ಜನಪ್ರತಿನಿಧಿ ಅಧಿಕಾರದ ಹಿಂದೆ ಓಡದೇ ಜನರ ಸಮಸ್ಯೆ ಆಲಿಸಬೇಕು


Team Udayavani, Mar 3, 2020, 3:00 AM IST

janapratinidhi

ಚನ್ನರಾಯಪಟ್ಟಣ/ಹಿರೀಸಾವೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿ ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡುವುದನ್ನು ಬಿಟ್ಟು ಜನಸಾಮಾನ್ಯರನ್ನು ಭೇಟಿ ಮಾಡಿ ಅವರ ಕಷ್ಟ-ಸುಖದಲ್ಲಿ ಭಾಗಿಯಾಗುವುದನ್ನು ರೂಢಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ತಾಲೂಕಿನ ಹಿರೀಸಾವೆ ಹೋಬಳಿ ಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಲವು ಶಾಸಕರಿಗೆ ಪಕ್ಷ ನಿಷ್ಠೆ ಕಡಿಮೆಯಾಗುತ್ತಿದೆ. ಅಧಿಕಾರದ ಹಿಂದೆ ಓಡುವುದನ್ನು ರೂಢಿಸಿಕೊಂಡಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿ ಅವರ ಅಭಿವೃದ್ಧಿ ಮಾತ್ರ ಆಗುತ್ತಿದೆ ಇಂತಹವರಿಗೆ ಜನರು ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.

ಜನರ ಸಂಕಷ್ಟಗಳಿಗೆ ಸ್ಪಂದಿಸುವೆ: ನಾನು ಇಲ್ಲಿ ಯಾವುದೇ ರಾಜಕೀಯ ವಿಚಾರ ಮಾತನಾಡುವುದಿಲ್ಲ. ನಮ್ಮದೇನಿದ್ದರೂ ಚುನಾವಣೆಯ ವೇಳೆಯಲ್ಲಿ ಮಾತ್ರ ರಾಜಕೀಯ. ಉಳಿದಂತೆ ಜನರ ನಡುವೆ ಇದ್ದು ಅವರ ಸಂಕಷ್ಟಗಳಿಗೆ ಸ್ವಂದಿಸುವುದನ್ನು ನಮ್ಮ ತಂದೆಯವರು ಕಲಿಸಿದ್ದಾರೆ. ಅದರಂತೆ ಜನರ ಬಳಿ ಇರತೇ¤ನೆ. ನನ್ನನ್ನು ಅರಸಿ ಬಂದವರನ್ನು ಗಮನಿಸದೇ ಮುಂದೆ ಹೋಗುವ ಅಭ್ಯಾಸ ನನಗಿಲ್ಲ. ಆದರೆ ನನ್ನೊಂದಿಗೆ ಇದ್ದವರು ನನಗೆ ತೊಂದರೆ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಂದೆಯವರು ನಡೆದು ಬಂದಿರುವ ಹಾದಿಯಲ್ಲಿ ಹೆಜ್ಜೆ ಇಡುತ್ತ ಜನಸೇವೆ ಮಾಡುವುದೊಂದೆ ನನ್ನ ಕೆಲಸ. ನಮ್ಮ ಸರ್ಕಾರ ಇರಲಿ ಇಲ್ಲದಿರಲಿ ಜನರಿಗೆ ನೆರವಾಗುವ ಕಾಯಕ ನಿಲ್ಲುವುದಿಲ್ಲ. ಜನತೆಯ ನಡುವೆ ಸಾಮಾನ್ಯನಂತೆ ನಿಂತು ರಾಜ್ಯದ ಹಿತಕ್ಕಾಗಿ ದುಡಿಯುವುದನ್ನು ಹೊರತುಪಡಿಸಿ ನನಗೆ ಬೇರೆ ಏನೂ ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

