ಶಾಸಕರ ಖರೀದಿಗೆ ಬಿಜೆಪಿ ಕಪ್ಪು ಹಣ ಬಳಕೆ
Team Udayavani, Feb 16, 2019, 7:27 AM IST
ಹಾಸನ: ಬಿಜೆಪಿಯವರು ಕಪ್ಪು ಹಣವನ್ನು ಶಾಸಕರ ಖರೀದಿಗೆ ಬಳಸುತ್ತಿದ್ದಾರೆ. ಯಡಿಯೂರಪ್ಪ ಅವರೇ ಒಬೊಬ್ಬ ಶಾಸಕರಿಗೆ 40 ಕೋಟಿ ರೂ ಆಫರ್ ಕೊಡುತ್ತಾರೆ. ಇಂಥವರು ಯಾವ ಮುಖವಿಟ್ಟುಕೊಂಡು ರಾಜ್ಯಪಾಲರಿಗೆ ದೂರು ಕೊಡಲು ಹೋಗುತ್ತಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಚನ್ನರಾಯಪಟ್ಟಾಣ ತಾಲೂಕು ಬೀರೂರು ಬಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅವರಿಗೆ ದೂರು ನೀಡುವ ನೈತಿಕತೆ ಇದೆಯೇ ? ಪ್ರಧಾನಿ ನರೇಂದ್ರಮೋದಿ ಅವರು ರಾಷ್ಟ್ರದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ.
ಕಾಳಧನಿಕರನು ಹಿಡಿದು ಜೈಲಿಗೆ ಕಳುಹಿಸುತ್ತೇನೆ ಎಂದು ಹೇಳುತ್ತಾರೆ. ಹಾಗಾದರೆ ಕಪ್ಪು ಹಣದಲ್ಲಿ ಶಾಸಕರನ್ನು ಖರೀದಿಸಲು ಯತ್ನಿಸುತ್ತಿರುವ ರಾಜ್ಯ ಬಿಜೆಪಿ ಮುಖಂಡರಿಗೆ ಮೋದಿಯವರು ಏನು ಹೇಳುತ್ತಾರೆ ? ರಾಜ್ಯದ ಬಿಜೆಪಿ ಮುಖಂಡರಿಗೆ ಎಲ್ಲಿಂದ ಹಣ ಬರುತ್ತಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಆಪರೇಷನ್ ಕಮಲದ ಆಡಿಯೋದಲ್ಲಿನ ದನಿಯನ್ನು ಕೇಳಿದರೆ ಯಡಿಯೂರಪ್ಪ ಅವರದೇ ದನಿ ಎಂಬುದು ಎಂಥವರಿಗೂ ಗೊತ್ತಾಗುತ್ತದೆ. ಇಂಥ ವ್ಯಾಪಾರಕ್ಕೆ ಇಳಿದಿರುವವರಿಗೆ ಸಮ್ಮಿಶ್ರ ಸರ್ಕಾರದ ಬಗ್ಗೆಯಾಗಲಿ, ಜೆಡಿಎಸ್ ಬಗ್ಗೆಯಾಗಲಿ ಪ್ರತಿಭಟನೆ ನಡೆಸುವ ನೈತಿಕತೆ ಇಲ್ಲ ಎಂದರು.
ಸರ್ಕಾರ ಕಲ್ಲು ಬಂಡೆಯಂತಿದೆ: ರಾಜ್ಯದ ಬಿಜೆಪಿ ನಾಯಕರಿಗೆ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂಬ ಮನಸ್ಥಿತಿ ಇಲ್ಲ. ಎಚ್.ಡಿ.ಕುಮಾರಸ್ವಾಮಿ ಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಬೇಕು ಎಂಬುದೊಂದೇ ಗುರಿ. ಆದರೆ ಅವರಿಗೆ ಅದು ಸಾಧ್ಯವಿಲ್ಲ.
