ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ

ಪದವೀಧರ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೆ ಆಗ್ರಹ

Team Udayavani, Jul 10, 2019, 12:34 PM IST

hasan-tdy-03..

ಹಾಸನ: ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಮೆರವಣಿಗೆ ನಡೆಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಮಾವೇಶಗೊಂಡು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಶಿಕ್ಷಕರು, ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿದಸಿ ಹಳೇ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರ ವರ್ಗಾವಣೆ ಮಾಡಿ: ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆಯಾಗದೇ ಇರುವು ದರಿಂದ ವರ್ಗಾವಣೆ ಪ್ರಕ್ರಿಯೆ ಈಗ ಆರಂಭವಾಗಿದೆ. ಪ್ರಕ್ರಿಯೆ ಮುಗಿದ ಬಳಿಕ ಅಕ್ಟೋಬರ್‌ ತಿಂಗಳಲ್ಲಿ ಮತ್ತೂಮ್ಮೆ ಕೋರಿಕೆ ವರ್ಗಾವಣೆ ನಡೆಸಬೇಕು. ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು ಎಂದು ಆಗ್ರಸಿದರು.

ಬಡ್ತಿ ನೀಡಿ: 6ನೇ ವೇತನ ಆಯೋಗದ ಅಂತಿಮ ವರದಿ ಶಿಪಾರಸ್ಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ 10, 15, 20, 25, 30 ವರ್ಷದ ಬಡ್ತಿಗಳನ್ನು ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೆಶಕರ ಹುದ್ದೆಯ ವರೆಗೂ ಬಡ್ತಿಯನ್ನು ನೀಡಬೇಕು. ಕೃಪಾಂಕ ಶಿಕ್ಷಕರ ಮತ್ತು ನೌಕರರ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬೇಡಿಕೆ ಯನ್ನು ಈಡೇರಿಸದ್ದರೇ ಸೆಪ್ಟಂಬರ್‌ 9 ರಂದು ಶಿಕ್ಷಕರ ದಿನಾ ಚರಣೆಯನ್ನು ಬಹಿಷ್ಕರಿಸಿ ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜಿ. ದ್ಯಾವೇಗೌಡ, ಖಜಾಂಚಿ ಎಂ.ಎಸ್‌. ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ಅಣ್ಣಪ್ಪ, ನಾಯಕರಹಳ್ಳಿ ಮಂಜೇಗೌಡ, ಸರಕಾರಿ ನೌಕರರ ಸಂಘದ ನಿರ್ದೇಶಕ ರಮೇಶ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

police

Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.