ಗ್ರಾಪಂ ಅಧಿಕಾರಕ್ಕಾಗಿ ಆಕಾಂಕ್ಷಿಗಳಿಂದ ಸದಸ್ಯರಿಗೆ ಪ್ರವಾಸ ಭಾಗ್ಯ
Team Udayavani, Jan 23, 2021, 2:39 PM IST
ಚನ್ನರಾಯಪಟ್ಟಣ: ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದ್ದು, ಫೆ.6ರೊಳಗೆ ಚುನಾವಣೆ ನಡೆಸಲು ಈಗಾಗಲೇ ಅಧಿಕಾರಿಯನ್ನೂ ನೇಮಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅತಂತ್ರ ಸ್ಥಿತಿಯಲ್ಲಿ ಇರುವ ಗ್ರಾಪಂನಲ್ಲಿ ಅಧಿಕಾರ ಹಿಡಿಯಲು ಸದಸ್ಯರನ್ನು ಪ್ರವಾಸಕ್ಕೆ ಕರೆದೊಯ್ದಿದ್ದು, ರೆಸಾರ್ಟ್ ರಾಜಕೀಯಕ್ಕೆ ಜೆಡಿಎಸ್, ಕಾಂಗ್ರೆಸ್ ಬೆಂಬಲಿಗರಿಂದ ಮುಂದಾಗಿದ್ದಾರೆ.
ಅಧ್ಯಕ್ಷ ಹುದ್ದೆಗೆ ಏರುವ ಉದ್ದೇಶದಿಂದ ಲಕ್ಷಾಂತರ ರೂ. ಹಣ ನೀಡಿ ಹರಾಜಿನಲ್ಲಿ ಆಯ್ಕೆಯಾಗಿರುವ ಕೆಲವರಿಗೆ ಮೀಸಲಾತಿಯಿಂದ ಅಧಿಕಾರ ಕೈ ತಪ್ಪಿದೆ. ಇದರ ಲಾಭ ಪಡೆಯಲು, ಪಕ್ಷದ ಮುಖಂಡರು, ತಮ್ಮ ಹಿಂಬಾಲಕರನ್ನು ಬಿಟ್ಟು ತಾವು ಹೇಳಿದಂತೆ ಕೇಳಿದವರಿಗೆ ಗ್ರಾಪಂ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನ ಮಾಡಿದ್ದು, ತೀರ್ಥ ಕ್ಷೇತ್ರಕ್ಕೆ ಪ್ರವಾಸ ಕಳುಹಿಸಿದ್ದಾರೆ.
ಪ್ರಾಬಲ್ಯ ಉಳಿಸಿಕೊಳ್ಳುವ ಉದ್ದೇಶ: ಶ್ರವಣ ಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಮೂರು ದಶಕ ದಿಂದ ಜೆಡಿಎಸ್ ಪಕ್ಷದವರೇ ಅಧಿಕಾರದಲ್ಲಿ ಇದ್ದಾರೆ. ಕಳೆದ ಏಳು ವರ್ಷದಿಂದ ಸಿ.ಎನ್. ಬಾಲಕೃಷ್ಣ ಶಾಸಕರಾಗಿದ್ದಾರೆ. ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯವನ್ನು ಉಳಿಸಿಕೊಳ್ಳಲು 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಆದರೂ, ಅತಂತ್ರ ಸ್ಥಿತಿಯಲ್ಲಿ ಇರುವ ಪಂಚಾಯಿತಿ ಮೇಲೂ ಕಣ್ಣು ಇಟ್ಟಿದ್ದು, ಅದಕ್ಕಾಗಿ ತಂತ್ರಗಾರಿಕೆ ರೂಪಿಸಿದ್ದಾರೆ.
ತಂತ್ರಕ್ಕೆ ಪ್ರತಿ ತಂತ್ರ: ಶಾಸಕರಿಗೆ ಸಡ್ಡು ಹೊಡೆಯಲು ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ ಗ್ರಾಪಂ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ನೂರಕ್ಕೂ ಹೆಚ್ಚು ಮಂದಿಯನ್ನು ಗೆಲ್ಲಿಸಿಕೊಂಡಿದ್ದಾರೆ. ಐದಾರು ಗ್ರಾಪಂ ಕಾಂಗ್ರೆಸ್ ಬೆಂಬಲಿತರ ಪಾಲಾದರೂ ಹೆಚ್ಚು ಗ್ರಾಪಂ ಅನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಅತಂತ್ರ ಸ್ಥಿತಿಯ ಗ್ರಾಪಂಗಳ ಮೇಲೆ ಕಣ್ಣು ಇಟ್ಟಿದ್ದಾರೆ. ಜೆಡಿಎಸ್‌ನ ತಂತ್ರಕ್ಕ ಪ್ರತಿ ತಂತ್ರ ರೂಪಿಸುತ್ತಿದ್ದಾರೆ.
ಇದನ್ನೂ ಓದಿ:ಕಾಂಗ್ರೇಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸಿಎಂ ಸ್ಪರ್ಧೆ : ಈಶ್ವರಪ್ಪ ವ್ಯಂಗ್ಯ
ಖಾತೆ ತೆರೆದ ಬಿಜೆಪಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ್ದೇ ಪಾರುಪತ್ಯ. ಇದರ ನಡುವೆ ಬಿಜೆಪಿ ಬೆಂಬಲಿತರು ಖಾತೆ ತೆರೆಯುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಚಿಗುರೊಡೆಯುವಂತೆ ಆ ಪಕ್ಷದ ಮುಖಂಡ ಎ.ಸಿ.ಆನಂದಕುಮಾರ್ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ತಾಲೂಕಿನಲ್ಲಿ ಬಿಜೆಪಿ 15ಕ್ಕೂ ಹೆಚ್ಚು ಬೆಂಬಲಿತ ಸದಸ್ಯರನ್ನು ಗ್ರಾಮ ಪಂಚಾಯಿತಿ ಮೆಟ್ಟಿಲೇರುವಂತೆ ಮಾಡಿದ್ದಾರೆ.
ತೀರ್ಥ ಕ್ಷೇತ್ರ, ರೆಸಾರ್ಟ್ ವಾಸ್ತವ್ಯ: ಹಲವು ಮಂದಿ ಈಗಾಗಲೆ ಧರ್ಮಸ್ಥಳ, ಸುಬ್ರಹ್ಮಣ್ಯ, ಹೊರನಾಡು, ಮಂಗಳೂರು, ಶೃಂಗೇರಿ ಸೇರಿ ಹಲವು ತೀರ್ಥ ಕ್ಷೇತ್ರದ ಪ್ರವಾಸದಲ್ಲಿ ಇದ್ದಾರೆ. ಕ್ಷೇತ್ರದ ಪ್ರವಾಸ ಮುಗಿಸಿರುವ ಅನೇಕ ಮಂದಿ ಮಡಿಕೇರಿ, ಕೇರಳ ರಾಜ್ಯದ ರೆಸಾರ್ಟ್‌ನಲ್ಲಿ ಟಿಕಾಣಿ ಹೂಡಿದ್ದಾರೆ. ಚುನಾವಣೆ ದಿನಾಂಕ ಸಮೀಪಿದ ಮೇಲೆ ಕ್ಷೇತ್ರಕ್ಕೆ ಹಿಂತಿರುಗುವ ಲೆಕ್ಕಾಚಾರದಲ್ಲಿ ಇದ್ದಾರೆ.
ಶಾಮಸುಂದರ್ ಕೆ.ಅಣ್ಣೇನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.