ಶಿಕ್ಷಕರೇ ಸಮಾಜದ ಅಭಿವೃದ್ಧಿ ರೂವಾರಿಗಳು
Team Udayavani, Sep 6, 2020, 1:35 PM IST
ಹಾಸನ: ವಿದ್ಯಾರ್ಥಿಗಳನ್ನು ತಿದ್ದಿ, ಬುದ್ಧಿ ಹೇಳಿ ಉತ್ತಮ ಮಾರ್ಗದರ್ಶನ ನೀಡಿ, ತಮ್ಮಲ್ಲಿರುವ ಜ್ಞಾನವನ್ನು ಧಾರೆ ಎರೆದು ಭವಿಷ್ಯದ ಜವಾಬ್ದಾರಿಯುತ ಪ್ರಜೆಗಳನ್ನು ರೂಪಿಸುವ ಶಿಕ್ಷಕರೇ ಸಮಾಜದ ಅಭಿವೃದ್ಧಿಯ ರೂವಾರಿಗಳು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರದ ಎಸ್.ಆರ್.ಎಸ್. ಪ್ರಜ್ಞಾ ಶಾಲೆಯಲ್ಲಿ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶಕ್ಕೆ ಉತ್ತಮ ಕೊಡುಗೆ: ಶ್ರೇಷ್ಠ ಶಿಕ್ಷಣ ತಜ್ಞರು, ಆಧ್ಯಾತ್ಮಿಕ ಚಿಂತಕರು, ತತ್ವಜ್ಞಾನಿಗಳೂ ಉತ್ತಮ ಆಡಳಿತಗಾರರೂ ಆದ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರು ಭಾರತದ ಎರಡನೇ ರಾಷ್ಟ್ರಪತಿಯಾಗಿ ಕಾರ್ಯ ನಿರ್ವಹಿಸಿದರು. ರಾಷ್ಟ್ರಪತಿಗಳ ಅವಧಿ ಮುಗಿದ ನಂತರ ಪ್ರಾಧ್ಯಾಪಕರಾಗಿ ಮುಂದುವರೆಯುವ ಮೂಲಕ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡಿ ಮಹಾನ್ ನಾಯಕರಾಗಿ ರೂಪುಗೊಂಡಿದ್ದರು ಎಂದು ಸ್ಮರಿಸಿದರು.
ಶಿಕ್ಷಕರಿಗೆ ಅಭಿನಂದನೆ: ಜಿಲ್ಲೆಯಲ್ಲಿಯ ಕೋವಿಡ್ ಭೀತಿಯ ನಡುವೆಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿ ವಹಿಸಿ ಶಿಕ್ಷಣ ನೀಡುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ತಂದು ಕೊಟ್ಟ ಎಲ್ಲ ಶಿಕ್ಷಕರನ್ನು ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆಯಲು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಶಿಕ್ಷಕರಿಗೆ ಶುಭಾಶಯ: ಶಾಸಕ ಪ್ರೀತಂ ಜೆ. ಗೌಡ ಮಾತಾನಾಡಿ, ಒಂದು ಮಗುವಿಗೆ ಜ್ಞಾನ ನೀಡಿಸಮಾಜಮುಖೀಯಾಗಿ ಯೋಚನೆ ಮಾಡುವಂತಹ ಬುದ್ಧಿಯನ್ನು ಕಲಿಸಿ, ಒಬ್ಬ ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುವ ಶಿಕ್ಷಕರು ಸಮಾಜದ ಅಧಾರ ಎಂದು ಬಣ್ಣಿಸಿ ಶಿಕ್ಷಕರಿಗೆ ಶುಭಾಶಯಗಳನ್ನು ಅರ್ಪಿಸಿದರು. ಶಿಕ್ಷಕರ ಕೊಡುಗೆ ಅಪಾರ: ಲಕ್ಷಾಂತರ ಶಿಕ್ಷಕರು ತಮ್ಮ ಆಸೆ, ಆಕಾಂಕ್ಷೆಗಳನ್ನು ಬದಿಗಿಟ್ಟು, ವಿದ್ಯಾರ್ಥಿಗಳಜೀವನವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳ ಬೆಳವಣಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ತಮ್ಮ ಸಂಪೂರ್ಣ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆಯುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗುವಂತೆ ದಾರಿ ತೋರಿಸುವ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ ಸಿಇಒ ಬಿ.ಎ. ಪರಮೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು, ಉಪ ವಿಭಾಗಾಧಿಕಾರಿ ಡಾ.ನವೀನ್ ಭಟ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಸ್. ಪ್ರಕಾಶ್, ಹಾಸನ ತಾಪಂ ಅಧ್ಯಕ್ಷೆ ಜ್ಯೋತಿ ಅಣ್ಣಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ ಹಾಗೂ ವಿವಿಧ ಶಾಲೆಯ ಶಿಕ್ಷಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.