ಮಕ್ಕಳ ಸಮ್ಮೇಳನಾಧ್ಯಕ್ಷರ ಆಯ್ಕೆ
Team Udayavani, Jan 23, 2017, 3:21 PM IST
ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.9 ಮತ್ತು 10 ರಂದು ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ 10ನೇ ತರಗತಿ ವಿದ್ಯಾರ್ಥಿನಿ ಭಾರ್ಗವಿ ಆಯ್ಕೆಯಾಗಿದ್ದಾರೆ.
ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಕುರಿತು ಮಾಹಿತಿ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಪ್ರತಿಭಾಶೋಧದ ಮೂಲಕ ಸಮ್ಮೇಳನ ಅಧ್ಯಕ್ಷರ ಆಯ್ಕೆ ನಡೆದಿದೆ ಎಂದರು.
ನೂರಾರು ಮಕ್ಕಳ ಪ್ರತಿಭೆಯನ್ನು ಗುರ್ತಿಸಿ ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಎರಡು ದಿನ ನಡೆಯುವ ಸಮ್ಮೇಳನದಲ್ಲಿ ಹೊರ ಜಿಲ್ಲೆಗಳಿಂದ 1000 ಆಯ್ದ ಮಕ್ಕಳು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಸಾಹಿತ್ಯಾಭಿರುಚಿ: ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ನಿಟ್ಟಿನಲ್ಲಿ ಚನ್ನರಾಯಪಟ್ಟಣದ ಸಿ.ಎನ್.ಅಶೋಕ್ ಸಾರಥ್ಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಸ್ಥಾಪಿತಗೊಂಡಿದೆ. ಮಕ್ಕಳಲ್ಲಿರುವ ಸೃಜನಶೀಲತೆ, ಸಾಹಿತ್ಯಾಭಿರುಚಿಗೆ, ಮನೋವಿಕಾಸಕ್ಕೆ ಸಹಕಾರಿಯಾಗುವಂತಹ ಕಾರ್ಯಕ್ರಮವನ್ನು ಕಳೆದ ನಾಲ್ಕು ವರ್ಷಗಳಿಂದಲೂ ಮಕ್ಕಳ ಸಾಹಿತ್ಯ ಪರಿಷತ್ ನಡೆಸಿಕೊಂಡು ಬರುತ್ತಿದೆ ಎಂದರು.
ಡಾ.ಬಾಲಗಂಗಾಧರನಾಥ ಸ್ವಾಮೀಜಿ ಈ ಹಿಂದೆ ಬಹಳ ವೈಭವದಿಂದ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಿದ್ದರು. ಆ ಪರಂಪರೆಯನ್ನು ಮಠ ಮುಂದುವರಿಸುತ್ತಿದೆ. ಇಂತಹ ಸಮಾಜಮುಖೀ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದು ಮಠಗಳ ಕರ್ತವ್ಯ ಎಂದು ಹೇಳಿದರು.
ಪ್ರತಿಭೆಗೆ ಪ್ರೋತ್ಸಾಹ: ಮಕ್ಕಳ ಸೂಕ್ತ ಪ್ರತಿಭೆಗೆ ನೀರೆರೆದು ಪ್ರೋತ್ಸಾಹಿಸಬೇಕು. ಆ ನಿಟ್ಟಿನಲ್ಲಿ ಮಕ್ಕಳಿಗಾಗಿ, ಮಕ್ಕಳಿಂದಲೇ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಹೇಳಿದರು. ಸಮ್ಮೇಳದನದ ಸ್ವಾಗತ ಸಮಿತಿ ಗೌರವ ಅಧ್ಯಕ್ಷರಾಗಿ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು,
ಅಧ್ಯಕ್ಷರಾಗಿ ಶಾಸಕ ಎಚ್.ಎಸ್.ಪ್ರಕಾಶ್, ಪ್ರಧಾನ ಕಾರ್ಯದರ್ಶಿಯಾಗಿ ಹಾಸನ ಉಪ ವಿಭಾಗಾಧಿಕಾರಿ ಎಚ್.ಎಲ್.ನಾಗರಾಜು ಹಾಗೂ ವಿವಿಧ ಸಮಿತಿಗಳ ಪ್ರತಿನಿಧಿಗಳು ಕಾರ್ಯನಿರ್ವಹಿಸುವರು ಎಂದು ಸ್ವಾಮೀಜಿ ತಿಳಿಸಿದರು. ಉಪ ವಿಭಾಗಾಧಿಕಾರಿ ನಾಗರಾಜು, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಎನ್.ಅಶೋಕ್, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗುರೂಜಿ ಮತ್ತಿತರರು ಉಪಸ್ಥಿತರಿದ್ದರು.
ಭಾರ್ಗವಿ ಸಮ್ಮೇಳನಾಧ್ಯಕ್ಷೆ
ಹಾಸನ: ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಫೆ.9 ಮತ್ತು 10 ರಂದು ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರ್ಗವಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಉಜಿರೆಯವರು. ಉಜಿರೆಯ ಎಸ್‌ಡಿಎಂ ಶಾಲೆಯಲ್ಲಿ 10ನೇ ತರಗತಿ ಓದು ತ್ತಿರುವ ಭಾರ್ಗವಿ ಅವರು ಪದ್ಮನಾಭ ಮತ್ತು ಭಾನುಮತಿ ಅವರ ಪುತ್ರಿ.
ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಹಾಸನ ಉಪ ವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ನೇತೃತ್ವಲ್ಲಿ ನೂರಾರು ಮಕ್ಕಳ ಪ್ರತಿಭೆಯನ್ನು ಪರಿಶೋಧಿಸಿ ಅಂತಿಮವಾಗಿ ಭಾರ್ಗವಿ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರ ಜೊತೆಗೆ ಎಚ್.ಎಸ್.ವಿವೇಕ್, ಗೌರಮ್ಮ, ಅನನ್ಯ ಹಾಗೂ ಸುಬ್ರಹ್ಮಣ್ಯನಾವಡ ಸಮ್ಮೇಳನದ ಸಹ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.