ಮೈತ್ರಿ ಸರ್ಕಾರದ ವೇಳೆ ತಾಲೂಕಿನ ತೋಟಿಕೆರೆ, ಆಲಗೊಂಡನಹಳ್ಳಿ, ಕಾಚೇನಹಳ್ಳಿ ಸೇರಿದಂತೆ ಬಹುತೇಕ ಏತನೀರಾವರಿ ಯೋಜನೆಗಳಿಗೆ ಹಣ ಮಂಜೂರು ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ ಕೂಡ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ನಮ್ಮ ಸರ್ಕಾರದ್ದ ವೇಳೆ ತಿಂಗಳಿಗೆ 15 ಬಾರಿ ನನ್ನ ಬಳಿ ಬಂದು ತಾಲೂಕಿನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಕೆಲಸ ಪಡೆದು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಜೆಡಿಎಸ್‌ ಉಪಾಧ್ಯಕ್ಷ ಎಚ್‌.ಜಿ.ರಾಮಕೃಷ್ಣ, ತುಮಕೂರು ಜಿಲ್ಲಾ ವೀಕ್ಷಕ ಎಚ್‌.ಎನ್‌.ಲೋಕೇಶ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ದೇವರಾಜೇಗೌಡ, ದಿಡಗ ಸೊಸೈಟಿ ಮಾಜಿ ಅಧ್ಯಕ್ಷ ಎಸ್‌.ಕುಮಾರ್‌, ಪ್ರಮುಖರಾದ ಯೋಗೇಶ್‌ ಹಾಗೂ ಇತರರು ಹಾಜರಿದ್ದರು.

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ರಾಜ್ಯ ಹಾಗೂ ರಾಷ್ಟ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕೇವಲ ಕೋಲಾಹಲವನ್ನು ಸೃಷ್ಟಿಸುವ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಪಾದಿಸಿದರು. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಒಂದು ಪಕ್ಷ ಅಧಿಕಾರಲ್ಲಿ ಇದ್ದರೆ ಶರವೇಗದಲ್ಲಿ ರಾಜ್ಯ ಅಭಿವೃದ್ಧಿ ಹೊಂದುತ್ತದೆ ಎಂದು ರಾಜ್ಯದ ಜನರಿಗೆ ಭರವಸೆ ನೀಡಿದಲ್ಲದೇ ಹಲವು ಶಾಸಕರನ್ನು ತಮ್ಮೆಡೆಗೆ ಸೆಳೆಸು ಅಧಿಕಾರದ ಗದ್ದುಗೆ ಏರಿದರು. ಆದರೆ ಇಂದು ರಾಜ್ಯದಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಹರಿಹಾಯ್ದರು.

ಕೆರೆಗಳಿಗೆ ನೀರು ತುಂಬಿಸುವ ಯೋಜನೆ: ಶಾಸಕ ಸಿ.ಎನ್‌.ಬಾಲಕೃಷ್ಣ ಮಾತನಾಡಿ, ಸತತ 15 ವರ್ಷಗಳಿಂದ ಬರದ ಬೇಗೆ ಎದುರಿಸುತ್ತಿದ್ದ ಚನ್ನರಾಯಪಟ್ಟಣ ತಾಲೂಕನ್ನು ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ಕುಮಾರ ಸ್ವಾಮಿ ಅವರು ಏತನೀರಾವರಿ ಯೋಜನೆಯಡಿ ತಾಲೂಕಿನ 80 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಿದ್ದಾರೆ. ಇದರಿಂದ ವ್ಯಾಪ್ತಿಯ ಅಂತರ್ಜಲ ಹೆಚ್ಚುವುದರ ಜತೆಗೆ ಸುಮಾರು 120 ಗ್ರಾಮಗಳಿಗೆ ಅನುಕೂಲವಾಗಿದೆ. ಸದ್ಯ ದಿಡಗ-ಕಬ್ಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕೈಗೆತ್ತಿಕೊಂಡಿದ್ದು ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಮುಗಿದು ಪ್ರಸ್ತಾವನೆಯ ಹಂತದಲ್ಲಿದೆ ಎಂದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.