ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು
Team Udayavani, Oct 4, 2022, 5:09 PM IST
ಅರಸೀಕೆರೆ: ಭಾರತದ ಬೆನ್ನೆಲುಬು ರೈತ ಸಮುದಾಯವಾಗಿರುವ ಕಾರಣ ಕೃಷಿ ಕ್ಷೇತ್ರ ಸೇರಿದಂತೆ ಅದಕ್ಕೆ ಪೂರಕವಾದ ಹೈನುಗಾರಿಕೆ ಹಾಗೂ ಸಣ್ಣಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗ್ರಾಮ ಸ್ವರಾಜ್ಯ ಸ್ಥಾಪನೆಗೆ ಮುಂದಾಗಬೇಕೆಂಬು ವುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು ಎಂದು ರಾಜ್ಯ ರೈತ ಸಂಘದ ಸಂಚಾಲಕ ಕನಕೆಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು.
ನಗರದ ಪಿಪಿ ವೃತ್ತದಲ್ಲಿ ಪ್ರೊ,ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತ ನಾಡಿದರು. ಮಹಾತ್ಮ ಗಾಂಧೀಜಿಯವರು ಸತ್ಯ ಮತ್ತು ಅಹಿಂಸೆ ಹಾಗೂ ತ್ಯಾಗದ ಸಂದೇಶದ ಮೂಲಕ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ, ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಯಶಸ್ವಿಯಾದರು. ಸ್ವಾತಂತ್ರ ಭಾರತದ ಅಭಿವೃದ್ಧಿ ನಿಟ್ಟಿನಲ್ಲಿ ದೇಶದ ಬೆನ್ನೆಲುಬು ರೈತ ಸಮುದಾಯ ವನ್ನು ಅಭಿವೃದ್ಧಿ ಪಡಿಸುವ ನಿಟ್ಟಿ ನಲ್ಲಿ ಕೃಷಿಗೆ ಪೂರಕವಾದ ಹೈನುಗಾರಿಕೆ ಹಾಗೂ ಗ್ರಾಮೀಣಾ ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಗ್ರಾಮ ಸ್ವರಾಜ್ಯ ದೇಶದಲ್ಲಿ ಸ್ಥಾಪನೆಯಾಗಲು ಸಾಧ್ಯವಾಗುತ್ತದೆ ಎಂಬ ಕನಸು ಕಂಡಿದ್ದರು.
ಆದರ್ಶ ಪಾಲಿಸಿ: ಸ್ವಾತಂತ್ರ ಬಂದು 75 ವರ್ಷಗಳು ಕಳೆದರೂ ನಮ್ಮ ನ್ನಾಳುತ್ತಿರುವ ಪ್ರಬುದ್ದ ನಾಯಕರು ಮಹಾತ್ಮ ಗಾಂಧೀಜಿಯವರು ಕಂಡ ಕನಸು ನನಸು ಮಾಡುವಲ್ಲಿ ಸಂಪೂರ್ಣ ವಿಫಲರಾಗಿರುವ ಕಾರಣ ನಿರುದ್ಯೋಗ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳು ಸಮಾ ಜವನ್ನ ನಿರಂತರವಾಗಿ ಕಾಡುತ್ತಿದೆ. ಆದ್ದರಿಂದ ಇಂದಿನ ಯುವ ಜನಾಂಗ ಗಾಂಧೀಜಿಯವರ ಜೀವನ ಆದರ್ಶಗಳನ್ನು ಮೈಗೂಡಿಸಿ ಕೊಂಡು ಹೋರಾಟ ಮಾಡುವ ಮೂಲಕ ಪ್ರತಿಯೊಬ್ಬ ಪ್ರಜೆಯಲ್ಲಿ ದೇಶಭಕ್ತಿಯನ್ನ ಜಾಗೃತಗೊಳಿಸುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ರೈತಸಂಘದ ಗೌರವ ಅಧ್ಯಕ್ಷ ಜವ ನಹಳ್ಳಿ ನಿಂಗಪ್ಪ, ಸೋಮಶೇಖರ್ ಮಾತನಾಡಿದರು. ಜಿಲ್ಲಾ ಕಾರ್ಯ ದರ್ಶಿ ಅಯೂಬ್ ಪಾಷ ಹಾಗೂ ಸಂಘದ ಪದಾಧಿಕಾರಿಗಳಾದ ಲಕ್ಷ್ಮೀಶ್,ರಂಗಸ್ವಾಮಿ ಏಜಾಜ್ ಅಹಮ್ಮದ್ ದಸ್ತಗೀರ್, ಕಾಂತರಾಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.