ಸಾವಿನ ದಾರಿಯಾಗಿದೆ ರಾಷ್ಟ್ರೀಯ ಹೆದ್ದಾರಿ -75


Team Udayavani, Aug 26, 2019, 2:40 PM IST

hasan-tdy-2

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಹಾಸನ – ಸಕಲೇಶಪುರ- ಬಿ.ಸಿ. ರೋಡ್‌ ನಡುವಿನ 127 ಕಿ.ಮೀ. ರಸ್ತೆ ವಾಹನ ಚಾಲಕರಿಗೆ ಸಾವಿನ ಹಾದಿಯಾಗಿ ಪರಿಣಮಿಸಿದೆ.

ರಾಷ್ಟ್ರೀಯ ಹೆದ್ದಾರಿ ಇಲಾಖೆ ನಿರ್ವಹಿಸುತ್ತಿದ್ದ ಈ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ನಿರ್ಮಿಸಲು ಒಪ್ಪಂದ ಮಾಡಿಕೊಂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಈಗ ಕಾಮಗಾರಿಯನ್ನು ಅರ್ಧಕ್ಕೆ ಕೈ ಬಿಟ್ಟಿರುವುದರಿಂದ ಹಾಳಾಗಿರುವ ರಸ್ತೆ ಅನಾಥವಾಗಿದೆ.

ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಚತುಷ್ಪಥ ರಸ್ತೆ ನಿರ್ಮಾಣವಾಗಿ 10 ವರ್ಷ ಕಳೆದಿದೆ. ಸುಸಜ್ಜಿತ ರಸ್ತೆ ಮಾದರಿಯಲ್ಲೇ ಹಾಸನ- ಸಕಲೇಶಪುರ- ಬಿ.ಸಿ.ರೋಡ್‌ (ಮಂಗಳೂರು) ನಡುವೆಯೂ ಚತುಷ್ಪಥ ರಸ್ತೆ ನಿರ್ಮಾಣವಾದರೆ ಕರಾವಳಿ ಹಾಗೂ ರಾಜಧಾನಿ ನಡುವೆ ಉತ್ತಮ ಸಂಪರ್ಕ ವ್ಯವಸ್ಥೆಯಾಗುತ್ತದೆ ಎಂಬ ಕನಸಿತ್ತು. ಆದರೆ, ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜನರ ಕನಸನ್ನು ನುಚ್ಚುನೂರು ಮಾಡಿ ಸಾವಿನ ಹೆದ್ದಾರಿ ಯಾಗಿದ್ದರೂ ಕಣ್ಣು ಮುಚ್ಚಿ ಕುಳಿತಿದೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಅಂದು ಕೇಂದ್ರ ಭೂ ಸಾರಿಗೆ ಸಚಿವರಾಗಿದ್ದ ಆಸ್ಕರ್‌ ಫ‌ರ್ನಾಂಡೀಸ್‌ ಅವರು ಹಾಸನ-ಸಕಲೇಶಪುರ- ಬಿ.ಸಿ.ರೋಡ್‌ (ಮಂಗಳೂರು) ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಮಂಜೂರಾತಿ ದೊರೆತು 7 ವರ್ಷಗಳಾಗಿವೆ. ಹಾಸನ – ಮಂಗಳೂರು ನಡುವಿನ 172 ಕಿ.ಮೀ.ಪೈಕಿ ಶಿರಾಡಿಘಾಟ್‌ನ 32 ಕಿ.ಮೀ. ಮತ್ತು ಬಿ.ಸಿ.ರೋಡ್‌ – ಮಂಗಳೂರು ನಡುವಿನ 13 ಕಿ.ಮೀ.ಹೊರತುಪಡಿಸಿ 127 ಕಿ.ಮೀ. ರಸ್ತೆ ಚತುಷ್ಪಥ ರಸ್ತೆಯಾಗಿ ನಿರ್ಮಾಣ ವಾಗುವ ಸೂಚನೆಗಳಂತೂ ಕಂಡು ಬರುತ್ತಿಲ್ಲ.

ಕನಸಿನ ಮಾತಾದ ಚತುಷ್ಫಥ: ಚತುಷ್ಪಥ ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, 2016 ರಲ್ಲಿಯೇ 127 ಕಿ.ಮೀ.ಯನ್ನು ವಹಿಸಿಕೊಂಡು 2019 ಮೇ ಅಂತ್ಯ ದೊಳಗೆ ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸುವುದಾಗಿ ಒಪ್ಪಿಕೊಂಡಿತ್ತು. ಶಿರಾಡಿಘಾಟ್‌ನ 32 ಕಿ.ಮೀ.ನಲ್ಲಿ ಚತುಷ್ಪಥ ರಸ್ತೆ ನಿರ್ಮಿಸಲು ಭೌಗೋಳಿಕವಾಗಿ ಸಾಧ್ಯವಿಲ್ಲ. ಅಲ್ಲಿ ದ್ವಿಪಥ ಕಾಂಕ್ರೀಟ್ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯೇ ನಿರ್ವಹಿಸುತ್ತಿದೆ.

