ಪುರಸಭೆ ಅಧ್ಯಕ್ಷರ ಮೀಸಲಾತಿ ಬದಲಾಗುತ್ತಾ?
ಮೀಸಲಾತಿ ರದ್ದು, ಅಧ್ಯಕ್ಷರಾಗಿದ್ದ ಕಾಡಪ್ಪ, ಉಪಾಧ್ಯಕ್ಷೆ ಜರೀನಾ ರಶೀದ್‌ಗೆ ಅಧಿಕಾರ ಕಳೆದುಕೊಳ್ಳುವ ಆತಂಕ
Team Udayavani, Nov 21, 2020, 4:06 PM IST
ಸಕಲೇಶಪುರ: ರಾಜ್ಯದ 276 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಅದರಲ್ಲಿ ಪಟ್ಟಣ ಪುರಸಭೆಯೂ ಸೇರಿದೆ. ಹೀಗಾಗಿ ನ.3ರಂದು ನಡೆದ ಚುನಾವಣೆಯಲ್ಲಿ ಪುರಸಭೆ ಅಧ್ಯಕ್ಷರಾಗಿ ಕಾಡಪ್ಪ, ಉಪಾಧ್ಯಕ್ಷೆ ಜರಿನಾ ರಶೀದ್ ಆಯ್ಕೆಯಾಗಿದ್ದು, ಇದೀಗ ತಮ್ಮ ಸ್ಥಾನ ಉಳಿಯುತ್ತೋ, ಇಲ್ಲವೋ ಎಂಬ ಆತಂಕ ಇಬ್ಬರನ್ನೂಕಾಡುತ್ತಿದೆ.
ರೋಸ್ಟರ್ ಪದ್ಧತಿ ಪ್ರಕಾರ ಪುರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಉಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದ್ದು, ಏನಾಗುತ್ತೆ ಎಂಬುದನ್ನು ಮುಂದಿನ ಆದೇಶ ದವರೆಗೂ ಕಾದು ನೋಡಬೇಕಿದೆ.
15 ವರ್ಷ ನಂತರ ಎಸ್ಸಿಗೆ ಗಾದಿ: ಸಕಲೇಶಪುರ ಪುರಸಭೆ ಅಧ್ಯಕ್ಷ ಸ್ಥಾನ 15 ವರ್ಷಗಳ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಆಗ ಶಿವಮ್ಮ ಎಂಬುವವರು 2005 ರಿಂದ2008ರವರೆಗೆ ಅಧ್ಯಕ್ಷರಾಗಿ ಅಧಿಕಾರ ಚಲಾಯಿಸಿದ್ದರು. ಬಳಿಕ 2020ರಲ್ಲಿ ಅಂತಿಮವಾಗಿ ಬಿಜೆಪಿ ಸರ್ಕಾರ ಅಧ್ಯಕ್ಷ ಸ್ಥಾನ ಎಸ್ಸಿಗೆ ಮೀಸಲು ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಬಹುಮತ ಹೊಂದಿರುವ ಜೆಡಿಎಸ್‌ನಿಂದ ಈ ಮೀಸಲಿನಡಿ ಆಯ್ಕೆಯಾದ ಏಕೈಕ ಸದಸ್ಯ 11ನೇ ವಾರ್ಡ್‌ನ ಕಾಡಪ್ಪ, ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಎಸ್ಸಿಮೀಸಲು ಬದಲಾದ್ರೂ ಅಚ್ಚರಿ ಇಲ್ಲ: ರೋಸ್ಟರ್ ಪದ್ಧತಿ ಪ್ರಕಾರ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ನಿಗದಿ ಮಾಡಿರುವ ಎಸ್ಸಿ ಮೀಸಲಾತಿಯೇ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಇದರಲ್ಲೂ ಬದಲಾವಣೆ ಆಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಈವರೆಗೂ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿಲ್ಲ. ಹೀಗಾಗಿ ರೋಸ್ಟರ್ ಪದ್ಧತಿಯಂತೆ ಪರಿಶಿಷ್ಟ ಜಾತಿ ಮಹಿಳೆಗೂ ಅವಕಾಶ ನೀಡಬಹುದಾಗಿದೆ. ಒಂದು ವೇಳೆ ಎಸ್ಸಿ ಮಹಿಳೆಗೆ ಅಧ್ಯಕ್ಷ ಸ್ಥಾನ ಮೀಸಲಾದ್ರೆ8ನೇ ವಾರ್ಡ್‌ನ ಪಕ್ಷೇತರ ಸದಸ್ಯೆ ವರಲಕ್ಷ್ಮೀಗೆ ಅವಕಾಶ ಸಿಗಲಿದೆ.
