ಬಗೆಹರಿಯದ ಕಸ ವಿಲೇವಾರಿ ಸಮಸ್ಯೆ
Team Udayavani, Jan 14, 2020, 3:00 AM IST
ಸಕಲೇಶಪುರ: ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲರಾಗಿರುವ ಶಾಸಕರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಪಟ್ಟಣದ ಜಾತ್ರೆ ಮೈದಾನದಲ್ಲಿರುವ ವರ್ತಕರು ಹಾಗೂ ಕಾರ್ಮಿಕರು ಅಲ್ಲಿ ತಂದು ಹಾಕುವ ಕಸದಿಂದ ನಿತ್ಯ ಮೂಗು ಮುಚ್ಚಿಕೊಂಡು ಕೆಲಸ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.
ಪಟ್ಟಣದ ತ್ಯಾಜ್ಯವನ್ನು ಮಳಲಿ ಘನತ್ಯಾಜ್ಯ ಘಟಕದಲ್ಲೇ ವಿಲೇವಾರಿ ಮಾಡುವಂತೆ 2016ರಲ್ಲಿ ಹೈಕೋರ್ಟ್ ಸೂಚಿಸಿತ್ತು. ಆದರೆ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ಮಳಲಿ ಗ್ರಾಮದ ಘನತ್ಯಾಜ್ಯ ಘಟಕದಲ್ಲಿ ಪಟ್ಟಣದ ತ್ಯಾಜ್ಯ ವಿಲೇವಾರಿಗೆ ನಿರಂತರ ಹಸ್ತಕ್ಷೇಪ ನಡೆಸಿದ ಫಲವಾಗಿ ಪುರಸಭೆ ಅಧಿಕಾರಿಗಳು ತಮ್ಮ ಅಧಿಕಾರ ಚಲಾಯಿಸಲು ವಿಫಲರಾಗಿದ್ದರು.
ಖಾಲಿ ನಿವೇಶನದಲ್ಲಿ ಕಸ ಹಾಕಲು ವಿರೋಧ: ಪಟ್ಟಣದ ವಿವಿಧೆಡೆ ಖಾಲಿ ಇರುವ ನಿವೇಶನಗಳಲ್ಲಿ ಕಸ ವಿಲೇವಾರಿ ನಡೆಸುತ್ತಿದ್ದರು. ಖಾಲಿ ನಿವೇಶನಗಳಲ್ಲಿ ಕಸ ವಿಲೇವಾರಿಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಅಂತಿಮವಾಗಿ ಲಕ್ಷ್ಮೀಪುರಂ ಬಡಾವಣೆಯ ಹೇಮಾವತಿ ನದಿ ದಂಡೆಯಲ್ಲಿ ಕಸ ವಿಲೇವಾರಿ ನಡೆಸಲಾಗುತ್ತಿತ್ತು.
ಆದರೆ, ಇಲ್ಲಿ ತ್ಯಾಜ್ಯ ವಿಲೇವಾರಿ ನಡೆಸುವುದರಿಂದ ನದಿ ಕಲುಷಿತಗೊಳ್ಳುತ್ತದೆ ಎಂದು ಆರೋಪಿಸಿದ ಸಂಘಟನೆಗಳು ಪುರಸಭೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ತಾತ್ಕಾಲಿಕವಾಗಿ ಪಟ್ಟಣದ ತ್ಯಾಜ್ಯವನ್ನು ಹಾಸನದ ಅಗಿಲೆ ಘನತ್ಯಾಜ್ಯ ಘಟಕಕ್ಕೆ ಸಾಗಿಸುವ ಯೋಜನೆ ರೂಪಿಸಿದ್ದರು.