ಬಿ.ಸಿ.ರೋಡ್‌ – ಮಂಗಳೂರು ನಡುವೆ 13 ಕಿ.ಮೀ. ಈಗಾಗಲೇ ಚತುಷ್ಪಥ ರಸ್ತೆಯಾಗಿ ನಿರ್ಮಾಣ ವಾಗಿದೆ. ಇನ್ನುಳಿದ 127 ಕಿ. ಮೀ. ಪೈಕಿ ಹಾಸನ – ಸಕಲೇಶಪುರ ತಾಲೂಕಿನ ಹೆಗ್ಗದ್ದೆವರೆಗೆ ಹಾಗೂ ಗುಂಡ್ಯಾದಿಂದ ಬಿ.ಸಿ.ರೋಡ್‌ವರೆಗೆ ಚತುಷ್ಪಥ ರಸ್ತೆ ನಿರ್ಮಾಣವಾಗಬೇಕಾಗಿದೆ. ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿಕೊಂಡ ಒಪ್ಪಂದದಂತೆ ರಸ್ತೆ ನಿರ್ಮಾಣದ ಅವಧಿ ಮುಗಿದಿದೆ. ಇನ್ನೂ ಶೇ.20 ರಷ್ಟು ಕಾಮಗಾರಿಯೂ ಮುಗಿದಿಲ್ಲ. ನಾಲ್ಕೆದು ವರ್ಷ ಗಳಾದರೂ ಚತುಷ್ಪಥ ರಸ್ತೆ ನಿರ್ಮಾಣವಂತೂ ಕನಸಿನ ಮಾತೇ ಸರಿ ಎಂಬಂತಾಗಿದೆ.

ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ: ರಾಷ್ಟ್ರೀಯ ಹೆದ್ದಾರಿ ಇಲಾಖೆ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ 127 ಕಿ.ಮೀ. ರಸ್ತೆಯನ್ನು ಹಸ್ತಾಂತರಿಸಿ ಕೈ ತೊಳೆದು ಕೊಂಡು ನೆಮ್ಮದಿಯಾಗಿದೆ. ಆದರೆ ಚತುಷ್ಪಥ ರಸ್ತೆ ನಿರ್ಮಾಣದ ಹೊಣೆ ಹೊತ್ತ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ, ಈಗ ಕೈ ಚೆಲ್ಲಿ ಕುಳಿತಿದೆ. ಈ ಹಿಂದೆ ಇದ್ದ ದ್ವಿಪಥ ರಸ್ತೆಯನ್ನೂ ಕೆಲವು ಕಡೆ ಅಗೆದು ಹಾಳು ಮಾಡಲಾಗಿದೆ. ಕಳೆದ 3 ವರ್ಷಗಳಿಂದಲೂ ದ್ವಿಪಥ ರಸ್ತೆ ಡಾಂಬರು ಕಾಣದೇ ರಸ್ತೆಯಲ್ಲಿ ವಾಹನ ಗಳು ಸಂಚರಿಸಲಾರದಷ್ಟು ಹಾಳಾಗಿ ಹೋಗಿದೆ. ಪ್ರತಿ ದಿನವೂ ಅಪಘಾತಗಳು ಸಂಭವಿಸಿ ಅಮಾಯಕರು ಬಲಿಯಾಗುತ್ತಿದ್ದಾರೆ. ಮಂದೇನು ಎಂಬುದಕ್ಕೆ ಯಾರೊಬ್ಬರಿಂದಲೂ ಉತ್ತರವಿಲ್ಲ.

ಕಾಮಗಾರಿ ನಿಲ್ಲಲು ಕಾರಣವೇನು? : ಹಾಸನ- ಸಕಲೇಶಪುರ, ಗುಂಡ್ಯ-ಬಿ.ಸಿ.ರೋಡ್‌ ನಡುವಿನ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆ ನಿರ್ಮಾಣಕ್ಕೆ 2017 ರಲ್ಲೇ ಕಾಮಗಾರಿ ಆರಂಭವಾಯಿತು. ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಪನಿ, ರಸ್ತೆ ಬದಿ ಮರ ತೆಗೆಯುವಲ್ಲಿ ತೋರಿದ ಉತ್ಸಾಹವನ್ನು ರಸ್ತೆ ನಿರ್ಮಾಣದಲ್ಲಿ ತೋರಲಿಲ್ಲ.

