೋಡಿಕೊಳ್ಳಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಇವರಿಗೆ ಆಹಾರದ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಆದರೂ ಅವರು ತಮ್ಮೂರಿಗೆ ತೆರಳಲು ನಿತ್ಯ ಬೇಡಿಕೊಳ್ಳುತ್ತಿದ್ದಾರೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕ್ರಷರ್ ಮಾಲೀಕರಿಂದ ಕೂಲಿ ಕಾರ್ಮಿಕರ ಪಟ್ಟಿ ಪಡೆದು ಶೀಘ್ರದಲ್ಲಿ ಗೃಹ ಬಳಕೆ ಸಾಮಗ್ರಿ ನೀಡುವುದಾಗಿ ಭರ ವಸೆ ನೀಡಿದ್ದಾರೆ. ಯುವಬ್ರಿಗೇಡ್ ತಾಲೂಕು ಸಂಚಾಲಕ ಧರ ಣೀಶ್, ತಹಶೀಲ್ದಾರ್ ಜೆ.ಬಿ. ಮಾರುತಿ, ಬಿಸಿಎಂ ಅಧಿಕಾರಿ ಮಂಜುನಾಥ, ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕ ಚಲುವನಾರಾಯಣ ಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.