ಶೋಷಣೆ ಮುಕ್ತ ಸಮಾಜ ಸಹಕಾರ ಕ್ಷೇತ್ರದ ಉದ್ದೇಶ

ರಾಜ್ಯದ 2.50 ಕೋಟಿ ಜನರಿಗೆ ಸಹಕಾರ ಸಂಘಗಳ ಪ್ರಯೋಜನ •ಸಹಕಾರ ಮಹಾ ಮಂಡಳಿ ಅಧ್ಯಕ್ಷ ಎನ್‌.ಗಂಗಣ್ಣ

Team Udayavani, Jul 17, 2019, 3:29 PM IST

hasan-tdy-4..

ಹಾಸನ: ಗ್ರಾಮೀಣ ನಿರುದ್ಯೋಗಿಗಳಿಗೆ ಹಾಗೂ ಮಹಿಳೆಯರಿಗೆ ಬದುಕುವ ಆತ್ಮಸ್ಥೈರ್ಯವನ್ನು ತುಂಬುವ ಕೆಲಸವನ್ನು ಸಹಕಾರ ಸಂಘಗಳು ಮಾಡುತ್ತಿವೆ. ಸಮಾಜದಲ್ಲಿ ಬಡ್ಡಿ ವ್ಯವಹಾರ ಮಾಡುವವರ ಶೋಷಣೆಯನ್ನು ತಪ್ಪಿಸುವುದೇ ಸಹಕಾರ ಸಂಘದ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಸಹಕಾರ ಮಹಾ ಮಂಡಳಿ ಅಧ್ಯಕ್ಷ ಎನ್‌.ಗಂಗಣ್ಣ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ಹಾಗೂ ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಹಕಾರ ಸಂಘಗಳ ಸದುಪಯೋಗವನ್ನು 2.50 ಕೋಟಿ ಜನರು ಪಡೆಯುತ್ತಿದ್ದಾರೆ ಎಂದು ಹೇಳಿದರು.

ಹೆಚ್ಚಿನ ಜನರಿಗೆ ನೆರವು ನೀಡಿ: ಸಹಕಾರ ಸಂಘಗಳಿಂದ ಇನ್ನೂ ಹೆಚ್ಚು ನೆರವು ಜನರಿಗೆ ತಲುಪಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಷೇರುದಾರರಾಗಿ ಕಾರ್ಯ ನಿರ್ವಸುವುದರ ಬಗ್ಗೆ ಹೆಚ್ಚಿನ ಮಾರ್ಗದರ್ಶನ ನೀಡಬೇಕಿದೆ. ಸಹಕಾರ ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುವವರು ಡಿಪ್ಲೊಮಾ ಇನ್‌ ಕೋ – ಅಪರೇಟಿವ್‌ ತರಬೇತಿಯನ್ನು ಕಡ್ಡಾಯವಾಗಿ ಪಡೆದಿರಬೇಕೆಂದು ಗಂಗಣ್ಣ ತಿಳಿಸಿದರು.

