ಹಾಸನ: ಮೀನು ಹಿಡಿಯಲು ಹೋದ ವೇಳೆ ತೆಪ್ಪ ಮಗುಚಿ ಇಬ್ಬರು ನೀರುಪಾಲು
Team Udayavani, Jul 16, 2022, 6:01 PM IST
ಹಾಸನ: ಮೀನು ಹಿಡಿಯಲು ಹೋದ ವೇಳೆ ತೆಪ್ಪ ಮಗುಚಿ ಇಬ್ಬರು ಜಲಸಮಾಧಿಯಾಗಿರುವ ಘಟನೆ ಹಾಸನ ತಾಲೂಕು, ದುದ್ದ ಹೋಬಳಿ ತಿಮ್ಲಾಪುರದಲ್ಲಿ ಶನಿವಾರ ಸಂಭವಿಸಿದೆ.
ಭಾರಿ ಮಳೆ ನಡುವೆ ಕೆರೆಯಲ್ಲಿ ಮೀನು ಹಿಡಿಯಲು ಮೂವರು ಹೋಗಿದ್ದರು. ಭಾರೀ ಗಾಳಿಯಿಂದಾಗಿ ತೆಪ್ಪ ಮಗುಚಿಕೊಂಡಾಗ ತಿಮ್ಲಾಪುರದ ರಾಜಣ್ಣ(50) ಮತ್ತು ಕಿಶೋರ್(38) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತೊಬ್ಬ ಈಜಿ ದಡ ಸೇರಿದ್ದಾರೆ.
ಕೆರೆಯಲ್ಲಿ ಮೀನು ಸಾಕಿದ್ದ ಕಿಶೋರ್ ಮೀನು ಹಿಡಿದು ಮಾರಾಟ ಮಾಡಲು ಸ್ನೇಹಿತರೊಂದಿಗೆ ಕೆರೆಗೆ ತೆಪ್ಪದಲ್ಲಿ ತೆರಳಿದ್ದರು.
ಕೆರೆಯಲ್ಲಿ ಕಾರ್ಯಾಚರಣೆ ನಡೆಸಿ ಕಿಶೋರ್ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ. ರಾಜಣ್ಣ ಅವರ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ದುದ್ದ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.