ಪ್ರವಾಸಗಳು ಪ್ರಾಯೋಗಿಕ ಕಲಿಕೆಗೆ ಪೂರಕ
ಸ್ಕೌಟ್ಸ್, ಗೈಡ್ಸ್‌ನಿಂದ ಗೆಂಡೆಕಟ್ಟೆ ಅರಣ್ಯಧಾಮಕ್ಕೆ ಚಿಣ್ಣರ ಪ್ರವಾಸ
Team Udayavani, May 20, 2019, 10:15 AM IST
ಹಾಸನದ ಸ್ಕೌಟ್ಸ್ ಮತ್ತು ಗೈಡ್ಸ್ ಇಎನ್‌ಸಿಎಸ್ ಓಪನ್ ಗ್ರೂಪ್ ಜಿಲ್ಲಾ ಸಂಸ್ಥೆಯ ಸಹಕಾರದಲ್ಲಿ ಹಮ್ಮಿಕೊಂಡಿರುವ ಉಚಿತ ಬೇಸಿಗೆ ಶಿಬಿರದ ಅಂಗ ವಾಗಿ ಮಕ್ಕಳಿಗೆ ಗೆಂಡೆಕಟ್ಟೆ ಅರಣ್ಯಧಾಮಕ್ಕೆ ಪ್ರವಾಸ ಏರ್ಪಡಿಸಲಾಗಿತ್ತು.
ಹಾಸನ: ಪ್ರವಾಸಗಳು ಮಕ್ಕಳಲ್ಲಿ ಪ್ರಾಯೋಗಿಕ ಕಲಿಕೆಯನ್ನುಂಟು ಮಾಡುತ್ತವೆ. ಪ್ರವಾಸಗಳಿಂದ ಮಕ್ಕಳು ಸ್ಥಳ ಪರಿಚಯ ವಾಗುತ್ತದೆ ಎಂದು ಇಎನ್‌ಸಿಎಸ್(ಏಕಲವ್ಯಸೌಟ್ಸ್ ಆ್ಯಂಡ್ ಗೈಡ್ಸ್ ) ಓಪನ್ ಗ್ರೂಪಿನ ಅಧ್ಯಕ್ಷ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇಎನ್‌ಸಿಎಸ್ ಓಪನ್ ಗ್ರೂಪ್ ಜಿಲ್ಲಾ ಸಂಸ್ಥೆಯ ಸಹಕಾರದಲ್ಲಿ ಹಮ್ಮಿಕೊಂಡಿರುವ ಉಚಿತ ಬೇಸಿಗೆ ಶಿಬಿರದಲ್ಲಿ ಟೈಮ್ಸ್ ಇಂಟರ್‌ನ್ಯಾಷನಲ್ ಶಿಕ್ಷಣ ಸಂಸ್ಥೆಯ ಪ್ರಾಯೋಜ ಕತ್ವದಲ್ಲಿ ಗೆಂಡೆಕಟ್ಟೆ ಅರಣ್ಯಧಾಮ ಹಾಗೂ ಕೋರವಂಗಲದ ದೇವಾಲಯಕ್ಕೆ ಏರ್ಪಡಿಸಿದ್ದ ಕಿರುಪ್ರವಾಸದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರವಾಸದ ಅನುಭವಗಳು ಮಕ್ಕಳ ಮನಸ್ಸಿನ ಮೇಲೆ ತುಂಬಾ ದಿವಸಗಳ ಕಾಲ ಗಾಢಪ್ರಭಾವ ಬೀರುತ್ತವೆ. ಪ್ರಕೃತಿಯ ಸೌಂದರ್ಯ ಸವಿಯುವುದರ ಜೊತೆಗೆ ಆ ಚೆಲುವಿನ ಉಳಿಗಾಗಿ ಹೋರಾಡುವ ಅಂಶವನ್ನು ತಿಳಿದುಕೊಳ್ಳುತ್ತಾರೆ. ಮನರಂಜನೆಗಾಗಿ ಈ ಪ್ರವಾಸವನ್ನು ಹಮ್ಮಿಕೊಂಡಿಲ್ಲ. ಇಲ್ಲಿನ ಜೀವ ವೈಧ್ಯತೆಯನ್ನು ತಿಳಿಯಲು, ಪ್ರಕೃತಿಯಲ್ಲಿ ಆಟಗಳು ಮುಂತಾದ ಅಂಶಗಳನ್ನು ಹೊತ್ತು ಬಂದಿದ್ದೇವೆ ಎಂದರು. ಗೆಂಡೆಕಟ್ಟೆ ಅರಣ್ಯಧಾಮದಲ್ಲಿ ಗಿಡಮರಗಳನ್ನು, ಪ್ರಾಣಿ ಪಕ್ಷಿಗಳನ್ನು ಪರಿಚಯಿಸುವುದರ ಜೊತೆಗೆ ಮಕ್ಕಳಿಗಾಗಿ ವಿವಿಧ ಆಟಗಳನ್ನು ಆಡಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಆರ್.ಜಿ. ಗಿರೀಶ್, ಜಂಟಿ ಕಾರ್ಯದರ್ಶಿ ಚನ್ನಬಸವೇಶ್ವರ, ರೋವರ್ ಲೀಡರ್ ಕುಮಾರಸ್ವಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.