ಮರಗಳ ತೆರವು ನಂತರ ಅಲ್ಲಲ್ಲಿ ಚತುಷ್ಪಥ ರಸ್ತೆ ನಿರ್ಮಾಣದ ಮಣ್ಣಿನ ಕಾಮಗಾರಿ ಆರಂಭವಾದ ಕೆಲ ತಿಂಗಳಲ್ಲೇ ಕಾಮಗಾರಿ ಸ್ಥಗಿತವಾಯಿತು. ಅಂದರೆ ಗುತ್ತಿಗೆ ವಹಿಸಿಕೊಂಡ ಕಂಪನಿ ದಿವಾಳಿಯೆಂದು ಕಾಮಗಾರಿ ಕೈ ಬಿಟ್ಟಿತು. ಆನಂತರ ಕಾಮಗಾರಿಯನ್ನು ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಾಜ್‌ಕಮಲ್ ಎಂಬ ಕಂಪನಿಗೆ ವಹಿಸಿತು. ಆ ಕಂಪನಿಯೂ ಸುಮಾರು ಶೇ.10 ಕಾಮಗಾರಿ ನಿರ್ವಹಿಸಿ ತಾನೂ ದಿವಾಳಿ ಎಂದು ಕಾಮಗಾರಿ ಕೈ ಬಿಟ್ಟು ಪರಾರಿಯಾಗಿದೆ. ರಸ್ತೆ ನಿರ್ಮಾಣಕ್ಕೆ ಮುಂಗಡವಾಗಿ ನೀಡಿದ್ದ ಮೊತ್ತವನ್ನು ವಸೂಲಿ ಮಾಡಿಕೊಂಡು ಇಎಂಡಿಯನ್ನೂ ಮುಟ್ಟು ಗೋಲು ಹಾಕಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುಮ್ಮನೆ ಕುಳಿತಿದೆ. ಈಗ, ಹೊಸದಾಗ ಟೆಂಡರ್‌ ಪ್ರಕ್ರಿಯೆ ಆರಂಭಿಸಿ, ಪ್ರಕ್ರಿಯೆ ಮುಗಿದ ನಂತರವಷ್ಟೇ ರಸ್ತೆ ನಿರ್ಮಾಣ ಆರಂಭವಾಗ ಬೇಕಾಗಿದೆ. ಈ ಎಲ್ಲಾ ಪ್ರಕ್ರಿಯೆಗಳು ಸದ್ಯಕ್ಕೆ ಆರಂಭ ವಾಗುವ ಲಕ್ಷಣ ಕಾಣುತ್ತಿಲ್ಲ.

ಮುಂದೇನು ಎಂಬ ಚಿಂತನೆ: 147 ಕಿ.ಮೀ. ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬದ್ಧವಾಗಿದೆ. 573 ಕೋಟಿ ರೂ. ಅಂದಾಜಿನ ಹಾಸನ – ಸಕಲೇಶಪುರ ನಡುವಿನ ಚತುಷ್ಪಥ ರಸ್ತೆ ನಿರ್ಮಾಣದ ಕಾಮಗಾರಿ ವಹಿಸಿ ಕೊಂಡಿದ್ದ ಒಬ್ಬ ಗುತ್ತಿಗೆದಾರರು ಕೈ ಬಿಟ್ಟರು. ಆನಂತರ ಬಂದ ಮತ್ತೂಬ್ಬ ಗುತ್ತಿಗೆದಾರರೂ ಬಿಟ್ಟು ಹೋಗಿ ದ್ದಾರೆ. ರಸ್ತೆ ನಿರ್ಮಾಣಕ್ಕೆ ಸಾಮಗ್ರಿ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುತ್ತಿಗೆದಾರರಿಗೆ ನೀಡಿದ್ದ 42 ಕೋಟಿ ರೂ. ವಾಪಸ್‌ ಪಡೆದುಕೊಂಡಿದೆ. ಕಾಮಗಾರಿ ಬಿಟ್ಟು ಹೋಗಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಮುಂದೆ ಕಾಮಗಾರಿ ಪುನಾರಂಭಿಸಲು ಏನು ಮಾಡ ಬೇಕೆಂಬುದರ ಬಗ್ಗೆ ಚಿಂತನೆ ನಡೆದಿದೆ.

 

● ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.