![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 26, 2023, 4:16 PM IST
ಹಾಸನ: ಶ್ರೀ ಹಾಸನಾಂಬ ದೇಗುಲದ ಜಾತ್ರಾ ಮಹೋತ್ಸವದ ವಿವಿಧ ಕಾರ್ಯಗಳ ಟೆಂಡರುಗಳಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ, ಹಾಸನ ನಗರಸಭೆ ನಾಮ ನಿರ್ದೇಶಿತ ಮಾಜಿ ಸದಸ್ಯ ಮನೋಹರ್ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಏಕಾಂಗಿ ಧರಣಿ ನಡೆಸಿದರು.
ಇದುವರೆಗೆ ಜಾತ್ರಾಮಹೋತ್ಸವದ ಹೂವಿನ ಅಲಂಕಾರ, ದೀಪಾಲಂಕಾರ ಸೇರಿದಂತೆ ಬಹುತೇಕ ಗುತ್ತಿಗೆಗಳನ್ನು ಒಬ್ಬರಿಗೆ ನೀಡುತ್ತಾ ಬರಲಾಗಿದೆ. ಆ ಒಬ್ಬ ವ್ಯಕ್ತಿಗೆ ಟೆಂಡರ್ ಸಿಗುವಂತೆ ಟೆಂಡರ್ ನಿಯಮಗಳನ್ನು ರೂಪಿಸಲಾಗಿದೆ. ಕಳೆದ ಬಾರಿ ಒಂದು ಕಾಮಗಾರಿಗೆ ಎರಡು ಬಾರಿ ಬಿಲ್ ಮಾಡಿದ ಉದಾಹರಣೆಯೂ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಹಾಸನಾಂಬ ದೇವಸ್ಥಾನವು ಎ ದರ್ಜೆಯ ದೇವಸ್ಥಾನಗಳಲ್ಲಿ ಒಂದಾಗಿದ್ದು, ಒಬ್ಬನಿಗೆ ಹಾಸನಾಂಬ ದೇಗುಲದ ಕೆಲವು ಕಾಮಗಾರಿಗಳ ಗುತ್ತಿಗೆಯನ್ನು ನೀಡುತ್ತಿರುವುದು ಅಕ್ರಮ. ದೇವಸ್ಥಾನದ ಭಕ್ತಾದಿಗಳು ಕಾಣಿಕೆ ರೂಪದಲ್ಲಿ ಹಾಕಿದ ಹಣದ ಅರ್ಧಕ್ಕಿಂತ ಹೆಚ್ಚು ಭಾಗ ಗುತ್ತಿಗೆದಾರನಿಗೇ ಪಾವತಿಯಾಗುತ್ತಿದೆ. ಇದರಲ್ಲಿ ಅಧಿಕಾರಿಗಳೂ ಭಾಗಿಯಾಗಿರುವ ಶಂಕೆ ಇದೆ. ಇದುವರೆಗೆ ಒಬ್ಬರಿಗೆ ನೀಡುತ್ತಿರುವ ಗುತ್ತಿಗೆಯನ್ನು ಬದಲಿಸಿ ಕಡಿಮೆ ಬಿಡ್ ಸಲ್ಲಿಸಿರುವ ಹಾಗೂ ಉತ್ತಮ ಸೌಲಭ್ಯ ಒದಗಿಸುವ ಅರ್ಹತೆ ಹೊಂದಿರುವ ಆಯಾ ಕೆಲಸಕ್ಕೆ ತಕ್ಕಂತೆ ಬೇರೆ ಬೇರೆ ಗುತ್ತಿಗೆದಾರರಿಗೆ ಟೆಂಡರ್ ನೀಡುವುದರ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಇದುವರೆಗೂ ನಡೆದಿರುವ ಗುತ್ತಿಗೆದಾರಿಕೆಯ ಅಕ್ರಮಗಳನ್ನು ಬಯಲಿಗೆ ತಂದು ಇದಕ್ಕೆ ಕಾರಣರಾದ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.