ಸಾಮಾನ್ಯ ವರ್ಗಕ್ಕೆ ಮೀಸಲು ಸಿಗುತ್ತಾ?: ಅಧ್ಯಕ್ಷ ಅಥವಾ ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಎಷ್ಟು ಬಾರಿಯಾದ್ರೂ ನೀಡಲು ಅವಕಾಶ ಇರುವ ಕಾರಣ, ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೂ ಸಿಕ್ಕಿದರೆ ಅಚ್ಚರಿ ಪಡಬೇಕಿಲ್ಲ. ಅಷ್ಟೇ ಅಲ್ಲ, ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೇ ಮೀಸಲಾಗಲಿ ಎಂಬ ಆಸೆ ಕೆಲವರ ಮನಸ್ಸಿನಲ್ಲಿ ಇದೆ. ಆಗೊಂದು ವೇಳೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾದ್ರೆ, ಬಹುಮತ ಹೊಂದಿರುವ ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ ಏರ್ಪಡಲಿದೆ. ಆಗ ಶಾಸಕರಿಗೆ ಯಾರನ್ನು ಆಯ್ಕೆ
ಮೂರು ಬಾರಿ ಮೀಸಲು ಬದಲಾವಣೆ: ಇಲ್ಲಿನ ಪುರಸಭೆ ಸದಸ್ಯ ಸ್ಥಾನಕ್ಕೆ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆದಿತ್ತು. ಅಂದಿನ ಮೈತ್ರಿ ಸರ್ಕಾರ ಅಧ್ಯಕ್ಷ ಸ್ಥಾನ ಬಿಸಿಎಂ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಟಿ ಪುರುಷಗೆ ಮೀಸಲು ಮಾಡಿ ಆದೇಶ ಹೊರ ಡಿಸಿತ್ತು. ಆಗ ಕೆಲವರು ಕೋರ್ಟ್ ಮೊರೆ ಹೋದರು. ಇನ್ನೂ ಪ್ರಕರಣ ವಿಚಾರಣೆ ಹಂತದಲ್ಲಿ ಇರುವಾಗಲೇ,ಕೆಲವು ಆಕಾಂಕ್ಷಿಗಳು ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು ಮಾಡಿಸಲು ಜೆಡಿಎಸ್ ವರಿಷ್ಠರ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿಸಿದ್ದರು.
ಅದರಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಘೋಷಣೆ ಮಾಡಿ ಸರ್ಕಾರ ಆದೇಶ ಮಾಡಿತ್ತು. ಅಷ್ಟರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಅಧಿಕಾರಕ್ಕೇರಿತು. ಈ ಸಂದರ್ಭದಲ್ಲಿ ಮೀಸಲಾತಿ ವಿರುದ್ಧ ಮತ್ತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದರಿಂದ ಒಂದು ವರ್ಷ ಯಾವುದೇ ತೀರ್ಮಾನವಾಗಿರಲಿಲ್ಲ.
ನಂತರ ಸರ್ಕಾರ ಕಳೆದ ತಿಂಗಳು ಅಧ್ಯಕ್ಷ ಸ್ಥಾನ ಎಸ್‌ಸಿಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸ ಲಾತಿ ನೀಡಿತು. ಈ ಹಿನ್ನೆಲೆಯಲ್ಲಿ ಪಟ್ಟಣದ 11ನೇ ವಾರ್ಡ್‌ನಲ್ಲಿ ಜೆಡಿಎಸ್‌ನಿಂದ ಗೆಲುವು ಸಾಧಿಸಿದ್ದ ಕಾಡಪ್ಪ ಅಧ್ಯಕ್ಷರಾಗಿ, ಜರೀನಾ ರಶೀದ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
15 ವರ್ಷಗಳ ನಂತರ ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು.ಕೆಲವುಕಡೆಗಳಲ್ಲಿ ರೋಸ್ಟರ್ ಪದ್ಧತಿ ಅನ್ವಯ ಮೀಸಲಾತಿ ನೀಡುವುದರಲ್ಲಿ ತಪ್ಪಾಗಿರುವುದರಿಂದ ಹೈಕೋರ್ಟ್ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ರದ್ದುಪಡಿಸಿದೆ. ಮುಂದಿನ ಅಧಿಸೂಚನೆಯಲ್ಲೂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. – ಕಾಡಪ್ಪ, ಇತ್ತೀಚೆಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದವರು.
ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳಿಂದ ನಗರ ಸ್ಥಳೀಯ ಸಂಸ್ಥೆಗಳ ಮೂರು ಪ್ರತ್ಯೇಕ ಮೀಸಲಾತಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಘೋಷಣೆ ಅವೈಜ್ಞಾನಿಕವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಈ ಕುರಿತು ಸರಿಯಾಗಿ ಪರಿಶೀಲನೆ ಮಾಡಲು ನ್ಯಾಯಾಲಯ 4 ವಾರಗಳಕಾಲಾವಕಾಶ ನೀಡಿದೆ. ಮುಂದೆ ಯಾವ ರೀತಿ ಕ್ರಮಕೈಗೊಳ್ಳುತ್ತದೆಕಾದು ನೋಡಬೇಕಿದೆ. –ಎಚ್.ಕೆ.ಕುಮಾರಸ್ವಾಮಿ, ಶಾಸಕ
– ಸುಧೀರ್ ಎಸ್.ಎಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ
H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.