ನನ್ನ ಸರ್ಕಾರ ಕಲ್ಲುಬಂಡೆಯ ತರಹ ಗಟ್ಟಿಯಾಗಿದೆ. ಸರ್ಕಾರ ಉರುಳಿಸಲು ಬಿಜೆಪಿಯವರು ಏನೇ ಕುತಂತ್ರ ಮಾಡಿದರೂ ನನ್ನ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ದೇವರ ಆಶೀರ್ವಾದ ಇರುವರೆಗೂ ಯಾರು ಕುತಂತ್ರ ನಡೆಸಿದರೂ ನ್ನ ಸರ್ಕಾರ ಇಳಿಸಲಾಗದು. ದೇವರು ಎಷ್ಟು ದಿನ ನಾನು ಅಧಿಕಾರದಲ್ಲಿರಬೇಕು ಎಂದು ಬರೆದಿದ್ದಾನೋ ಅಲ್ಲಿಯವರೆಗೂ ಮುಖ್ಯಮಂತ್ರಿಯಾಗಿರುವೆ ಎಂದು ಸ್ಪಷ್ಟಪಡಿಸಿದರು.
ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಲೇ ಬಂದಿದ್ದಾರೆ. ಆದರೆ ಅಸ್ಥಿರತೆಯ ಆತಂಕದ ನಡುವೆಯೂ ಸಮ್ಮಿಶ್ರ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೈತರ ಸಮಸ್ಯೆಗಳಿಗೆ ಶ್ರಮಿಸುತ್ತಿದೆ ಎಂದರು.
ನಾನು ಜನರ ಕ್ಲರ್ಕ್, ಆದರೆ ಯಡಿಯೂರಪ್ಪ ಏನು ?
ಹಾಸನ: ನಾನು ಯಾವುದೇ ಪಕ್ಷದ ಕ್ಲರ್ಕ್ ಅಲ್ಲ. ರಾಜ್ಯದ ಆರೂವರೆ ಕೋಟಿ ಜನರ ಕ್ಲರ್ಕ್‌ನಂತೆ ಕೆಲಸ ಮಾಡುತ್ತಿದ್ದೇನೆ. ಜನರ ಕೆಲಸವನ್ನು ಒಬ್ಬ ಕ್ಲರ್ಕ್‌ನಂತೆ ಮಾಡಲು ನನಗೆ ಹೆಮ್ಮೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಆಳುವ ಪಕ್ಷದ ಅಧ್ಯಕ್ಷನಾಗಿ ಅಮಿತ್ ಶಾ ಅವರು ಇಷ್ಟು ಹಗುರವಾಗಿ ಮಾತನಾಡಬಾರದು. ಅಮಿತ್ ಶಾ ಅವರು ಒಬ್ಬ ಮುಖ್ಯಮಂತ್ರಿಯನ್ನು ಕ್ಲರ್ಕ್ ಎಂದು ಟೀಕಿಸುವುದಾದರೆ ಅವರ ಪಕ್ಷದ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಏನು ಮಾಡುತ್ತಿ¤ದ್ದಾರೆ ಎಂದು ಗೊತ್ತಿಲ್ಲವೇ ? ಅಪರೇಷನ್ ಕಮಲ, ಶಾಸಕರ ಖರೀದಿ ಮಾಡುತ್ತಿರುವ ಅವರ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಅಮಿತ್‌ಶಾ ಅವರಿಗೆ ನೈತಿಕತೆ ಇದ್ದರೆ ಆಪರೇಷನ್ ಕಮಲದ ಬಗ್ಗೆ ಮಾನಾಡಬೇಕಾಗಿತ್ತು. ಆ ಬಗ್ಗೆ ಮಾತನಾಡಲಾರದಷ್ಟು ಮುಜುಗರದ ಸ್ಥಿತಿಯಲ್ಲಿದ್ದಾರೆ ಎಂದು ಚುಚ್ಚಿದ ಕುಮಾರಸ್ವಾಮಿ ಅವರು, ಕೇಂದ್ರ ಸರ್ಕಾರದ ಅಭಿವೃದ್ಧಿಗಿಂತ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಮುಂದಿದೆ ಎಂದು ಹೇಳಿದರು.