ಸಕಾಲಕ್ಕೆ ವಿಲೇವಾರಿಯಾಗದ ಕಸ: ಈ ಹಿನ್ನೆಲೆಯಲ್ಲಿ ಕಸವನ್ನು ಪಟ್ಟಣದ ಸುಭಾಷ್ ಮೈದಾನದ ಪಕ್ಕದ ಜಾತ್ರೆ ಮೈದಾನದಲ್ಲಿ ತಂದು ಸುರಿಯಲಾಗುತ್ತಿದ್ದು ಇಲ್ಲಿಂದ ಹಾಸನದ ಅಗಿಲೆ ಘಟಕಕ್ಕೆ ಟಿಪ್ಪರ್‌ಗಳ ಮೂಲಕ ಕಸವನ್ನು ಕಳುಹಿಸಲಾಗುತ್ತಿದೆ. ಕೆಲವೊಮ್ಮೆ ಎರಡು, ಮೂರು ದಿನಕ್ಕೊಮ್ಮೆ ಕಸ ವಿಲೇವಾರಿ ಮಾಡುವುದರಿಂದ ಇಲ್ಲಿ ಕೆಲಸ ಮಾಡುವ ವರ್ತಕರು ಹಾಗೂ ಕಾರ್ಮಿಕರು ಕಸದ ವಾಸನೆಯಿಂದ ಮೂಗು ಮುಚ್ಚಿಕೊಂಡು ಕೆಲಸ ಮಾಡಬೇಕಾಗಿದೆ.
ಸೊಳ್ಳೆ, ನೊಣಗಳ ಹಾವಳಿ: ಕಸದ ಸಮಸ್ಯೆ ನಿವಾರಿಸುವಂತೆ ಎರಡು ಬಾರಿ ಪ್ರತಿಭಟನೆ ಮಾಡಿದರೂ ¿ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ತಂದು ಹಾಕುತ್ತಿರುವ ಕಸದಿಂದ ಅಪಾಯಕಾರಿ ಸೊಳ್ಳೆಗಳು ಹಾಗೂ ಇನ್ನಿತರ ಕ್ರಿಮಿ ಕೀಟಗಳು ಉತ್ಪತ್ತಿಯಾಗುತ್ತಿದ್ದು, ಇದರಿಂದ ಇಲ್ಲಿನ ಗ್ಯಾರೇಜ್ ಲೈನ್‌ನ ಕೆಲಸಗಾರರು ಡೆಂ à ಮೊದಲಾಸ ರೋಗಗಳಿಂದ ಬಳಲುತ್ತಿದ್ದಾರೆ.
ದನಕರುಗಳು ಈ ಕಸದ ರಾಶಿಯಲ್ಲಿ ಆಹಾರ ಹುಡುಕಿಕೊಂಡು ಪ್ಲಾಸ್ಟಿಕ್ ತಿಂದು ಸಾವಿಗೀಡಾಗುತ್ತಿವೆ. ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವ ಬದಲು ಇಲ್ಲಿಯ ಜನಪ್ರತಿನಿಧಿಗಳು ಅಧಿಕಾರಿಗಳು ಕಾಲ ಹರಣ ಮಾಡುತ್ತ ಪಟ್ಟಣದ ಹೃದಯ ಭಾಗದಲ್ಲಿ ಈ ರೀತಿ ಕಸವನ್ನು ತಂದು ಹಾಕುತ್ತಿರುವುದರಿಂದ ಅನಾರೋಗ್ಯಕ್ಕೆ ಆಹ್ವಾನ ನೀಡಿದಂತಾಗುತ್ತದೆ.
ಕಸದ ಸಮಸ್ಯೆ ನಿವಾರಣೆ ಕುರಿತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಅತಿ ಶೀಘ್ರದಲ್ಲಿ ಕಸ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲಾಗುತ್ತದೆ.
-ಸ್ಟೀಫನ್ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ
ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು.
-ಮಹಮದ್ ಆಲಿ, ಗ್ಯಾರೇಜ್ ಮಾಲೀಕ
* ಸುಧೀರ್ ಎಸ್.ಎಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.