ಸೇವಾ ಮನೋಭಾವ ಅಗತ್ಯ: ರಾಜ್ಯ ಸಹಕಾರ ಮಹಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎನ್‌. ಅರುಣ್‌ಕುಮಾರ್‌ ಮಾತನಾಡಿ, ಸಹಕಾರ ಸಂಘಗಳಲ್ಲಿ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳುವುದು ಪ್ರಮುಖವಾಗಿದೆ. ಸರ್ಕಾರದಿಂದ ಸಿಗುವಂತಹ ಸೌಲಭ್ಯವನ್ನು ಅರ್ಹ ಫ‌ಲಾನುಭಗಳಿಗೆ ತಲುಪಿಸುವಂತಹ ಸಂಪೂರ್ಣ ಜವಾಬ್ದಾರಿಯನ್ನು ಅಧಿಕಾರಿಗಳು ನಿರ್ವಹಿಸಬೇಕು ಇದರಲ್ಲಿ ಯಾವುದೇ ರೀತಿಯ ಲೋಪ ಉಂಟಾದರೆ ಅಂತಹ ಅಧಿಕಾರಿ ಅಥವಾ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಹಕಾರ ಒಕ್ಕೂಟ ಅಧ್ಯಕ್ಷ ಶೇಷಾದ್ರಿ ಅವರು, ಗ್ರಾಮೀಣ ಭಾಗದಲ್ಲಿ ಪ್ರಾದೇಶಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಿಗುವ ಸಾಲ ಸೌಲಭ್ಯವನ್ನು ಅರ್ಹ ಫ‌ಲಾನುಭವಿಗಳು ಪಡೆದುಕೊಳ್ಳಬಹುದು. ಹಾಸನ ಜಿಲ್ಲೆಯೂ ಸಹ ಈ ಸಂಬಂಧ ಸಾಕಷ್ಟು ಒತ್ತು ನೀಡಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.

ಎಸ್ಸಿ, ಎಸ್ಟಿ ಸಮುದಾಯದವರಿಗೆ ಸೌಲಭ್ಯ: ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ‌ ಆರ್‌.ಟಿ.ದ್ಯಾವೇಗೌಡ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹಲವಾರು ಯೋಜನೆಗಳಿವೆ. ಆದರೆ ಫ‌ಲಾನುಭವಿಗಳ ಸಂಖ್ಯೆ ಕಡಿಮೆಯಿದೆ. ಅದಕ್ಕಾಗಿ ಈ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು. ಕಾರ್ಮಿಕರು, ನಿರುದ್ಯೋಗಿಗಳು, ಸಣ್ಣ ಮತ್ತು ಅತಿ ಸಣ್ಣ ರೈತರುಗಳಿಗೆ ಸಿಗುವಂತಹ ಸೌಲಭ್ಯಗಳು ಕಾಲ ಕಾಲಕ್ಕೆ ಜನರಿಗೆ ದೊರಕಬೇಕು. ಆ ನಿಟ್ಟಿನಲ್ಲಿ ಅಧಿಕಾರಿ, ಸಿಬ್ಬಂದಿ ಕೆಲಸ ನಿರ್ವಹಿಸಬೇಕು ಎಂದರು.

ಸಹಕಾರ ಸಂಘಗಳ ಅಪರ ನಿಬಂಧಕ ಹಾಗೂ ವ್ಯವಸ್ಥಾಪಕ ನಿರ್ದೇಶಕ‌ ಎ.ಸಿ.ದಿವಾಕರ ಅವರು ಸಣ್ಣ ಮತ್ತು ಅತಿಸಣ್ಣ ರೈತರಿಗೆ, ಮಹಿಳೆಯರಿಗೆ, ನಿರುದ್ಯೋಗಿಗಳಿಗೆ ಸಹಕಾರ ಸಂಘಗಳಿಂದ ಇರುವ ಸೌಲಭ್ಯವನ್ನು ಪಡೆದುಕೊಳ್ಳುವ ಬಗ್ಗೆ ಹಾಗೂ ಬ್ಯಾಂಕುಗಳಿಂದ ಸಾಲವನ್ನು ಪಡೆಯಬೇಕಾದರೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು.

ಉಪನಿಬಂಧಕ ಜಿ.ಆರ್‌.ವಿಜಯ್‌ಕುಮಾರ್‌, ಕಾರ್ಯಕ್ರಮದ ಸಂಚಾಲಕ‌ ಯೋಗೇಂದ್ರ ನಾಯಕ್‌, ಸಲಹೆಗಾರ ಪಿ.ರುದ್ರಪ್ಪ ಸೇರಿದಂತೆ ಹಾಸನ ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸಹಕಾರ ಸಂಘಗಳ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು

ಟಾಪ್ ನ್ಯೂಸ್

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.