ದೇವಿ ದರ್ಶನಕ್ಕೆ ಹರಿದು ಬಂದ ಜನಸಾಗರ

2ನೇ ದಿನ ಸಾವಿರಾರು ಜನರಿಂದ ದೇವಿ ದರ್ಶನ „ ನಿರೀಕ್ಷೆಗೂ ಮೀರಿ ಧರ್ಮದರ್ಶನದ ಸಾಲಿನಲ್ಲಿ ಸಾಗಿದ ಭಕ್ತರು

Team Udayavani, Oct 30, 2021, 2:18 PM IST

ದೇವಿ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ಹಾಸನಾಂಬೆ ದರ್ಶನೋತ್ಸವಕ್ಕೆ ಎರಡನೇ ದಿನ ದೇವಾಲಯದತ್ತ ಭಕ್ತರ ದಂಡು ಹರಿದು ಬಂದಿತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ಸಾಗಿ ದೇವಿಯ ದರ್ಶನ ಪಡೆದು ಧನ್ಯತಾ ಭಾವ ಮೆರೆದರು. ಮಾಜಿ ಸಚಿವ ಎಚ್‌.ಡಿ.ರೇವಣ್ಣ , ಅವರ ಪತ್ನಿ ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಅವರು ಶುಕ್ರವಾರ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಂಸದ ಪ್ರಜ್ವಲ್‌ ರೇವಣ್ಣ ಅವರೂ ಹಾಸನಾಂಬೆಯ ದರ್ಶನ ಪಡೆದರು.

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರು ತಮ್ಮ ದತ್ತುಪುತ್ತ ಬಳ್ಳೂರು ಉಮೇಶ್‌ ಅವರ ನೆರವಿನೊಂದಿಗೆ ಆಗಮಿಸಿದ ಹಾಸನಾಂಬೆಯ ದರ್ಶನ ಪಡೆದರು. ದೇವಿಯ ದರ್ಶನಕ್ಕೆ ಬರುವವರು ಕೊರೊನಾ ಲಸಿಕೆ ಪಡೆದಿರುವ ಬಗ್ಗೆ ಪರಿಶೀಲನೆಗೆ 15 ಕಡೆ ತಪಾಸಣಾ ತಂಡಗಳು ಕಾರ್ಯನಿರ್ವಸುತ್ತಿವೆ.

ಭಕ್ತರಿಗೆ ತೊಂದರೆಯಾಗದಂತೆ ದೇವಿಯ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಸರದಿಯ ಸಾಲಿನಲ್ಲಿ ಸಾಗುವ ಭಕ್ತರಿಗೆ ಬಿಸಿಲು ಮತ್ತು ಮಳೆಯಿಂದ ರಕ್ಷಣೆ ನೀಡಲು ಸಾಲುಗಳ ಕಮಾನುಗಳನ್ನು ನಿರ್ಮಿಸಿ ಟಾರ್ಪಲ್‌ ಒದಿಕೆ ಹಾಕಲಾಗಿದೆ. ಕೊರೊನಾ ಸುರಕ್ಷತಾ ನಿಯಮಗಳನ್ನು ಪಾಲಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು, ಹಾಸನಾಂಬ ದೇವಿಯ ದರ್ಶನ ಪಡೆಯುವಂತೆ ಭಕ್ತರಿಗೆ ಆಗ್ಗಿಂದಾಗ್ಗೆ ಧ್ವನಿವರ್ಧಕದ ಮೂಲಕ ಸೂಚನೆಯನ್ನು ನೀಡಲಾಗುತ್ತಿದೆ. ಶಾಸಕರಾದ ಎಚ್‌.ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಹಾಸನಾಂಬೆ ದೇವಿ ದರ್ಶನ ಪಡೆದರು.