ಶಾಸಕ ಪ್ರೀತಂಗೌಡರ ಸಂಸ್ಕೃತಿ ಏನೆಂದು ಗೊತ್ತಾಗಿದೆ: ದೇವೇಗೌಡರ ಮಕ್ಕಳು ಹತ್ಯೆ ಮಾಡಿಸುವಷ್ಟು ಸಂಸ್ಕಾರ ಹೀನರಲ್ಲ. ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ನನ್ನನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪ ಮಾಡುವ ಹಾಸನ ಕ್ಷೇತ್ರದ ಶಾಸಕನ ಸಂಸ್ಕೃತಿ ಏನೆಂದು ಗೊತ್ತಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.
ಶಾಸಕನ ಮನೆಯ ಮುಂದೆ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆಂಬ ಮಾಹಿತಿ ತಿಳಿದ ತಕ್ಷಣ 5 ನಿಮಿಷದೊಳಗೆ ಅವರ ನಿವಾಸದ ಬಳಿ ಪೊಲೀಸ್ ರಕ್ಷಣೆಗೆ ಸೂಚನೆ ನೀಡಿದೆ. ಆದರೂ ನಾವು ಹತ್ಯೆ ಸಂಚು ರೂಪಿಸಿದ್ದೇವೆಂದು ಹೇಳುವ ಶಾಸಕನ ಆರೋಪಕ್ಕೆ ಪ್ರತಿಕ್ರಿಯಿಸಲೂ ಬಾರದು ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಅವರ ಹೆಸರು ಹೇಳದೆ ಮುಖ್ಯಮಂತಿರಯವರು ವಾಗ್ಧಾಳಿ ನಡೆಸಿದರು.
ಹಾಸನದ ಶಾಸಕ ಬ್ರಹ್ಮನೇ?: ನಮ್ಮ ಬಗ್ಗೆ ಮತ್ತು ಜೆಡಿಎಸ್ ಕಾರ್ಯಕರ್ತರು ಗೂಂಡಾಗಳು ಎಂದು ಹೇಳುವ ಶಾಸಕ ಎಂತಹ ಹಿಂಬಾಲಕರನಿಟ್ಟುಕೊಂಡಿದ್ದಾರೆ. ಅವರೆಲ್ಲಾ ಎಂತೆಂಥಾ ಕಾನೂನು ಬಾಹಿರ ಕೆಲಸ ಮಾಡಿದ್ದಾರೆ. ಆ ಶಾಸಕನ ಗನಂದಾರಿ ಕೆಲಸ ಮತ್ತು ಅವರ ಸಹಪಾಠಿಗಳು ಏನೇನು ಮಾಡುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕೇ ಎಂದೂ ಪ್ರಶ್ನಿಸಿದರು.
ಶಾಸಕರ ಖರೀದಿಯ ವ್ಯವಹಾರ ಕುದುರಿಸಲು ದೇವದುರ್ಗಕ್ಕೆ ಹೋಗಿ ನನ್ನ ತಂದೆಯವರ ಆಯಸ್ಸಿನ ಬಗ್ಗೆ ಮಾತನಾಡುತ್ತಾರೆ. ಇವರೇನು ಬ್ರಹ್ಮನೇ ಎಂದು ಸಭೆಯಲ್ಲಿಯೂ ಮುಖ್ಯಮಂತ್ರಿಯವರು ಶಾಸಕ ಪ್ರೀತಂಗೌಡ ವಿರುದ್ಧ ಆಕ್ರೋಶದ ನುಡಿಗಳನ್ನಾಡಿದರು. ಆಪರೇಷನ್ ಕಮಲದ ಆಡಿಯೋದ ಬಗ್ಗೆ ಎಸ್‌ಟಿ ತನಿಖೆಗಾಗಿ ಗೃಹ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದೂ ಮುಖ್ಯಮಂತ್ರಿಯವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.