ಅಂತರ್ಜಲ ವೃದ್ಧಿಗೆ ಎತ್ತಿನ ಹೊಳೆ ಯೋಜನೆ ಸಹಕಾರಿ

Team Udayavani, Feb 20, 2020, 3:00 AM IST

antarjala

ಅರಸೀಕೆರೆ: ಎತ್ತಿನಹೊಳೆ ಏತನೀರಾವರಿ ಯೋಜನೆ ಅನುಷ್ಠಾನದಿಂದ ತಾಲೂಕಿನ ಬರಡುಭೂಮಿಯ ಕೆರೆಕಟ್ಟೆಗಳಿಗೆ ನೀರು ಹರಿಸಿದರೆ ಅಂತರ್ಜಲ ವೃದ್ಧಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಯೋಜನೆಯನ್ನು ಅತ್ಯಂತ ಶೀರ್ಘ‌ದಲ್ಲಿ ಪೂರೈಸಲು ಸರ್ಕಾರವನ್ನು ಒತ್ತಾಯಿಸಿ ಹೋರಾಟವನ್ನು ನಡೆಸಬೇಕಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದ ಸಭಾಂಗಣದಲ್ಲಿ ಅಂತರ್ಜಲ ನಿರ್ದೇಶನಾಲಯ ಮತ್ತು ಹಿರಿಯ ಭೂ ವಿಜ್ಞಾನಿಗಳು ಹಾಗೂ ಜಿಲ್ಲಾ ಅಂತರ್ಜಲ ಕಚೇರಿ ಸಂಯುಕ್ತ ಆಶ್ರಯದಲ್ಲಿ ಅಂತರ್ಜಲ ಸದ್ಬಳಕೆ, ಅತಿ ಬಳಕೆ ನಿಯಂತ್ರಣ, ಅಂತರ್ಜಲವೃದ್ಧಿಸುವ ಹಾಗೂ ಚಿಕ್ಕಮಕ್ಕಳು ತೆರೆದ ಕೊಳವೆ ಬಾವಿಗಳಲ್ಲಿ ಬೀಳದಂತೆ ನಿಯಂತ್ರಿಸುವ ಬಗ್ಗೆ ಏರ್ಪಡಿಸಿದ್ದ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ನೀರಿನ ಸದ್ಬಳಕೆ: ಎತ್ತಿನಹೊಳೆ ಏತನೀರಾವರಿ ಯೋಜನೆಯ ಅನುಷ್ಠಾನದಿಂದ ಮಾತ್ರ ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಸಮುದ್ರ ಸೇರುವ ಮಳೆಯ ನೀರಿನಲ್ಲಿ 1 ಟಿಎಂಸಿ ನೀರು ನಮಗೆ ಹಾಯಿಸಿದರೆ ತಾಲೂಕಿನ ಎಲ್ಲಾ ಕೆರೆಕಟ್ಟೆಗಳು ತುಂಬುತ್ತವೆ. ಇದರಿಂದ ಅಂತರ್ಜಲ ವೃದ್ಧಿಯಾಗುವ ಜೊತೆಗೆ ಉತ್ತಮ ಮಳೆ ಬೆಳೆಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ನಾವು ಏತ್ತಿನಹೊಳೆ ಯೋಜನೆಯ ಅನುಷ್ಠಾನಕ್ಕಾಗಿ ಪಕ್ಷಾತೀತವಾಗಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಾಸನ ಸಿವಿಲ್‌ ಎಂಜಿನಿಯರಿಂಗ್‌ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೆ.ಎಚ್‌.ಮಂಜುನಾಥ್‌ ಮಾತನಾಡಿ, ಅಂತರ್ಜಲ ವೃದ್ಧಿಗಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಭೂಜಲ ಸಂಪತ್ತು ಎಂಬ ಕಿರು ಹೊತ್ತಿಗೆಯನ್ನು ಶಾಸಕರು ಬಿಡುಗಡೆಗೊಳಿಸಿದರು ತಾಪಂ ಇಒ ಎಸ್‌.ಪಿ.ನಟರಾಜ್‌, ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಅಂತರ್ಜಲ ಕುಸಿತ: ಜಿಲ್ಲಾ ಅಂತರ್ಜಲ ಕಚೇರಿ ಹಿರಿಯ ಭೂ ವಿಜ್ಞಾನಿ ಎಸ್‌.ಸುಧಾ ಮಾತನಾಡಿ, ಜೀವಸಂಕುಲಕ್ಕೆ ಅವಶ್ಯಕವಾದ ನೀರಿನ ಕೊರತೆ ಕಾಡುತ್ತಿದೆ. ಉತ್ತಮ ಮಳೆ ಬಾರದೇ ಕೆರೆಕಟ್ಟೆಗಳಲ್ಲಿ ನೀರಿಲ್ಲದ ಪರಿಣಾಮ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಆದ ಕಾರಣ ಮಳೆಯ ನೀರು ಸಂಗ್ರಹಣೆ ಮೂಲಕ ಅಂತರ್ಜಲ ವೃದ್ಧಿಗಾಗಿ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿ ಜಾರಿಗೆ ತರುತ್ತಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನೀರಿನ ಸದ್ಬಳಕೆ ಹಾಗೂ ನಿಯಂತ್ರಣ, ಅಂತರ್ಜಲ ವೃದ್ಧಿಗಾಗಿ ಕೈಗೊಳ್ಳಬೇಕಾದ ವಿದಿ ವಿಧಾನಗಳ ಬಗ್ಗೆ ಇಂತಹ ಶಿಬಿರಗಳ ಆಯೋಜನೆ ಮೂಲಕ ತಿಳಿಸಲಾಗುತ್ತಿದೆ ಎಂದು ಹೇಳಿದರು.

ಮನುಷ್ಯನ ದುರಾಸೆ ಫ‌‌ಲವಾಗಿ ಪ್ರಾಕೃತಿಕ ಸಂಪತ್ತು ಲೂಟಿಯಾಗಿದ್ದು, ಸಕಾಲಕ್ಕೆ ಮಳೆಯಾಗದೇ ಕೆರೆಕಟ್ಟೆಗಳಲ್ಲಿ ನೀರಿಲ್ಲದೇ ಕೊಳವೆ ಬಾವಿಗಳನ್ನು ಹೆಚ್ಚು ಜನರು ಕೊರೆಸುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಕೊಳವೆಬಾವಿಗಳಲ್ಲಿ ಲಭ್ಯವಾಗುವ ನೀರು ಫ್ಲೋರೈಡ್‌ಯುಕ್ತವಾಗಿದ್ದು, ಸೇವಿಸಲು ಯೋಗ್ಯವಾಗಿಲ್ಲ.
-ಶಿವಲಿಂಗೇಗೌಡ, ಶಾಸಕ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.