ಎಚ್‌.ಡಿ. ರೇವಣ್ಣ ದಂಪತಿಯಿಂದ ಹಾಸನಾಂಬೆಗೆ ವಿಶೇಷ ಪೂಜೆ

ಹಾಸನ: ಕೊರೊನಾ ಮಹಾ ಮಾರಿ ನಿರ್ಮೂಲನೆ, ಜಾನುವಾರುಗಳ ರೋಗ ನಿವಾರಣೆಗಾಗಿ ಹಾಸನಾಂಬೆಯಲ್ಲಿ ಪ್ರಾರ್ಥಿಸಿದೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಹೇಳಿದರು. ಪತ್ನಿ ಭವಾನಿ ಅವರೊಂದಿಗೆ ಹಾಸನಾಂಬೆಯ ದರ್ಶನ ಪಡೆದು ಹೊರ ಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬೆಯ ದರ್ಶನ ಪಡೆದಿದ್ದೇನೆ. ನಮ್ಮ ಕುಟುಂಬದವರು ಪ್ರತಿ ವರ್ಷ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆಯುತ್ತೇವೆ ಎಂದರು.

ಇದನ್ನೂ ಓದಿ:- ಅಪ್ಪು ಅಗಲಿಕೆಗೆ ಅಭಿಮಾನಿಗಳ ಭಾವಪೂರ್ಣ ಶ್ರದ್ದಾಂಜಲಿ

ಈ ವರ್ಷ 9 ದಿನಗಳ ಕಾಲ ಹಾಸನಾಂಬೆ ಬಾಗಿಲು ತೆಗೆದು ಭಕ್ತರಿಗೆ ದರ್ಶನ ಕೊಡಲಿದೆ. ರಾಜ್ಯದಲ್ಲಿ ರೈತರು ಮತ್ತು ಜನರು ಸಂಕಷ್ಟದಲ್ಲಿದ್ದು, ಅದನ್ನು ಹೋಗಲಾಡಿಸುವಂತೆ ಮತ್ತು ಒಳ್ಳೆಯ ಮಳೆ-ಬೆಳೆ ಬಂದು ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿ. ರಾಜ್ಯದಲ್ಲಿ ಸಮೃದ್ಧಿ ನೆಲಸಲಿ ಎಂದೂ ಪ್ರಾರ್ಥನೆ ಮಾಡಿದ್ದೇನೆ ಎಂದರು ಭವಾನಿ ರೇವಣ್ಣ ಅವರು ಮಾತನಾಡಿ, ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ  ಭಕ್ತರು ಆಗುಸುತ್ತಾರೆ. ಈ ವರ್ಷವೂ ಕೊರೊನಾ ಆತಂಕ ಇರುವ ಕಾರಣ ಹೆಚ್ಚು ದರ್ಶನ ಮಾಡಲು ಸಾಧ್ಯವಾಗುತ್ತಿಲ್ಲ.

ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿ. ಮುಂದಿನ ವರ್ಷ ಹಾಸನಾಂಬೆಯ ಜಾತ್ರೆ ಅದ್ಧೂರಿಯಾಗಿ ನಡೆಯಲಿ ಎಂದು ಆಶಿಸಿದರು. ರೇವಣ್ಣ ದಂಪತಿ ಮೊದಲು ಹಾಸನಾಂಬೆ ದೇವಾಲಯಕ್ಕೆ ತೆರಳಿ ದೇವಿಯ ಗರ್ಭಗುಡಿಯಲ್ಲಿ ಕೆಲಕಾಲ ಇದ್ದು ವಿಶೇಷ ಪೂಜೆ ಸಲ್ಲಿಸಿದರು. ಆನಂತರ ಶ್ರೀ ಸಿದ್ದೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತಾಧಿಕಾರಿ, ಹಾಸನ ಉಪಭಾಗಾಧಿಕಾರಿ ಬಿ.ಎ. ಜಗದೀಶ್‌ ಅವರು ಎಚ್‌.ಡಿ. ರೇವಣ ದಂಪತಿಯನ್ನು ಸ್ವಾಗತಿಸಿ ದೇವಿಯ ದರ್ಶನದ ನಂತರ ಬೀಳ್ಕೊಟ್ಟರು. ತಹಸೀಲ್ದಾರ್‌ ನಟೇಶ್‌, ಎಚ್‌ಡಿಸಿಸಿ ಬ್ಯಾಂಕ್‌ ನಿರ್ದೇಶಕ ಗಿರೀಶ್‌ ಚನ್ನವೀರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.