ತಾಲೂಕಿನ ಗಡಿಭಾಗ ಸಂಪೂರ್ಣ ಸೀಲ್ ಡೌನ್
ಮಂಡ್ಯ, ಮೈಸೂರು ಜಿಲ್ಲೆಯಿಂದ ಬರುವವರನ್ನು ತಡೆಯಲು ಕ್ರಮ
Team Udayavani, Apr 13, 2020, 3:45 PM IST
ಚನ್ನರಾಯಪಟ್ಟಣ: ಮೈಸೂರು ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ನಾಗಮಂಗಲ, ಕೆ.ಆರ್.ಪೇಟೆ ತಾಲೂಕಿನಿಂದ ಚನ್ನರಾಯಪಟ್ಟಣ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಮಣ್ಣು ಸುರಿಯುವ ಮೂಲಕ ತಾಲೂಕಿನ ಗಡಿ ಭಾಗವನ್ನು ತಾಲೂಕು ಆಡಳಿತ ಸಂಪೂರ್ಣ ಸೀಲ್‌ಡೌನ್ ಮಾಡಿದೆ. ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಜನತೆ ಹಾಸನ ಜಿಲ್ಲೆ ಕಡೆ ಮುಖ ಮಾಡಿದ್ದು, ಚನ್ನರಾಯಪಟ್ಟಣ ತಾಲೂಕಿನ ಗಡಿ ಮೂಲಕ ಜಿಲ್ಲೆಗೆ ಪ್ರಯಾಣಿಸುತ್ತಿರುವುದನ್ನು ಗಮನಿಸಿದ ಶಾಸಕ ಸಿ.ಎನ್.ಬಾಲಕೃಷ್ಣ ತಾಲೂ ಕಿನ ಗಡಿ ಭಾಗಕ್ಕೆ ಟ್ರ್ಯಾಕ್ಟರ್ ಮತ್ತು ಜೆಸಿಬಿ ಯಂತ್ರದ ಮೂಲಕ ಮಣ್ಣು ಸುರಿಸಿ ಸೀಲ್ ಡೌನ್ ಮಾಡಿಸಿದ್ದಾರೆ.
ಶ್ರವಣಬೆಳಗೊಳ ಹೋಬಳಿಗೆ ಮಂಡ್ಯ ಜಿಲ್ಲೆಯಿಂದ ಸಂಪರ್ಕ ಕಲ್ಪಿಸುವ ಅನೇಕ ರಸ್ತೆಗಳನ್ನು ಸೀಲ್‌ಡೌನ್ ಮಾಡಿಸಲಾ ಗಿದೆ. ಮೇಲುಕೋಟೆ ರಸ್ತೆ, ನಾಗಮಂಗಲದ ಗಡಿ ಭಾಗದ ಬೆಟ್ಟದ ಹಳ್ಳಿ, ಮಂಡ್ಯ ಜಿಲ್ಲೆ ಕಿಕ್ಕೇರೆ ಗಡಿಭಾಗ ಕಬ್ಟಾಳು ಗ್ರಾಮ, ಕೆ.ಆರ್. ಪೇಟೆ ಗಡಿಭಾಗ ಸುಗ್ಗನಹಳ್ಳಿ, ಮಂಡ್ಯ ಜಿಲ್ಲೆ ಆನೆಗೋಳ ಗಡಿಭಾಗ ಚಿಕ್ಕಬಿಳತಿ ಸೀಲ್‌ಡೌನ್ ಮಾಡಿರುವುದಲ್ಲದೇ ಮೈಸೂರು ಹಾಗೂ ಶಿವಮೊಗ್ಗ ರಸ್ತೆಯನ್ನು ಸೀಲ್‌ಡೌನ್ ಮಾಡಲು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ತಾಲೂಕು ಆಡಳಿತದಿಂದ ಶ್ರವಣಬೆಳಗೊಳ ಕಂದಾಯ ನಿರೀಕ್ಷಕ ಮೋಹನ್ ಆಯಾ ವ್ಯಾಪ್ತಿಯ ಗ್ರಾಮ ಲೆಕ್ಕಿಗರು ಹಾಗೂ ಪಿಡಿಒಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಗಡಿ ಭಾಗದ ರಸ್ತೆಗಳಿಗೆ ಮಣ್ಣು ಸುರಿದು ಬಂದ್ ಮಾಡಿಸಿದ್ದಾರೆ. ಶ್ರವಣಬೆಳಗೊಳ ಹಾಗೂ ಹಿರೀಸಾವೆ ಗಡಿಯಲ್ಲಿ ಸಂಪೂರ್ಣ ಸಿಸಿ ಕ್ಯಾಮರಾ ಅಳವಡಿಸಿದ್ದು, ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಸಂಪರ್ಕ ಕಲ್ಪಿಸಲಾಗಿದೆ.
ಮಂಡ್ಯ,ಮೈಸೂರು ಭಾಗದಲ್ಲಿ ಕೊರೊನಾ ಸೋಂಕು ಹರಡುತ್ತಿರುವುದಿಂದ ತಾಲೂಕು ಗಡಿಭಾಗವನ್ನು ಸೀಲ್‌ಡೌನ್ ಮಾಡಲಾಗಿದೆ. ಇದಕ್ಕೆ ಸಾರ್ವಜನಿಕರು
ಸಹಕಾರ ನೀಡಬೇಕು. ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಸರಬರಾಜಿಗೆ ಕೊರತೆಯಾಗದಂತೆ ತಾಲೂಕು ಆಡಳಿತ ವ್ಯವಸ್ಥೆ ಮಾಡಲಿದೆ.
ಸಿ.ಎನ್.ಬಾಲಕೃಷ್ಣ, ಶಾಸಕ
● ಶಾಮಸುಂದರ್ ಕೆ.ಅಣ್ಣೇನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.