ಸರ್ಕಾರ ರೈತರ ಸಂಕಷ್ಟಕೆ ಸ್ಪಂದಿಸುತ್ತಿಲ್ಲ
Team Udayavani, Apr 21, 2020, 3:59 PM IST
ಹಾಸನ: ರೈತರು ಬೆಳೆದ ತರಕಾರಿ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರ ರೈತರಿಗೆ ಸ್ಪಂದಿಸುತ್ತಿಲ್ಲ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ಜಾರಿಯಾದ ನಂತರ ಮುಖ್ಯಮಂತ್ರಿಗೆ ನಾನು ಹಲವು ಬಾರಿ ಪತ್ರ ಬರೆದು ಸಲಹೆ ನೀಡಿದ್ದೇನೆ. ಆದರೆ ಅವರು
ಪತ್ರಗಳಿಗೆ ಪ್ರತಿಕ್ರಿಯಿಸಿದ್ದರೂ ಅವರ ಪ್ರತಿಕ್ರಿಯೆ ಗಳು ಅನುಷ್ಠಾನವಾಗುತ್ತಿಲ್ಲ ಎಂದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಒಂದೇ ಮಾದರಿಯ ತರಕಾರಿ, ಹಣ್ಣುಗಳನ್ನು
ಬೆಳೆಯುವುದಿಲ್ಲ. ಯಾವ ಜಿಲ್ಲೆಗಳಲ್ಲಿ ಯಾವ ತರಕಾರಿ, ಹಣ್ಣುಗಳನ್ನು ಬೆಳೆಯ ಲಾಗಿದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಿ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ತರಕಾರಿ, ಹಣ್ಣು ಸಾಗಣೆ ಮಾಡಿ ಮಾರಾಟ ಮಾಡಿಸುವುದು ಕಷ್ಟವೇನೂ ಆಗುತ್ತಿರಲಿಲ್ಲ. ಇದಕ್ಕೆ ರಾಜ್ಯ ಮಟ್ಟದಲ್ಲಿಯೇ ಒಬ್ಬ ದಕ್ಷ ಅಧಿಕಾರಿ ನೇಮಿಸಿ ಆಯಾ ಜಿಲ್ಲಾಧಿಕಾರಿಗಳನ್ನು ಒಗ್ಗೂಡಿಸಿಕೊಂಡು ರೈತರಿಗೆ ನೆರವಾಗ ಬಹುದಿತ್ತು. ಆದರೆ ಆ ಕೆಲಸ ಇದುವರೆಗೂ ಆಗಿಲ್ಲ ಎಂಬುದು ಬೇಸರ ಸಂಗತಿ ಎಂದರು.
ಸರ್ಕಾರ ಜನರ ನೆರವಿಗೆ ಬರಲೇ ಬೇಕು. ಸಂಕಷ್ಟದ ಸಮಯದಲ್ಲಿ ರೈತರು, ಬಡವರ ನೆರವಿಗೆ ಬರುವುದು ಸರ್ಕಾರದ ಜವಾ ಬ್ದಾರಿ. ಆ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿ ಎಂದು ನಾನು ಆಶಿಸುವೆ ಎಂದರು. ಪ್ರಧಾನ ಮಂತ್ರಿಗೂ ನಾನು ಪತ್ರ ಬರೆದಿದ್ದೆ. ಅವರು ಆ ಪತ್ರಗಳನ್ನು ಗಮನಿಸಿದ್ದರೆ ಸಾಕು. ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಗೂಡ್ಸ್ ರೈಲು, ಕಾರ್ಗೋ ವಿಮಾನಗಳ ಮೂಲಕ ಸಾಗಿಸುವ ಮೂಲಕ ರೈತರಿಗೆ ನೆರವಾಗ ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.